ರಾಯ್ಪುರ: ರಾಷ್ಟ್ರೀಯ ಸೇವಾ ಯೋಜನೆ (NSS) ಶಿಬಿರದ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ನಮಾಜ್ (Namaz) ಮಾಡಲು ಒತ್ತಾಯಿಸಿದ ಆರೋಪದ ಮೇಲೆ ಛತ್ತೀಸ್‌ಗಢದ (Chhattisgarh) ಗುರು ಘಾಸಿದಾಸ್ ಕೇಂದ್ರೀಯ ವಿಶ್ವವಿದ್ಯಾಲಯದ (Guru Ghasidas Central University) ಏಳು ಶಿಕ್ಷಕರು ಮತ್ತು ಒಬ್ಬ ವಿದ್ಯಾರ್ಥಿಯ ವಿರುದ್ಧ ಪ್ರಕರಣ ದಾಖಲಿಸಿದ ಘಟನೆ ಛತ್ತೀಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ನಡೆದಿದೆ.
ಮಾರ್ಚ್ 31ರಂದು ಸುಮಾರು 159 ವಿದ್ಯಾರ್ಥಿಗಳನ್ನು ನಮಾಜ್ ಮಾಡುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. 159 ವಿದ್ಯಾರ್ಥಿಗಳ ಪೈಕಿ ಕೇವಲ ನಾಲ್ವರು ಮಾತ್ರ ಮುಸ್ಲಿಂ ಸಮುದಾಯದವರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ರಿಕ್ಕಿ ರೈ ಮೇಲೆ ಫೈರಿಂಗ್ ಪ್ರಕರಣದಲ್ಲಿ ನಮ್ಮ ಪಾತ್ರ ಇಲ್ಲ – ವಿಚಾರಣೆ ಬಳಿಕ ಮುತ್ತಪ್ಪ ರೈ 2ನೇ ಪತ್ನಿ ಪ್ರತಿಕ್ರಿಯೆ
ಶಿಬಿರದಿಂದ ವಾಪಸಾದ ಬಳಿಕ ವಿದ್ಯಾರ್ಥಿಗಳು ಈ ಬಗ್ಗೆ ಪ್ರತಿಭಟನೆ ನಡೆಸಿದ್ದು, ನಮಾಜ್‌ಗೆ ಒತ್ತಾಯಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಲಪಂಥೀಯ ಸಂಘಟನೆಗಳು ಆಗ್ರಹಿಸಿದ್ದವು. ಘಟನೆ ಸಂಬಂಧ ಬಿಲಾಸ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಜನೇಶ್ ಸಿಂಗ್ ತನಿಖೆಗೆ ಆದೇಶಿಸಿದರು. ಅಲ್ಲದೇ ಕೊಟ್ವಾಲಿ (ನಗರ) ಎಸ್ಪಿ ಅಕ್ಷಯ್ ಸಬದ್ರ ನೇತೃತ್ವದಲ್ಲಿ ನಾಲ್ವರು ಸದಸ್ಯರ ಸಮಿತಿಯನ್ನು ರಚಿಸಿದರು. ಇದನ್ನೂ ಓದಿ: ಇಸ್ಲಾಂ ನಲ್ಲಿ ಜಾತಿ, ಧರ್ಮ, ಭೇದ-ಭಾವ ಮಾಡಿ ಅಂತ ಹೇಳಿಲ್ಲ – ಜಮೀರ್
ಸಮಿತಿಯ ತನಿಖಾ ವರದಿಯ ಆಧಾರದ ಮೇಲೆ, ಶಿಕ್ಷಕರಾದ ದಿಲೀಪ್ ಝಾ, ಮಧುಲಿಕಾ ಸಿಂಗ್, ಜ್ಯೋತಿ ವರ್ಮಾ, ನೀರಜ್ ಕುಮಾರಿ, ಪ್ರಶಾಂತ್ ವೈಷ್ಣವ್, ಸೂರ್ಯಭನ್ ಸಿಂಗ್, ಬಸಂತ್ ಕುಮಾರ್ ಮತ್ತು ವಿದ್ಯಾರ್ಥಿ ನಾಯಕ ಆಯುಷ್ಮಾನ್ ಚೌಧರಿ ವಿರುದ್ಧ ಶನಿವಾರ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಪಹಲ್ಗಾಮ್ ದಾಳಿ ಬಳಿಕ ಪಾಕ್‌ನಿಂದ ಆಮದಾಗ್ತಿದ್ದ ಡ್ರೈಫ್ರೂಟ್ಸ್ ಪೂರೈಕೆಯಲ್ಲಿ ವ್ಯತ್ಯಯ – ಬೆಲೆ ಏರಿಕೆ ಆತಂಕ!
ಪ್ರಕರಣವನ್ನು ಕೋಣಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಪ್ರಕರಣದ ವರದಿಯನ್ನು ಕೋಟ ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಭಾರತ ಹಿಂದೂಗಳಂತೆ ಮುಸ್ಲಿಮರಿಗೂ ಸೇರಿದೆ – ಪಹಲ್ಗಾಮ್ ದಾಳಿ ಬಗ್ಗೆ ರಾಖಿ ಸಾವಂತ್ ಮಾತು