ಬೆಂಗಳೂರು: ಖ್ಯಾತ ಕವಿ ಚನ್ನವೀರ ಕಣವಿ ಅವರು ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಅವರನ್ನು ಜ.14ರಂದು ಧಾರವಾಡದ ಎಸ್‍ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ನಾಯಕರು ಸಂತಾಪವನ್ನು ಸೂಚಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, ನಾಡು ಕಂಡಂತಹ ಅತ್ಯಂತ ಸೃಜನಶೀಲ ಸಾಹಿತ್ಯ ರಚನೆಕಾರರು, ಚಂಬೆಳಕಿನ ಕವಿ, ನಾಡೋಜ ಶ್ರೀ ಚೆನ್ನವೀರ ಕಣವಿ ಅವರು ನಿಧನರಾದ ವಿಷಯ ತಿಳಿದು ತುಂಬಾ ದುಃಖಿತನಾಗಿದ್ದೇನೆ. ಸಾಹಿತ್ಯದ ಮುಖಾಂತರ ಅವರು ತಮ್ಮ ಕಲ್ಪನೆ ಹಾಗೂ ವಾಸ್ತವಾಂಶವನ್ನು ಪರಿಣಾಮಕಾರಿಯಾಗಿ ಬಿಂಬಿಸಿದ ಕವಿ ಆಗಿದ್ದರು. ಪ್ರಶಸ್ತಿಗಳಿಗೆ ಗೌರವ ಬರುವ ವ್ಯಕ್ತಿತ್ವ ಅವರದಾಗಿತ್ತು. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಬಹುದೊಡ್ಡ ಹಾನಿಯಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗು ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿಯೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.
Advertisement
ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಬಹುದೊಡ್ಡ ಹಾನಿಯಾಗಿದೆ.
ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗು ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿಯೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ
2/2
— Basavaraj S Bommai (@BSBommai) February 16, 2022
Advertisement
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಂತಾಪವನ್ನು ಸೂಚಿಸಿದ್ದು, ಕನ್ನಡ ಕಾವ್ಯಲೋಕದ ಚೆಂಬೆಳಕಾಗಿದ್ದ, ಸೌಹಾರ್ದತೆಯನ್ನು ಸಾರುತ್ತಾ ಸಮನ್ವಯ ಕವಿ ಎಂದೇ ಖ್ಯಾತರಾಗಿದ್ದ ಕವಿ ಚೆನ್ನವೀರ ಕಣವಿ ಅವರ ನಿಧನದಿಂದ ಅತೀವ ದು:ಖಕ್ಕೀಡಾಗಿದ್ದೇನೆ. ಅವರ ಕುಟುಂಬ ವರ್ಗದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ವಿಧಿವಶ
Advertisement
ಕನ್ನಡ ಕಾವ್ಯಲೋಕದ ಚೆಂಬೆಳಕಾಗಿದ್ದ, ಸೌಹಾರ್ದತೆಯನ್ನು ಸಾರುತ್ತಾ
ಸಮನ್ವಯ ಕವಿ
ಎಂದೇ ಖ್ಯಾತರಾಗಿದ್ದ
ಕವಿ ಚೆನ್ನವೀರ ಕಣವಿ ಅವರ ನಿಧನದಿಂದ ಅತೀವ ದು:ಖಕ್ಕೀಡಾಗಿದ್ದೇನೆ.
ಅವರ ಕುಟುಂಬ ವರ್ಗದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ.
ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. pic.twitter.com/1jkEl3AEK3
— Siddaramaiah (@siddaramaiah) February 16, 2022
Advertisement
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ಕನ್ನಡದ ಸಾಹಿತ್ಯ ಲೋಕದ ನಕ್ಷತ್ರದಂತಿದ್ದ ಚನ್ನವೀರ ಕಣವಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಅವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ಬಹು ದೊಡ್ಡ ನಷ್ಟ. ವಿಮರ್ಶೆಗಳ ಜೊತೆಗೆ ಕಾವ್ಯಗಳು, ಸುನೀತಗಳನ್ನು ಬರೆಯುತ್ತಿದ್ದ ಕಣವಿ ಅವರು ಕಾವ್ಯಾಕ್ಷಿ, ಆಕಾಶಬುಟ್ಟಿ, ಹೊಂಬೆಳಕು, ನೆಲ ಮುಗಿಲು ಸೇರಿದಂತೆ ಹತ್ತು ಹಲವು ಕಾವ್ಯ ಸಂಕಲನ ರಚಿಸಿದ್ದಾರೆ. 1996ರ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಕಣವಿ ಅವರು ಸಾಹಿತ್ಯ ಲೋಕದಲ್ಲಿ ಸಲ್ಲಿಸಿದ್ದ ಸೇವೆಗೆ ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಕವಿರತ್ನ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪುರಸ್ಕಾರಗಳು ಅವರ ಮುಕುಟ ಅಲಂಕರಿಸಿದ್ದವು. ಕಣವಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರು, ಬಂಧುಗಳು ಹಾಗೂ ಸಾಹಿತ್ಯ ಅಭಿಮಾನಿಗಳಿಗೆ ಅವರ ಅಗಲಿಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ನೆಲಮಂಗಲ ಫ್ಲೈಓವರ್ ಬಗ್ಗೆ ಮಾಹಿತಿ ನೀಡಿ ಟ್ವೀಟ್ ಡಿಲೀಟ್ ಮಾಡಿದ ಸಿಎಂ
ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ, ಆಧುನಿಕ ಕನ್ನಡ ಕಾವ್ಯದ ಮೇರು ಪ್ರತಿಭೆಗಳಲ್ಲಿ ಒಬ್ಬರು, ಹೊಂಬೆಳಕಿನ ಕವಿ, ಸುನೀತಗಳ ಸಾಮ್ರಾಟರೆಂದೇ ಕನ್ನಡಿಗರ ಮನಸ್ಸುಗಳಲ್ಲಿ ತುಂಬಿಹೋಗಿರುವ ನಾಡೋಜ ಚನ್ನವೀರ ಕಣವಿ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಣವಿ ಅವರು ಚೇತರಿಸಿಕೊಂಡು ಕ್ಷೇಮವಾಗಿ ಮನೆಗೆ ಮರಳುತ್ತಾರೆಂಬ ನಮ್ಮೆಲ್ಲರ ನಿರೀಕ್ಷೆಯನ್ನು ಹುಸಿ ಮಾಡಿ ಅಗಲಿದ್ದಾರೆ. ಅವರಿಲ್ಲದಿರುವಿಕೆ ಕನ್ನಡ ಸಾರಸ್ವತ ಲೋಕದಲ್ಲಿ ದೊಡ್ಡ ಶೂನ್ಯವನ್ನೇ ಸೃಷ್ಟಿ ಮಾಡಿದೆ ಎನ್ನುವುದು ನನ್ನ ಅಭಿಪ್ರಾಯ ಎಂದು ಸಂತಾಪವನ್ನು ವ್ಯಕ್ತಪಡಿಸಿದರು.
ಆಧುನಿಕ ಕನ್ನಡ ಕಾವ್ಯದ ಮೇರು ಪ್ರತಿಭೆಗಳಲ್ಲಿ ಒಬ್ಬರು, ಹೊಂಬೆಳಕಿನ ಕವಿ, ಸುನೀತಗಳ ಸಾಮ್ರಾಟರೆಂದೇ ಕನ್ನಡಿಗರ ಮನಸ್ಸುಗಳಲ್ಲಿ ತುಂಬಿಹೋಗಿರುವ ನಾಡೋಜ ಚನ್ನವೀರ ಕಣವಿ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. 1/3 pic.twitter.com/TAo0nG4ZpO
— H D Kumaraswamy (@hd_kumaraswamy) February 16, 2022
ಸಚಿವ ಗೋವಿಂದ ಕಾರಜೋಳ ಮಾತನಾಡಿ, ನಾಡೋಜ ಚನ್ನವೀರಕಣವಿ ನಿಧನ ನೋವಾಗಿದೆ. ಒಬ್ಬ ಶ್ರೇಷ್ಟ ಸಾಹಿತಿಯಾಗಿದ್ದರು. ಮಹನೀಯರ ಅಗಲಿಕೆ ಕನ್ನಡ ನಾಡಿಗೆ ದೊಡ್ಡ ನಷ್ಟ ಎಂದರು. ಖ್ಯಾತ ಕವಿ ಚನ್ನವೀರ ಕಣವಿ ಅಂತ್ಯಕ್ರಿಯೆ ಪೋಲೀಸ್ ಗೌರವಗಳೊಂದಿಗೆ ನಡೆಸಲು ಸರ್ಕಾರ ತೀರ್ಮಾನ ನಡೆಸಿದೆ.