ಬೆಂಗಳೂರು: ಸ್ಯಾಂಕಿ ಕೆರೆ ಸಿಗ್ನಲ್ ಬಳಿ ಇರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಬಳಿದಿರುವ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಹಿಂದೂ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಬಳಿದಿರುವ ಘಟನೆ ಖಂಡನೀಯ.
ತಾಯ್ನಾಡಿನ ರಕ್ಷಣೆಗಾಗಿ ಹಾಗೂ ಹಿಂದೂಸ್ಥಾನವನ್ನು ಒಗ್ಗೂಡಿಸಲು ಶ್ರಮಿಸಿದ ಹೆಮ್ಮೆಯ ನಾಯಕ ಶಿವಾಜಿ ಮಹಾರಾಜರು. ಆದರೆ ಇಂತಹ ಅಪ್ರತಿಮ ವೀರರ ಪ್ರತಿಮೆಗೆ ಮಸಿ ಬಳಿದಿರುವುದು ಆಪಾದನೀಯ. pic.twitter.com/sAQDzHN63g
— Shashikala Jolle (@ShashikalaJolle) December 18, 2021
Advertisement
ಈ ಘಟನೆಯಿಂದ ಎಚ್ಚೆತ್ತುಕೊಂಡ ಬೆಂಗಳೂರು ಪೊಲೀಸರು ಸ್ಯಾಂಕಿ ಕರೆ ಸಿಗ್ನಲ್ ಬಳಿ ಇರೋ ಶಿವಾಜಿ ಪ್ರತಿಮೆಗೆ ಬಿಗಿ ಭದ್ರತೆಯನ್ನು ಒದಗಿಸಿದ್ದಾರೆ. ಭದ್ರತೆಗಾಗಿ ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ
Advertisement
ಪ್ರಕರಣದ ಕುರಿತು ಸೂಕ್ತ ರೀತಿಯಲ್ಲಿ ತನಿಖೆ ನಡೆದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾನ್ಯ ಗೃಹ ಸಚಿವರಾದ ಶ್ರೀ @JnanendraAraga ಅವರಿಗೆ ಮನವಿ ಮಾಡುತ್ತೇನೆ. #ChhatrapatiShivajiMaharaj
— Shashikala Jolle (@ShashikalaJolle) December 18, 2021
Advertisement
ಮುಜರಾಯಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಟ್ವೀಟ್ ಮಾಡಿ, ಬೆಂಗಳೂರಿನಲ್ಲಿ ಹಿಂದೂ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಬಳಿದಿರುವ ಘಟನೆ ನಡೆದಿದೆ. ಯಾತ್ನಾಡಿನ ರಕ್ಷಣೆಗಾಗಿ ಹಾಗೂ ಹಿಂದೂಸ್ಥಾನವನ್ನು ಒಗ್ಗೂಡಿಸಲು ಶ್ರಮಿಸಿದ ಹೆಮ್ಮೆಯ ನಾಯಕ ಶಿವಾಜಿ ಮಹಾರಾಜರು. ಆದರೆ ಇಂತಹ ಅಪ್ರತಿಮ ವೀರರ ಪ್ರತಿಮೆಗೆ ಮಸಿ ಬಳಿದಿರುವುದು ಆಪಾದನೀಯವಾಗಿದೆ. ಪ್ರಕರಣ ಕುರಿತಾಗಿ ಸೂಕ್ತ ರೀತಿಯಲ್ಲಿ ತನಿಖೆ ನಡೆದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಮಾಡುತ್ತೇನೆ ಎಂದಿದ್ದಾರೆ.