ಬೆಂಗಳೂರು: ಭಾರತಕ್ಕೆ ಕ್ರಿಕೆಟ್ನಲ್ಲಿ ಮೀಸಲಾತಿ (Cricket Reservations) ಇದ್ದಿದ್ದರೇ ಟೀಂ ಇಂಡಿಯಾ ಸುಲಭವಾಗಿ ಈ ವಿಶ್ವಕಪ್ ಗೆಲ್ಲುತ್ತಿತ್ತು ಎಂದು ಪುನರುಚ್ಛರಿಸಿರುವ ನಟ ಚೇತನ್ (Chetan Kumar) ಟೀಂ ಇಂಡಿಯಾ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
I repeat, India needs reservations in cricket
If India had cricket reservations, India would’ve easily won this #WorldCup
ನಾನು ಮತ್ತೆ ಹೇಳುತಿದ್ದೇನೆ, ಭಾರತಕ್ಕೆ ಕ್ರಿಕೆಟ್ನಲ್ಲಿ ಮೀಸಲಾತಿ ಅಗತ್ಯವಿದೆ
ಭಾರತಕ್ಕೆ ಕ್ರಿಕೆಟ್ನಲ್ಲಿ ಮೀಸಲಾತಿ ಇದ್ದಿದ್ದರೆ ಭಾರತ ಸುಲಭವಾಗಿ ಈ ವಿಶ್ವ ಕಪ್ಪನ್ನು ಗೆಲ್ಲುತ್ತಿತ್ತು
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) November 19, 2023
Advertisement
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲನುಭವಿಸಿದೆ. ಕೋಟ್ಯಂತರ ಅಭಿಮಾನಿಗಳಿಗೆ ಟೀಂ ಇಂಡಿಯಾದ (Team India) ಸೋಲು ನೋವು ತರಿಸಿದ್ದು, ಕಣ್ಣೀರ ಕಡಲಲ್ಲಿ ತೇಲುವಂತೆ ಮಾಡಿದೆ. ಆದ್ರೆ ಆಗಾಗ್ಗೆ ಜಾಲತಾಣದಲ್ಲಿ ಹೇಳಿಕೆ ನೀಡಿ ಟೀಕೆಗೆ ಗುರಿಯಾಗುತ್ತಿರುವ ನಟ ಚೇತನ್ ಮತ್ತೊಮ್ಮೆ ಕ್ರಿಕೆಟ್ನಲ್ಲಿ ಮೀಸಲಾತಿ ತರಬೇಕೆಂಬ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ: World Cup 2023: ನಾವು ಯಾವಾಗಲೂ ನಿಮ್ಮೊಂದಿಗಿರುತ್ತೇವೆ – ಟೀಂ ಇಂಡಿಯಾಕ್ಕೆ ಮೋದಿ ಅಭಯ
Advertisement
Advertisement
ಈ ಕುರಿತು ಸೋಶಿಯಲ್ ಮೀಡಿಯಾ ಎಕ್ಸ್ನಲ್ಲಿ ಬರೆದುಕೊಂಡಿರುವ ಚೇತನ್, ನಾನು ಮತ್ತೆ ಹೇಳುತಿದ್ದೇನೆ, ಭಾರತಕ್ಕೆ ಕ್ರಿಕೆಟ್ನಲ್ಲಿ ಮೀಸಲಾತಿ ಅಗತ್ಯವಿದೆ. ಭಾರತಕ್ಕೆ ಕ್ರಿಕೆಟ್ನಲ್ಲಿ ಮೀಸಲಾತಿ ಇದ್ದಿದ್ದರೆ ಭಾರತ ಸುಲಭವಾಗಿ ಈ ವಿಶ್ವ ಕಪ್ಪನ್ನು ಗೆಲ್ಲುತ್ತಿತ್ತು ಎಂದು ಪುನರುಚ್ಛರಿಸಿದ್ದಾರೆ. ಇದಕ್ಕೆ ಬೆರಳೆಣಿಯಷ್ಟು ಮಂದಿ ಬೆಂಬಲ ಸೂಚಿಸಿದ್ದರೆ, ಟೀಂ ಇಂಡಿಯಾ ಕ್ರಿಕೆಟ್ ಫ್ಯಾನ್ಸ್ ಟೀಕಾಪ್ರಹಾರ ನಡೆಸಿದ್ದಾರೆ. ಇದನ್ನೂ ಓದಿ: World Cup 2023: ಆಸ್ಟ್ರೇಲಿಯಾ ಗೆಲುವಿಗೆ ಕಾರಣಗಳೇನು..?
Advertisement
ಎಂತೆಂತಹ ಮನೋ ರೋಗಿಗಳನ್ನು ವೈದ್ಯರು ಗುಣಪಡಿಸಿದ್ದಾರೆ, ಸಾಧ್ಯವಾದರೆ ಇವರನ್ನು ಗುಣಪಡಿಸಬೇಕು. ಏಕೆಂದರೆ ಇಂತಹ ಪ್ರತಿಭೆ ನಮ್ಮನ್ನು ಬಿಟ್ಟು ಹೋಗಬಾರದು ಎಂದು ತಿವಿದಿದ್ದಾರೆ. ಅಲ್ಲದೇ ನೆಮ್ಮದಿಯಾಗಿ ಅಳೋಕು ಈ ಜನ ಬಿಡ್ತಿಲ್ಲ, ಅಣ್ಣ ರಿಸರ್ವೇಶನ್ ಕ್ರಿಕೆಟ್ ಅಲ್ಲಿ ಬೇಕು ಅಂತ ಅಂಬೇಡ್ಕರ್ ಹೇಳಿದ್ರಾ? ಪೆರಿಯಾರ್ ಹೇಳಿದ್ರಾ? ಎಂದು ಪ್ರಶ್ನೆ ಮಾಡಿದ್ದಾರೆ.
ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 50 ಓವರ್ಗಳಲ್ಲಿ 240 ರನ್ಗಳಿಗೆ ತನ್ನೆಲ್ಲಾ ವಿಕೆಟ್ಗಳನ್ನು ಕಳೆದುಕೊಂಡಿತು. ಈ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 43 ಓವರ್ಗಳಲ್ಲೇ 4 ವಿಕೆಟ್ ನಷ್ಟಕ್ಕೆ 241 ರನ್ ಗಳಿಸಿ ಗೆಲುವು ಸಾಧಿಸಿತು. ಈ ಮೂಲಕ 6ನೇ ಬಾರಿಗೆ ಏಕದಿನ ವಿಶ್ವಕಪ್ ಟೂರ್ನಿ ಟ್ರೋಫಿ ಗೆಲ್ಲುವ ಕನಸನ್ನು ನನಸು ಮಾಡಿಕೊಂಡಿತು. ಇದನ್ನೂ ಓದಿ: 140 ಕೋಟಿ ಭಾರತೀಯರ ಕನಸು ಭಗ್ನ – ವಿಶ್ವ ವಿಜೇತ ಆಸ್ಟ್ರೇಲಿಯಾ