ಪಾಟ್ನಾ: ಜಾತ್ರೆ ಮುಗಿಸಿ ಮನೆಗೆ ಮರಳುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಇಬ್ಬರು ಕಾಮುಕರನ್ನು ಬಿಹಾರ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಬಿಹಾರದ ಚಪ್ರಾ ಜಿಲ್ಲೆಯಲ್ಲಿ ಇದೇ ತಿಂಗಳು 18ರಂದು ಘಟನೆ ನಡೆದಿದ್ದು, ಬಾಲಕಿ ತನ್ನ ಪೋಷಕರಿಗೆ ಶನಿವಾರ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತಕ್ಷಣವೇ ಬಾಲಕಿಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಜಾತ್ರೆ ಮುಗಿಸಿ ನಾನು ಮನೆಗೆ ತೆರಳುತ್ತಿದ್ದೆ. ಈ ವೇಳೆ ದಾರಿಯ ಮಧ್ಯೆ ಬಂದ ಇಬ್ಬರು, ಮಾರಕಾಸ್ತ್ರಗಳನ್ನು ಹಿಡಿದು, ನನ್ನನ್ನು ಹೆದರಿಸಿ ಅಪಹರಣ ಮಾಡಿದರು. ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿ, ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಸಂತ್ರಸ್ತ ಬಾಲಕಿ ದೂರಿದ್ದಾಳೆ.
Bihar: Two men were arrested yesterday for allegedly raping a minor girl in Chhapra while she was returning to her home from a fair. pic.twitter.com/xdfOGf1YEZ
— ANI (@ANI) October 21, 2018
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಇಂತಹದ್ದೇ ಪ್ರಕರಣವೊಂದು ಬಿಹಾರದ ಚಿತ್ರಂಜನ್ ಎಂಬಲ್ಲಿ ನಡೆದಿದ್ದು, ಕಾಮುಕರಿಂದ ತಪ್ಪಿಸಿಕೊಳ್ಳಲು ಹೋಗಿ 9ನೇ ತರಗತಿ ವಿದ್ಯಾರ್ಥಿನಿ ಮೂರು ಅಂತಸ್ತಿನ ಕಟ್ಟದಿಂದ ಜಿಗಿದಿದ್ದಳು. ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಇದನ್ನು ಓದಿ: ಕಾಮುಕರಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಯಿಂದ ಹಾರಿದ್ಳು- ಹೈ ವೋಲ್ಟೆಜ್ ತಂತಿಯಲ್ಲಿ ಸಿಲುಕಿಕೊಂಡ ಬಾಲಕಿ
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv