– ಏಕದಿನ ಕ್ರಿಕೆಟ್ ತಂಡದಲ್ಲಿ ಸಂಜು ಸ್ಯಾಮ್ಸನ್‌ಗೆ ಚಾನ್ಸ್
ಮುಂಬೈ: ಜುಲೈನಲ್ಲಿ ವೆಸ್ಟ್ ಇಂಡೀಸ್ (West Indies) ವಿರುದ್ಧ ನಡೆಯಲಿರುವ 2 ಪಂದ್ಯಗಳ ಟೆಸ್ಟ್ ಸರಣಿಗೆ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿಗೆ ತಲಾ 16 ಸದಸ್ಯರ ಭಾರತ ತಂಡವನ್ನ (Team India) ಬಿಸಿಸಿಐ (BCCI) ಪ್ರಕಟಿಸಿದೆ.
India’s ODI Squad: Rohit Sharma (Capt), Shubman Gill, Ruturaj Gaikwad, Virat Kohli, Surya Kumar Yadav, Sanju Samson (wk), Ishan Kishan (wk), Hardik Pandya (VC), Shardul Thakur, R Jadeja, Axar Patel, Yuzvendra Chahal, Kuldeep Yadav, Jaydev Unadkat, Mohd. Siraj, Umran Malik, Mukesh… pic.twitter.com/PGRexBAGFZ
— BCCI (@BCCI) June 23, 2023
Advertisement
ವಿಂಡೀಸ್ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ ಐಪಿಎಲ್‌ನಲ್ಲಿ (IPL 2023) ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಮಿಂಚಿದ ಯಶಸ್ವಿ ಜೈಸ್ವಾಲ್ (Yashasvi Jaiswal) ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಆದ್ರೆ ಆಸ್ಟ್ರೇಲಿಯಾ (Australia) ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಿಂದಲೂ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಚೇತೇಶ್ವರ್ ಪೂಜಾರ ಸ್ಥಾನ ಕಳೆದುಕೊಂಡಿದ್ದಾರೆ. ಒಂದು ಕಾಲದಲ್ಲಿ ಪಾನಿಪುರಿ ಮಾರಾಟ ಮಾಡುತ್ತಿದ್ದ ಹುಡುಗ ಕೊನೆಗೂ ಸತತ ಶ್ರಮದಿಂದ ಟೀಂ ಇಂಡಿಯಾದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ʻಯಶಸ್ವಿʼಯಾಗಿದ್ದಾರೆ.
Advertisement
NEWS – India’s squads for West Indies Tests and ODI series announced.
TEST Squad: Rohit Sharma (Capt), Shubman Gill, Ruturaj Gaikwad, Virat Kohli, Yashasvi Jaiswal, Ajinkya Rahane (VC), KS Bharat (wk), Ishan Kishan (wk), R Ashwin, R Jadeja, Shardul Thakur, Axar Patel, Mohd.… pic.twitter.com/w6IzLEhy63
— BCCI (@BCCI) June 23, 2023
Advertisement
ಇನ್ನೂ ದೀರ್ಘಕಾಲದಿಂದ ಟೀಂ ಇಂಡಿಯಾ ಸೇರಲು ವಿಫಲವಾಗಿದ್ದ ಸಂಜು ಸ್ಯಾಮ್ಸನ್ (Sanju Samson) ವಿಂಡೀಸ್ ವಿರುದ್ಧ ಏಕದಿನ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಮತ್ತೊಂದೆಡೆ ಯುವ ವೇಗಿ ಆಕಾಶ್ ದೀಪ್ ಅವರಿಗೂ ಟೆಸ್ಟ್ ತಂಡದಲ್ಲಿ ಅವಕಾಶ ಕಲ್ಪಿಸಲಾಗಿದೆ.
Advertisement
2023ರ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಗೇಮ್ ಚೇಂಜರ್ ಪಾತ್ರ ವಹಿಸಿದ ಹಾಗೂ 2ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಅರ್ಧಶತಕ ಸೇರಿದಂತೆ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಅಜಿಂಕ್ಯ ರಹಾನೆ ಉಪನಾಯಕನ ಪಟ್ಟ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: T20 ಕ್ರಿಕೆಟ್‌ನಲ್ಲಿ ಸಿಕ್ಸರ್ ಬ್ಲಾಸ್ಟ್ – ಒಂದೇ ಓವರ್‌ನಲ್ಲಿ 6,6,6,6,6 ಚಚ್ಚಿದ RCB ಸ್ಟಾರ್
ರಣಜಿ ಟ್ರೋಫಿ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ರನ್ ಹೊಳೆ ಹರಿಸಿರುವ ಐಪಿಎಲ್ ಹೀರೋ ಯಶಸ್ವಿ ಜೈಸ್ವಾಲ್, ಇತ್ತೀಚೆಗೆ ಮುಕ್ತಾಯವಾಗಿದ್ದ 2023ರ ಐಪಿಎಲ್ ಟೂರ್ನಿಯಲ್ಲಿಯೂ ರಾಜಸ್ಥಾನ್ ರಾಯಲ್ಸ್ ಪರ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಭಾರತ ತಂಡದಲ್ಲಿ ಚೇತೇಶ್ವರ್ ಪೂಜಾರ ಅವರ ಸ್ಥಾನಕ್ಕೆ ಜೈಸ್ವಾಲ್ ಅವರನ್ನು ಆಯ್ಕೆ ಮಾಡಲಾಗಿದೆ. ಆ ಮೂಲಕ 21ರ ಪ್ರಾಯದ ಯುವ ಆಟಗಾರನಿಗೆ ದೀರ್ಘಾವಧಿ ಅವಕಾಶ ನೀಡಲು ಬಿಸಿಸಿಐ ತೀರ್ಮಾನಿಸಿದೆ.
ಸಿಎಸ್‌ಕೆ ತಂಡದಲ್ಲಿ ಐಪಿಎಲ್ ಹೀರೋ ಆಗಿದ್ದ ಋತುರಾಜ್ ಗಾಯಕ್ವಾಡ್, ವಿಕೆಟ್ ಕೀಪರ್-ಬ್ಯಾಟ್ಸ್‌ಮನ್‌ಗಳಾಗಿ ಕೆ.ಎಸ್ ಭರತ್ ಹಾಗೂ ಇಶಾನ್ ಕಿಶನ್ ಸ್ಥಾನ ಪಡೆದುಕೊಂಡಿದ್ದಾರೆ. ಜೊತೆಗೆ ರವೀಂದ್ರ ಜಡೇಜಾ, ಆರ್. ಅಶ್ವಿನ್ ಹಾಗೂ ಅಕ್ಷರ್ ಪಟೇಲ್ ಅವರು ಸ್ಪಿನ್ ಆಲ್‌ರೌಂಡರ್‌ಗಳಾಗಿ ಸ್ಥಾನ ಉಳಿಸಿಕೊಂಡಿದ್ದಾರೆ. ಯುವ ವೇಗಿ ಮುಖೇಶ್ ಕುಮಾರ್ ಅವರು ಟೆಸ್ಟ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ವೇಗದ ಬೌಲಿಂಗ್‌ನಲ್ಲಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಜಯದೇವ್ ಉನಾದ್ಕಟ್ ತಮ್ಮ ಸ್ಥಾನಗಳನ್ನು ಭದ್ರಪಡಿಸಿಕೊಂಡಿದ್ದಾರೆ. ಶಾರ್ದುಲ್ ಠಾಕೂರ್ ವೇಗದ ಬೌಲಿಂಗ್ ಆಲ್‌ರೌಂಡರ್ ಆಗಿ ತಂಡದಲ್ಲಿ ಉಳಿದಿದ್ದಾರೆ. ಏಕದಿನ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಉಪನಾಯಕನಾಗಿ ಸ್ಥಾನ ಉಳಿಸಿಕೊಂಡಿದ್ದಾರೆ.
ಭಾರತ ಟೆಸ್ಟ್ ತಂಡ:
ರೋಹಿತ್ ಶರ್ಮಾ (ನಾಯಕ) (Rohit Sharma), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆ.ಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ. ಇದನ್ನೂ ಓದಿ: ICC ಟೂರ್ನಿಗಳಲ್ಲಿ ಟೀಂ ಇಂಡಿಯಾ ಫೇಲ್ ಆಗ್ತಿರೋದೇಕೆ? – ಕಾರಣ ತಿಳಿಸಿದ ChatGPT
ಭಾರತ ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.