– ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಘಟನೆ
ರಾಯ್ಪುರ್: ಛತ್ತೀಸ್‌ಗಢದ (Chhattisgarh) ಬಿಜಾಪುರ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತನನ್ನು ನಕ್ಸಲೀಯರು ಹತ್ಯೆ ಮಾಡಿದ್ದಾರೆ. ಪೊಲೀಸ್ ಮಾಹಿತಿದಾರ ಎಂದುಕೊಂಡು ನಕ್ಸಲರು ಈ ಕೃತ್ಯ ಎಸಗಿದ್ದಾರೆ.
Advertisement
ಮೃತನನ್ನು ಕುಡಿಯಮ್ ಮಾಡೋ ಎಂದು ಗುರುತಿಸಲಾಗಿದೆ. ಪೊಲೀಸ್ ಮಾಹಿತಿದಾರ ಎಂಬ ಶಂಕೆಯ ಮೇಲೆ ಕೊಲೆ ನಡೆದಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಲೋಕಸಭೆಯಲ್ಲಿ ರೈಲ್ವೇ ತಿದ್ದುಪಡಿ ಮಸೂದೆ 2024 ಅಂಗೀಕಾರ
Advertisement
Advertisement
ಫರ್ಸೆಗಢ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮನ್‌ಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಕ್ಸಲೀಯರ ಗುಂಪೊಂದು ಕುಡಿಯಮ್ ಮಾಡೋ ಮನೆಗೆ ನುಗ್ಗಿ ಆತನನ್ನು ಹೊರಗೆ ಎಳೆದೊಯ್ದು ಕತ್ತು ಹಿಸುಕಿ ಹತ್ಯೆ ಮಾಡಿದೆ.
Advertisement
ಕಳೆದ ಏಳು ದಿನಗಳಲ್ಲಿ ಬಿಜಾಪುರದಲ್ಲಿ ನಕ್ಸಲೀಯರು ನಡೆಸಿದ ಐದನೇ ನಾಗರಿಕ ಹತ್ಯೆಯಾಗಿದೆ. ಡಿ.4 ರಂದು ಬಿಜೆಪಿ ಕಾರ್ಯಕರ್ತ ಸೇರಿದಂತೆ ಇಬ್ಬರು ಮಾಜಿ ಸರಪಂಚ್‌ಗಳನ್ನು ಪ್ರತ್ಯೇಕ ದಾಳಿಯಲ್ಲಿ ಹತ್ಯೆ ಮಾಡಲಾಗಿತ್ತು. ಡಿ.6 ಮತ್ತು ಡಿ.7 ರಂದು ನಡೆದ ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪತ್ನಿಯ ಮಾರ್ಫ್ ಫೋಟೋ ಬಳಸಿ ಆ್ಯಪ್ ಏಜೆಂಟರ ಕಿರುಕುಳ – 2,000 ರೂ. ಸಾಲ ಪಡೆದಿದ್ದ ವ್ಯಕ್ತಿ ಆತ್ಮಹತ್ಯೆ
ಬುಧವಾರ ಬೆಳಗ್ಗೆ ವಿಷಯ ತಿಳಿದು ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿ, ಮಾಡೋ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದೆ. ದಾಳಿಕೋರರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ನಡೆಸಿದೆ.