ರಾಯ್ಪುರ: ಸಾಫ್ಟ್‌ವೇರ್ ಎಂಜಿನಿಯರ್ (Software Engineer) ಒಬ್ಬ ತನ್ನ ಪ್ರಿಯತಮೆಯನ್ನು ಚಾಕುವಿನಿಂದ ಬರ್ಬರವಾಗಿ ಹತ್ಯೆಗೈದು ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ (Gurugram) ನಡೆದಿದೆ.
ಮೃತರನ್ನು ಛತ್ತೀಸ್‌ಗಢದ (Chhattisgarh) ಭಿಲಾಯಿ ಮೂಲದ ಶ್ರೇಷ್ಠ್ ಮಲಿಕ್ (25) ಹಾಗೂ ಉತ್ತರ ಪ್ರದೇಶದ ಸೀತಾಪುರ ಮೂಲದ ಇಶಾರಾ ಆಯೂಬಿ (25) ಎಂದು ಗುರುತಿಸಲಾಗಿದೆ. ಇಬ್ಬರೂ ಗುರುಗ್ರಾಮದ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಎಂಜಿನಿಯರ್‌ಗಳಾಗಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ರಾಜ್ಯದ 13 ರೋಪ್‌ವೇ ಯೋಜನೆಗಳ ಅನುಷ್ಠಾನಕ್ಕೆ ವೇಗ ನೀಡಿ: ಕೆ.ಜೆ. ಜಾರ್ಜ್ ಸೂಚನೆ
ಇಶಾರಾ ಅವರ ಕುಟುಂಬದವರು ಹಲವು ಬಾರಿ ಕರೆ ಮಾಡಿದರೂ ಕರೆ ಸ್ವೀಕರಿಸದ ಹಿನ್ನೆಲೆ ಅನುಮಾನಗೊಂಡಿದ್ದರು. ಬಳಿಕ ಅವರು ಕೆಲಸದ ಸ್ಥಳದಲ್ಲಿ ವಿಚಾರಿಸಿದಾಗ ಇಶಾರಾ ಕರ್ತವ್ಯಕ್ಕೆ ಹಾಜರಾಗಿಲ್ಲ ಎಂಬುದು ತಿಳಿದುಬಂದಿದೆ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಇದನ್ನೂ ಓದಿ: ಅಯೋಧ್ಯೆ ಶ್ರೀರಾಮ ಮಂದಿರ ಟ್ರಸ್ಟ್ ಸಿಇಒ ಹುದ್ದೆಗೆ ಅರ್ಜಿ ಆಹ್ವಾನ – ಆಕರ್ಷಕ ವೇತನ, ಬಂಗಲೆ ಸೌಲಭ್ಯ!
ದೂರಿನ ಮೇರೆಗೆ ಪೊಲೀಸರು ಇಶಾರಾ ಅವರ ಮೊಬೈಲ್ ಫೋನ್‌ನ ಲೊಕೇಶನ್ ಟ್ರ‍್ಯಾಕ್ ಮಾಡಿದಾಗ, ಅದು ಗುರುಗ್ರಾಮದ ಸೆಕ್ಟರ್-55ರಲ್ಲಿರುವ ಶ್ರೇಷ್ಠ್ ಮಲಿಕ್ ಬಾಡಿಗೆಗೆ ಪಡೆದಿದ್ದ ಪಿಜಿ ಕೊಠಡಿಯನ್ನು ತೋರಿಸಿತು. ಸ್ಥಳಕ್ಕೆ ತೆರಳಿದ ಪೊಲೀಸರು ಬಾಗಿಲು ಒಡೆದು ಒಳ ಪ್ರವೇಶಿಸಿದಾಗ, ಇಶಾರಾ ಮೃತದೇಹ ನೆಲದ ಮೇಲೆ ರಕ್ತದ ಮಡುವಿನಲ್ಲಿ ಬಿದ್ದಿತ್ತು. ಇದನ್ನೂ ಓದಿ: ಸೌಜನ್ಯ ಪ್ರಕರಣ ಬಳಸಿ ಸಾರ್ವಜನಿಕ ಭಾವನೆ ಕೆರಳಿಸಲು ಯತ್ನ – ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂ ತರಾಟೆ
ಪ್ರಾಥಮಿಕ ತನಿಖೆಯಲ್ಲಿ ಇಶಾರಾ ಅವರ ಕುತ್ತಿಗೆ ಭಾಗಕ್ಕೆ ತೀಕ್ಷ್ಣವಾದ ಆಯುಧದಿಂದ ಹಲವು ಬಾರಿ ಇರಿದಿರುವುದು ಬೆಳಕಿಗೆ ಬಂದಿದೆ. ಕೊಠಡಿಯಿಂದ ಹಲವು ಮಹತ್ವದ ಸಾಕ್ಷ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದೇ ವೇಳೆ ಗರ್ಹಿ ರೈಲು ನಿಲ್ದಾಣದ ಸಮೀಪ ರೈಲಿನ ಮುಂದೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಸರ್ಕಾರಿ ರೈಲ್ವೆ ಪೊಲೀಸ್ ಅಧಿಕಾರಿಗಳಿಗೆ ಲಭ್ಯವಾಗಿತ್ತು. ಸ್ಥಳಕ್ಕೆ ತೆರಳಿದ ಪೊಲೀಸರು ರೈಲು ಹಳಿಯಲ್ಲಿ ಸೊಂಟದಿಂದ ಎರಡು ತುಂಡಾಗಿದ್ದ ಮೃತದೇಹವನ್ನು ವಶಕ್ಕೆ ಪಡೆದರು. ಇದನ್ನೂ ಓದಿ: ಪೋಕ್ಸೋ ಪ್ರಕರಣ – ವಚನಾನಂದ ಸ್ವಾಮೀಜಿಗೆ ಜಾಮೀನು ಮಂಜೂರು
ನಂತರ ತನಿಖೆಯಲ್ಲಿ ರೈಲಿನಡಿ ಬಿದ್ದು ಮೃತಪಟ್ಟ ವ್ಯಕ್ತಿಯೇ ಶ್ರೇಷ್ಠ್ ಮಲಿಕ್ ಎಂಬುದು ದೃಢಪಟ್ಟಿದೆ. ಈ ಎರಡೂ ಘಟನೆಗಳ ನಡುವೆ ಸಂಬಂಧವಿರುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಘಟನೆ ನಡೆಯುವುದಕ್ಕೂ ಕೇವಲ ಮೂರು ದಿನಗಳ ಹಿಂದಷ್ಟೇ ಇಶಾರಾ ಆಯೂಬಿ ಶ್ರೇಷ್ಠ್ ಮಲಿಕ್ ವಾಸಿಸುತ್ತಿದ್ದ ಪಿಜಿ ಕೊಠಡಿಗೆ ಬಂದು ವಾಸವಾಗಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಇದನ್ನೂ ಓದಿ: ಕಸ ವಿಲೇವಾರಿ ನಿಯಮ ಉಲ್ಲಂಘನೆ – 50 ಸಾವಿರ ಮಂದಿಗೆ ನೋಟಿಸ್, 15,000 ದಂಡ
ಸೆಕ್ಟರ್-56 ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮನೋಜ್ ಕುಮಾರ್ ಮಾತನಾಡಿ, ಇಬ್ಬರ ನಡುವಿನ ಸಂಬಂಧದ ಸ್ವರೂಪ ಏನು? ಈ ಕೃತ್ಯಕ್ಕೆ ನಿಖರ ಕಾರಣವೇನು ಎಂಬುದು ತನಿಖೆ ಪೂರ್ಣಗೊಂಡ ಬಳಿಕವೇ ಸ್ಪಷ್ಟವಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಗೋಹತ್ಯೆ ನಿಷೇಧ ವಿವಾದ; ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ
ಪೊಲೀಸರು ಇಬ್ಬರ ಮೊಬೈಲ್ ಫೋನ್, ಕರೆ ವಿವರಗಳು, ಚಾಟ್‌ಗಳು ಹಾಗೂ ಇತರ ಡಿಜಿಟಲ್ ಸಾಕ್ಷ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಲ್ಲ ಆಯಾಮಗಳಿಂದ ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಬಳ್ಳಾರಿಯಲ್ಲಿ ಪುಂಡರಿಗೆ ಖಾಕಿ ಬಿಸಿ: ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಡ್ರಗ್ಸ್ ಸೇವಿಸುತ್ತಿದ್ದ 174 ಮಂದಿ ವಶಕ್ಕೆ
ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವಿಧಿವಿಜ್ಞಾನ ತಜ್ಞರ ತಂಡವು ಘಟನೆ ನಡೆದ ಸ್ಥಳಗಳಿಂದ ಅಗತ್ಯ ಮಾದರಿಗಳನ್ನು ಸಂಗ್ರಹಿಸಿದೆ. ತನಿಖೆಯ ಬಳಿಕವೇ ಘಟನೆಯ ಹಿಂದಿನ ನಿಖರ ಕಾರಣ ಬಹಿರಂಗವಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಡಿವೈಡರ್‌ಗೆ ಖಾಸಗಿ ಬಸ್ ಡಿಕ್ಕಿ – ಚಾಲಕ, ಓರ್ವ ಪ್ರಯಾಣಿಕ ಸಾವು
