ಚೆನ್ನೈ: ಕಟ್ಟಡ (building Collapse) ಉರುಳಿ ಬಿದ್ದ ಪರಿಣಾಮ ಮಹಿಳಾ ಟೆಕ್ಕಿ (Woman Techie) ಯೊಬ್ಬರು ದುರ್ಮರಣಕ್ಕೀಡಾದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದಲ್ಲಿ ನಡೆದಿದೆ.
ಮೃತಳನ್ನು ಪದ್ಮ ಪ್ರಿಯಾ (22) ಎಂದು ಗುರುತಿಸಲಾಗಿದೆ. ಮಧುರೈ ನಿವಾಸಿಯಾಗಿರುವ ಈಕೆ ಸಾಫ್ಟ್ ವೇರ್ ಎಂಜಿನಿಯರ್ (Software Engineer) ಆಗಿ ಕೆಲಸ ಮಾಡುತ್ತಿದ್ದರು.
ಪದ್ಮಪ್ರಿಯ ಅವರು ತನ್ನ ಗೆಳತಿಯ ಜೊತೆಗೆ ಮೆಟ್ರೋ ಸ್ಟೇಷನ್ ಕಡೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕಟ್ಟಡ ಏಕಾಏಕಿ ಇವರ ಮೇಲೆ ಬಿದ್ದಿದೆ. ಕೂಡಲೇ ಸ್ಥಳೀಯರು ಅವರನ್ನು ರಕ್ಷಣೆ ಮಾಡಲು ಪ್ರಯತ್ನಿಸಿದ್ದಾರೆ. ಅಲ್ಲದೆ ಅಂಬುಲೆನ್ಸ್ (Ambulance) ಗೂ ಕರೆ ಮಾಡಿದ್ದಾರೆ. ಇದನ್ನೂ ಓದಿ: ATMನಿಂದ ಹಣ ಡ್ರಾ ಮಾಡಿ ಕೊಟ್ಟು ವೃದ್ಧನಿಗೆ ವಂಚಿಸಿದ ಸೆಕ್ಯೂರಿಟಿ ಗಾರ್ಡ್ – ದೋಚಿದ್ದು 2.50 ಲಕ್ಷ ರೂ.!
ಇತ್ತ ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಸ್ಥಳಕ್ಕೆ ದೌಡಾಯಿಸಿದ್ದಾರೆ. ನಂತರ ಕಟ್ಟಡದ ಅವಶೇಷಗಳಡಿಯಿಂದ ಹೊರತೆಗೆದು ಅಂಬುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದರು. ಆದರೆ ಅದಾಗಲೇ ಪದ್ಮ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಕಟ್ಟಡವನ್ನು ಕೆಡವಲು ಬಳಸುತ್ತಿದ್ದ ಯಂತ್ರಗಳ ಭಾರೀ ಕಂಪನದಿಂದಾಗಿ ಗೋಡೆ ಕುಸಿದಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಘಟನೆ ಸಂಬಂಧ ಥೌಸಂಡ್ ಲೈಟ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k