ನವದೆಹಲಿ: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿಯುವ ಕೃತ್ಯವನ್ನು ಯಾರೂ ಸಹಿಸುವುದಿಲ್ಲ, ಇದು ನಿಜಕ್ಕೂ ಖಂಡನಾರ್ಹ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಷಿ ವಿರೋಧ ವ್ಯಕ್ತಪಡಿಸಿದ್ದಾರೆ.
Advertisement
ಬೆಂಗಳೂರಿನ ಸ್ಯಾಂಕಿ ಕೆರೆ ಬಳಿಯ ಛತ್ರಪತಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಕೃತ್ಯಕ್ಕೆ ಸಂಬಂಧಿಸಿದಂತೆ ಬಗ್ಗೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲು ಸೂಚಿಸುತ್ತೇನೆ ಎಂದಿರುವ ಜೋಶಿ, ಸರ್ಕಾರ ಕಾನೂನು ಭಂಗ ಮಾಡುವವರಿಗೆ ಅವಕಾಶ ನೀಡುವುದಿಲ್ಲ. ದೇಶಭಕ್ತರಿಗೆ ಗೌರವ ಕೊಡಬೇಕು ಎಂದು ನಾನು ಎಲ್ಲರಿಗೂ ಈ ಮೂಲಕ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಶಿವಾಜಿ ಪ್ರತಿಮೆಗೆ ಮಸಿ ಬಳಿದವರು ಕಾಂಗ್ರೆಸ್ ಕಾರ್ಯಕರ್ತರು: ಬಿಜೆಪಿ
Advertisement
ಬೆಳಗಾವಿ ಹಾಗೂ ಬೆಂಗಳೂರಿನ ಘಟನೆಗಳ ಬಗ್ಗೆ ಸಂಬಂಧಿಸಿದಂತೆ ಪೊಲೀಸ್ ಹಾಗೂ ಇತರ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ. ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಿಕೊಳ್ಳಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ.
Advertisement
Advertisement
ದೇಶಕ್ಕಾಗಿ ತ್ಯಾಗ ಮಾಡಿದ್ದಕ್ಕೆ ಅವರ ಮೂರ್ತಿ ಸ್ಥಾಪಿಸಲಾಗಿದೆ. ನಮ್ಮ ಸರ್ಕಾರ ಇಂತಹ ಘಟನೆಗಳನ್ನು ಸಹಿಸುವುದಿಲ್ಲ. ಏನೇ ಹೇಳುವುದಿದ್ದರೂ ಶಾಂತವಾಗಿ ಹೇಳಬೇಕು. ಕಾನೂನು ಭಂಗ ಮಾಡುವವರಿಗೆ ಸರ್ಕಾರ ಅವಕಾಶ ನೀಡಲ್ಲ. ದೇಶಭಕ್ತರಿಗೆ ಗೌರವ ಕೊಡಬೇಕು ಎಂದು ನಾನು ಎಲ್ಲರಲೂ ಮನವಿ ಮಾಡುತ್ತೇನೆ. ಸಂಗೊಳ್ಳಿ ರಾಯಣ್ಣ ದೇಶಭಕ್ತ. ಅವರು ಭಾಷೆ, ಸಮುದಾಯ ಎಲ್ಲವನ್ನೂ ಮೀರಿ ಬೆಳೆದವರು. ಇಂತಹವರ ಪ್ರತಿಮೆಗಳಿಗೆ ಮಸಿ ಬಳಿಯುವಂತಹ ಹೀನ ಕೃತ್ಯಕ್ಕೆ ಇಳಿಯಬಾರದು ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಶಿವಾಜಿ ಪ್ರತಿಮೆಗೆ ಮಸಿ – ಸುತ್ತಮುತ್ತ ಪೊಲೀಸ್ ಭದ್ರತೆ