ಛತ್ತೀಸ್‌ಗಢ – ಪ್ರತ್ಯೇಕ ಪ್ರಕರಣದಲ್ಲಿ 22 ನಕ್ಸಲರ ಎನ್‌ಕೌಂಟರ್

Public TV
1 Min Read
Security Force

ರಾಯ್‌ಪುರ: ಛತ್ತೀಸ್‌ಗಢದ (Chhattisgarh) ಬಿಜಾಪುರ ಮತ್ತು ಕಂಕೇರ್ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ನಕ್ಸಲ್ ನಿಗ್ರಹ ಪಡೆಯ ಕಾರ್ಯಾಚರಣೆಯಲ್ಲಿ 22 ನಕ್ಸಲರು ಹತರಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಬಿಜಾಪುರದಲ್ಲಿ (Bijapur) ದಾಂತೇವಾಡ (Dantewada) ಜಿಲ್ಲೆಯ ಗಡಿಯಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಗಂಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭದ್ರತಾ ಸಿಬ್ಬಂದಿ 2 ತಂಡಗಳಾಗಿ ಕಾರ್ಯಾಚರಣೆ ಮಾಡಿದಾಗ ಗುಂಡಿನ ಚಕಮಕಿ ನಡೆದಿದೆ. ಇದನ್ನೂ ಓದಿ: ನನ್ನ ಮೇಲೆ ಹನಿಟ್ರ್ಯಾಪ್‌ಗೆ ಯತ್ನ ಆಗಿದೆ – ಸದನದಲ್ಲೇ ಸಚಿವ ಕೆ.ಎನ್‌ ರಾಜಣ್ಣ ಬಾಂಬ್‌

18 ನಕ್ಸಲರ ಶವಗಳು, ಬಂದೂಕುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಂಕೇರ್‌ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಮಾ.30ರಂದು ರಿಲೀಸ್‌ ಆಗಲಿದೆ ಸಲ್ಮಾನ್‌ ಖಾನ್‌ ನಟನೆಯ ‘ಸಿಕಂದರ್‌’ ಸಿನಿಮಾ

ರಾಜ್ಯ ಕಾರ್ಯಪಡೆ ಮತ್ತು ಜಿಲ್ಲಾ ಮೀಸಲು ಪಡೆ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ವಿಶೇಷ ಪಡೆಗಳ ಕಾರ್ಯಾಚರಣೆ ಎರಡೂ ಸ್ಥಳಗಳಲ್ಲಿ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share This Article