ರಾಯ್ಪುರ: ಛತ್ತೀಸ್‌ಗಢದ (Chhattisgarh) ನಕ್ಸಲ್ ಪೀಡಿತ ಪ್ರದೇಶಗಳಾದ ನಾರಾಯಣಪುರ (Narayanpur) ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿ ಭದ್ರತಾ ಪಡೆಗಳು ಎನ್‌ಕೌಂಟರ್ (Encounter) ನಡೆಸಿದ್ದು, 35 ನಕ್ಸಲರು (Naxalites) ಸಾವನ್ನಪ್ಪಿದ್ದಾರೆ. ಘಟನಾ ಸ್ಥಳದಿಂದ ಅಪಾರ ಪ್ರಮಾಣದ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ.
ದಾಂತೇವಾಡದ ಬರ್ಸೂರಿನ ತುಳತುಳಿ ಗ್ರಾಮ ಮತ್ತು ನಾರಾಯಣಪುರದ ಓರ್ಚಾದ ನೆಂದೂರು ಗ್ರಾಮದ ಅರಣ್ಯದಲ್ಲಿ ನಕ್ಸಲರು ಇರುವ ಖಚಿತ ಮಾಹಿತಿ ಮೇರೆಗೆ ಭದ್ರತಾಪಡೆಗಳು ಶೋಧ ಕಾರ್ಯ ಆರಂಭಿಸಿದವು ಈ ವೇಳೆ ನಕ್ಸಲರು ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದೆ. ಇದನ್ನೂ ಓದಿ: ಸಿಎಂ ಏನ್ ದೆವ್ವನಾ ನಾನು ಹೆದರೋಕೆ – ಸಿದ್ದರಾಮಯ್ಯಗೆ ಹೆಚ್‌ಡಿಕೆ ತಿರುಗೇಟು
ನಾರಾಯಣಪುರ-ದಾಂತೇವಾಡ ಗಡಿ ಪ್ರದೇಶದಲ್ಲಿ ಬಸ್ತಾರ್ ಪ್ರದೇಶದ ಉನ್ನತ ನಕ್ಸಲೀಯರ ಸಭೆಯ ಬಗ್ಗೆ ಮಾಹಿತಿ ಲಭಿಸಿತು. ಈ ಹಿನ್ನೆಲೆ ಹುಡುಕಾಟ ಮತ್ತು ರಕ್ಷಣಾ ತಂಡಗಳನ್ನು ಕಳುಹಿಸಲಾಯಿತು. ಶುಕ್ರವಾರ ಮಧ್ಯಾಹ್ನದಿಂದ ಎನ್‌ಕೌಂಟರ್ ಆರಂಭವಾಗಿ ತಡರಾತ್ರಿಯವರೆಗೂ ಮುಂದುವರೆಯಿತು. ಶನಿವಾರ ಬೆಳಗ್ಗೆಯೂ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಇಲ್ಲಿಯವರೆಗೆ ಒಟ್ಟು 35 ನಕ್ಸಲರ ಮೃತದೇಹಗಳು ಪತ್ತೆಯಾಗಿವೆ ಎಂದು ನಾರಾಯಣಪುರ ಎಸ್ಪಿ ಪ್ರಭಾತ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿಗೆ ಡ್ರಗ್ ರಾಕೆಟ್ ಹಿಂದೆ ದುಬೈ, ಲಂಡನ್ ನಂಟು – ದುಬೈನಲ್ಲಿರುವ ಭಾರತೀಯನಿಂದಲೇ ಡ್ರಗ್ ಮಾಫಿಯಾ
ಎನ್‌ಕೌಂಟರ್‌ನಲ್ಲಿ ಎಲ್ಲಾ ಯೋಧರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ನಕ್ಸಲರಿಂದ ಎಲ್‌ಎಂಜಿ ರೈಫಲ್, ಎಕೆ 47 ರೈಫಲ್, ಎಸ್‌ಎಲ್‌ಆರ್ ರೈಫಲ್, ಐಎನ್‌ಎಸ್ ಎಎಸ್ ರೈಫಲ್, 303 ರೈಫಲ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ
ಘಟನೆ ಬೆನ್ನಲ್ಲೇ ಮುಖ್ಯಮಂತ್ರಿ ವಿಷ್ಣುದೇವ್ ಸಾಯಿ ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಇದರಲ್ಲಿ ನಾರಾಯಣಪುರ-ದಾಂತೇವಾಡ ಜಿಲ್ಲೆಯ ತುಳತುಳಿ ಅರಣ್ಯದಲ್ಲಿ ನಡೆಯುತ್ತಿರುವ ಎನ್‌ಕೌಂಟರ್ ಕುರಿತು ಚರ್ಚೆ ನಡೆಸಿದ್ದಾರೆ. ನಕ್ಸಲ್ ಎನ್‌ಕೌಂಟರ್ ಕುರಿತು ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ದಲಿತ ಶಿಕ್ಷಕ ಸೇರಿ ನಾಲ್ವರ ಭೀಕರ ಹತ್ಯೆ ಕೇಸ್; ಆರೋಪಿಗೆ ಗುಂಡೇಟು
ವರ್ಷದ ಆರಂಭದಿಂದ ದಾಂತೇವಾಡ ಮತ್ತು ನಾರಾಯಣಪುರದಂತಹ ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ಪ್ರದೇಶದಾದ್ಯಂತ ವಿವಿಧ ಕಾರ್ಯಾಚರಣೆಗಳಲ್ಲಿ 185 ನಕ್ಸಲಿಯರು ಹತರಾಗಿದ್ದಾರೆ. ಮಾರ್ಚ್ 2026ರ ವೇಳೆಗೆ ಭಾರತವು ಎಡಪಂಥೀಯ ಉಗ್ರವಾದದಿಂದ ಮುಕ್ತವಾಗುವ ಗುರಿ ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಹಿಂದೆ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಮುಡಾಸ್ತ್ರಕ್ಕೆ ಜಾತಿ ಜನಗಣತಿ ಪ್ರತ್ಯಾಸ್ತ್ರ ಬಿಟ್ಟ ಸಿಎಂ – ಕಾಂಗ್ರೆಸ್‌ನಲ್ಲಿ ಮತ್ತೆ ಪರ-ವಿರೋಧಕ್ಕೆ ವೇದಿಕೆ ಸಜ್ಜು