ಬೆಳಗಾವಿ/ಬೆಂಗಳೂರು: ಕಮರ್ಷಿಯಲ್ ಪ್ರಾಕ್ಟೀಸ್ ಡಿಪ್ಲೊಮಾ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ನೇರವಾಗಿ ಬಿ.ಕಾಂ. 3ನೇ ಸೆಮಿಸ್ಟರಿಗೆ ಪ್ರವೇಶ ಪಡೆಯಲು ಇದ್ದ ಕಾಲಾವಕಾಶವನ್ನು ಡಿ.23ರವರೆಗೆ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
Advertisement
ಈ ಬಗ್ಗೆ ಇಂದು ಮಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಸೂಚನೆಯಂತೆ ಕಡ್ಡಾಯ ಮುಚ್ಚಳಿಕೆ ಪತ್ರವನ್ನು ಬರೆಸಿಕೊಂಡು ಅರ್ಹ ವಿದ್ಯಾರ್ಥಿಗಳಿಗೆ ಪ್ರವೇಶ ಕೊಡಬಹುದು. ರಾಣಿ ಚೆನ್ನಮ್ಮ ವಿವಿ ವ್ಯಾಪ್ತಿಗೆ ಬರುವ ಕಾಲೇಜುಗಳು ಇಂತಹ ವಿದ್ಯಾರ್ಥಿಗಳ ಪಟ್ಟಿಯನ್ನು ನಂತರ ವಿಶ್ವವಿದ್ಯಾಲಯಕ್ಕೆ ಕಳಿಸಿಕೊಡಬೇಕು. ಬಳಿಕ ಇಂತಹ ಪ್ರವೇಶಗಳಿಗೆ ಅನುಮೋದನೆ ಕೊಡಲಾಗುವುದು ಎಂದರು. ಇದನ್ನೂ ಓದಿ: ಬೊಮ್ಮಾಯಿ ಭಾವನಾತ್ಮಕ ಹೇಳಿಕೆ ಹೃದಯ ಇದ್ದವರಿಗೆ ಮಾತ್ರ ಅರ್ಥವಾಗುತ್ತದೆ: ಎಚ್‍ಡಿಕೆ
Advertisement
Advertisement
ಈಗ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೂ ನಿಗದಿತ ಪಠ್ಯಕ್ರಮವನ್ನು ಸಂಪೂರ್ಣವಾಗಿ ಬೋಧಿಸಲಾಗುವುದು. ಆದ್ದರಿಂದ ಆಸಕ್ತ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ಸಚಿವರು ಈ ಕ್ರಮ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶ – ಕೈ ವಿರುದ್ಧ ಬಿಜೆಪಿ ಟ್ವೀಟ್ ದಾಳಿ
Advertisement