ಚೆನ್ನೈ: ಪತ್ನಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತಿಯನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.
ಜೀವಿತಾ(24) ಮೃತ ಮಹಿಳೆ. ಈಕೆಯ ಪತಿ ಹರಿ ಬಂಧಿತ ಆರೋಪಿ. ಇವರಿಬ್ಬರು ತೊಂಡಿಯಾರ್ ಪೇಟೆಯಲ್ಲಿ ವಾಸಿಸುತ್ತಿದ್ದರು. ಹರಿ ತನ್ನ ಪತ್ನಿ ಸ್ನಾನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ನಗರ ಪೊಲೀಸ್ ಮಾಹಿತಿ ನೀಡಿದ್ದನು. ಆದರೆ ತನಿಖೆ ನಂತರ ಆರೋಪಿ ಪತಿ ಪೊಲೀಸರ ಬಲೆಗೆ ಬಿದಿದ್ದಾನೆ.
ಈ ಮಾಹಿತಿಯ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮಹಿಳೆಯ ಶವವನ್ನು ಹೊರತೆಗೆದು ಹೆಚ್ಚಿನ ವೈದ್ಯಕೀಯ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಜೀವಿತಾಳ ಪೋಷಕರು ಮೈ ಮೇಲೆ ಆದ ಗಾಯಗಳ ಗುರುತನ್ನು ಅನುಮಾನ ವ್ಯಕ್ತಪಡಿಸಿದ್ದರು. ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಿದ ಪೊಲೀಸರು ಹರಿಯನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ವೃದ್ಧ
ಈ ಬಗ್ಗೆ ಪ್ರಶ್ನಿಸಿದಾಗ ಆರೋಪಿಯು ಮೊದಲಿಗೆ ತಾನು ನಿರಪರಾಧಿ ಎಂದು ಪೊಲೀಸರ ಮುಂದೆ ಕಥೆ ಕಟ್ಟಿದ್ದಾನೆ. ತನಗೆ ಈ ಬಗ್ಗೆ ಏನು ತಿಳಿದಿಲ್ಲ ಎಂದು ಪೊಲೀಸರ ಗಮನವನ್ನು ಬೇರೆಡೆ ತಿರುಗಿಸಲು ಯತ್ನಿಸಿದ್ದಾನೆ. ನಂತರದಲ್ಲಿ ಅವಳನ್ನು ಕೊಂದು ನೇಣು ಬಿಗಿದಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಹರಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಪೆಗಾಸಸ್‌ಗೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ಗೆ ಮನವಿ