ಹಾಸನ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ, ಫೋಟೋಗಳಿರುವ ಪೆನ್‌ಡ್ರೈವ್ (Pendrive Case) ಹಂಚಿಕೆ ಪ್ರಕರಣದ ಆರೋಪಿಗಳಾದ ಚೇತನ್ ಹಾಗೂ ಲಿಖಿತ್ ಗೌಡಗೆ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು (Bail) ಮಂಜೂರಾಗಿದೆ.
ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಆರು ಮತ್ತು ಏಳನೇ ಆರೋಪಿಗಳಾಗಿದ್ದ ಮಾಜಿ ಶಾಸಕ ಪ್ರೀತಂಗೌಡ ಅವರ ಆಪ್ತರಾದ ಯಲಗುಂದ ಚೇತನ್ ಹಾಗೂ ಲಿಖಿತ್‌ಗೌಡರನ್ನು ಮೇ 12 ರಂದು ಎಸ್‌ಐಟಿ ತಂಡ ಬಂಧಿಸಿ ವಿಚಾರಣೆ ನಡೆಸಿದ ನಂತರ ನ್ಯಾಯಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಇದನ್ನೂ ಓದಿ: ಡೆತ್‌ನೋಟ್‌ನಲ್ಲಿರುವ ನಾಗರಾಜ್ ಜೊತೆ ನಾಗೇಂದ್ರಗೆ ವ್ಯವಹಾರ ಇದೆ: ಸಿಟಿ ರವಿಯಿಂದ ಫೋಟೋ ರಿಲೀಸ್
ಹದಿನೆಂಟು ದಿನಗಳ ಬಳಿಕ ಇಬ್ಬರು ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ. ಸದ್ಯ ಹಾಸನದ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಚೇತನ್ ಹಾಗೂ ಲಿಖಿತ್‌ಗೌಡ ಇದ್ದು, ಇಂದು ಸಂಜೆ ಅಥವಾ ನಾಳೆ (ಶುಕ್ರವಾರ) ಇಬ್ಬರೂ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಇಬ್ಬರು ಆರೋಪಿಗಳ ಪರ ವಕೀಲ ಹರೀಶ್ ಬಾಬು ವಾದ ಮಂಡಿಸಿದ್ದರು. ಇದನ್ನೂ ಓದಿ: ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ಮಾಡಲ್ಲ: ಎಂಬಿ ಪಾಟೀಲ್