ಬೆಂಗಳೂರು: ಚೆಕ್ ಬೌನ್ಸ್ (Check Bounce) ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪಗೆ (Madhu Bangarappa) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 6.96 ಕೋಟಿ ರೂ. ದಂಡ (Fine) ವಿಧಿಸಿ ಆದೇಶ ಪ್ರಕಟಿಸಿದೆ.
2011 ರಲ್ಲಿ ಆಕಾಶ್ ಆಡಿಯೋ ಪರವಾಗಿ ರಾಜೇಶ್ ಎಕ್ಸ್‌ಪೋರ್ಟ್ (Rajesh Exports) ಕಂಪನಿಯಿಂದ ಮಧುಬಂಗಾರಪ್ಪ 6.60 ಕೋಟಿ ರೂ. ಸಾಲವನ್ನು ಪಡೆದುಕೊಂಡಿದ್ದರು. ಸಾಲ ಪಡೆಯುವ ಸಂದರ್ಭದಲ್ಲಿ ಮಧು ಬಂಗಾರಪ್ಪ ಚೆಕ್ ನೀಡಿ ಹಣವನ್ನು ಹಿಂದಿರುಗಿಸಿರಲಿಲ್ಲ. ಇದನ್ನೂ ಓದಿ: Ram Mandir Inauguration: ಈ ಐವರಿಗೆ ಮಾತ್ರ ರಾಮಮಂದಿರದ ಗರ್ಭಗುಡಿ ಪ್ರವೇಶಕ್ಕೆ ಅವಕಾಶ
Advertisement
Advertisement
ಮಧು ಬಂಗಾರಪ್ಪ ಅವರು 6.60 ಕೋಟಿ ರೂ. ಮೊತ್ತದಲ್ಲಿ ಕೇವಲ 50 ಲಕ್ಷ ರೂ.ವನ್ನು ಮಾತ್ರ ಮರುಪಾವತಿಸಿ ಉಳಿದ ಮೊತ್ತವನ್ನು ಕೊಟ್ಟಿರಲಿಲ್ಲ. ಈ ನಡುವೆ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿದಿತ್ತು.
Advertisement
ಸುದೀರ್ಘ ವಿಚಾರಣೆ ಬಳಿಕ ಆದೇಶ ನೀಡಿದ ನ್ಯಾಯಾಲಯ ಮಧು ಬಂಗಾರಪ್ಪ ಅವರಿಗೆ 6,96,70,000 ರೂ. ಹಣವನ್ನು ದಂಡವಾಗಿ ಪಾವತಿಸಬೇಕು. ದಂಡ ಪಾವತಿಸದಿದ್ದರೆ 6 ತಿಂಗಳು ಸೆರೆವಾಸ ಅನುಭವಿಸಲು ಆದೇಶ ನೀಡಿದೆ.
Advertisement
ಈ ದಂಡದ ಹಣದಲ್ಲಿ 6,96,60,000 ರೂ.ದೂರುದಾರರಿಗೆ ಪರಿಹಾರವಾಗಿ ನೀಡಬೇಕು, ಉಳಿದ 10,000 ರೂ. ಸರ್ಕಾರಕ್ಕೆ ದಂಡವಾಗಿ ನೀಡಲು ಆದೇಶವನ್ನು ನೀಡಿದೆ.