ಧಾರವಾಡ: ಹಿರಿಯ ಕವಿ ನಾಡೋಜ ಡಾ. ಚೆನ್ನವೀರ ಕಣವಿ ವಿಧಿವಶ ಹಿನ್ನೆಲೆಯಲ್ಲಿ ಸಂಜೆ ತೋಟದ ಮನೆಯಲ್ಲಿ ಅಂತ್ಯಕ್ರಿಯೆ ಮಾಡುವುದಾಗಿ ಚೆನ್ನವೀರ ಕಣವಿ ಪುತ್ರ ಪ್ರಿಯದರ್ಶಿ ತಿಳಿಸಿದ್ದಾರೆ.
Advertisement
ಕಳೆದ ಜನವರಿ 15 ರಂದು ಅನಾರೋಗ್ಯದ ಕಾರಣ ಚೆನ್ನವೀರ ಕಣವಿ ಧಾರವಾಡ ಎಸ್‍ಡಿಎಂ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ನಂತರ ಅವರಿಗೆ ಕೊರೊನಾ ಪಾಸಿಟಿವ್ ಕೂಡಾ ಬಂದಿತ್ತು. ಈ ಹಿನ್ನೆಲೆ ಅವರಿಗೆ ಐಸಿಯುದಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ತದನಂತರ ಕೊರೊನಾ ನೆಗೆಟಿವ್ ಬಂದ ಮೇಲೂ ಉಸಿರಾಟದ ತೊಂದರೆ ಹಾಗೂ ಕಿಡ್ನಿ ಸಮಸ್ಯೆಯಿಂದ ಕಣವಿ ಆಸ್ಪತ್ರೆಯಲ್ಲೇ ದಾಖಲಾಗಿದ್ದರು. ಆದರೆ ಇಂದು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಚೆಂಬೆಳಕಿನ ಕವಿಯನ್ನು ಸಿನಿಮಾ ರಂಗ ಅಪ್ಪಿಕೊಳ್ಳಲಿಲ್ಲ
Advertisement
Advertisement
ಕುಟುಂಬದವರು ಎಲ್ಲರೂ ಚೆನ್ನವೀರ ಕಣವಿ ಅವರ ಅಂತ್ಯಕ್ರಿಯೆ ಸೃಷ್ಟಿ ತೋಟದಲ್ಲಿರುವ ಕಣವಿ ಅವರ ಪತ್ನಿ ಶಾಂತಾದೇವಿ ಕಣವಿ ಅವರ ಸಮಾಧಿ ಪಕ್ಕದಲ್ಲೇ ಮಾಡುವುದಾಗಿ ನಿರ್ಧಾರ ಮಾಡಿದ್ದಾರೆ. ಇನ್ನು ಆಸ್ಪತ್ರೆಯಿಂದ ಧಾರವಾಡ ಕಲ್ಯಾಣನಗರದ ಮನೆಗೆ ಪಾರ್ಥಿವ ಪೂಜೆ ಮಾಡಿದ ನಂತರ, ಕಣವಿ ಅವರ ಪಾರ್ಥಿವ ಶರೀರವನ್ನು ಕೆಸಿಡಿ ಮೈದಾನಕ್ಕೆ ತಂದು ಅಂತಿಮ ದರ್ಶನಕ್ಕೆ ಇಡಲಾಗಿದೆ. ಇದನ್ನೂ ಓದಿ: ಸುನೀತಗಳ ಸಾಮ್ರಾಟ್ ಚನ್ನವೀರ ಕಣವಿ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು