ಬೆಂಗಳೂರು: ಮುಂಗಾರಿನ ಅಬ್ಬರದ ಮಧ್ಯೆ ರಾಜ್ಯದಲ್ಲಿ ಚಿಕನ್‍ಗುನ್ಯಾ, ಡೆಂಗ್ಯೂ ಸಾಂಕ್ರಾಮಿಕ ರೋಗಗಳ ಪ್ರಕರಣಗಳು ಹೆಚ್ಚಾಗುತ್ತಿವೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರು ಸಿಟಿಯಲ್ಲಿ ಒಟ್ಟು 313 ಡೆಂಗ್ಯೂ ಕೇಸ್ ಹಾಗೂ 782 ಚಿಕನ್ ಗುನ್ಯಾ ಕೇಸ್ ಪತ್ತೆಯಾಗಿವೆ. ದಕ್ಷಿಣಕನ್ನಡದಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು ರಾಜ್ಯಾದ್ಯಂತ ಒಟ್ಟು 1,141 ಕೇಸ್ ಗಳು ಪತ್ತೆಯಾಗಿವೆ. ಹಾವೇರಿ ಹಾಗೂ ಚಿತ್ರದುರ್ಗದಲ್ಲಿ ಹೆಚ್ಚು ಚಿಕನ್ ಗುನ್ಯಾ ಕೇಸ್ ಗಳು ಪತ್ತೆಯಾಗಿವೆ.
Advertisement
ನಾಗರಿಕರಿಗೆ ಸಾಂಕ್ರಾಮಿಕ ಕಾಯಿಲೆಯ ಬಗ್ಗೆ ಎಚ್ಚರವಾಗಿರುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮನವಿ ಮಾಡಿದ್ದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೂ ಸೂಕ್ತ ಚಿಕಿತ್ಸೆ ಹಾಗೂ ಎಚ್ಚರ ವಹಿಸುವಂತೆ ಸುತ್ತೋಲೆ ಹೊರಡಿಸಿದೆ.
Advertisement
ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಲ್ಯಾಬ್ ಟೆಸ್ಟ್ ಗೆ ಹೆಚ್ಚುವರಿ ಶುಲ್ಕ ಸಂಗ್ರಹ ಮಾಡದಂತೆ ಖಾಸಗಿ ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಲಾಗಿದ್ದು ಸರ್ಕಾರಿ ಆಸ್ಪತ್ರೆಗೆ ರೋಗಿಗಳನ್ನು ಕಳಿಸುವಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.