ಬೆಂಗಳೂರು: ಇಂದು ಸಂಜೆ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ರಾಜ್ಯದ ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಮತ್ತಿತರ ಯೋಜನೆಗಳ ಆಡಳಿತಾತ್ಮಕ ಮತ್ತು ತಾಂತ್ರಿಕ ಕೆಲಸಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಾಳೆ ಬೆಳಿಗ್ಗೆ ಜಿ.ಎಸ್.ಟಿ ವಿಚಾರವಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗುವುದಾಗಿ ತಿಳಿಸಿದರು.
ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಒಪ್ಪಿಗೆ ನೀಡಿದ್ದಾರೆ. ಅದರ ಬಗ್ಗೆ ಕೆಲವು ವಿಚಾರಗಳನ್ನು ಚರ್ಚಿಸಲು ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಲಿದ್ದೇನೆ. ಕೇಂದ್ರ ಇಂಧನ ಸಚಿವರನ್ನು ಭೇಟಿಯಾಗಲು ಸಮಯ ನಿಗದಿಯಾಗಿಲ್ಲ ಎಂದರು. ಇದನ್ನೂ ಓದಿ: ಮೋದಿಯನ್ನು ಭೇಟಿಯಾದ ಮೈಸೂರಿನ ಶಿಲ್ಪಿ ಯೋಗಿರಾಜ್ ಅರುಣ್
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ ರಕ್ಷಣಾ ಸಚಿವ ಅಮಿತ್ ಷಾ ಅವರ ಸಮಯ ನಿಗದಿಯಾದಲ್ಲಿ ಅವರನ್ನು ಭೇಟಿಯಾಗುವುದಾಗಿ ತಿಳಿಸಿದರು. ಈ ಭೇಟಿಯಲ್ಲಿ ಸಂಪುಟ ಪುನಾರಚನೆ ವಿಚಾರ ಬಂದರೆ ಚರ್ಚಿಸುವುದಾಗಿ ಹೇಳಿದರು. ಇದನ್ನೂ ಓದಿ: ಅಮೆರಿಕದ ಟೈಮ್ಸ್ ಸ್ಕ್ವೇರ್‌ನಲ್ಲಿ ಮೊದಲ ಬಾರಿಗೆ ನಮಾಜ್- ಇಸ್ಲಾಂ ಬಗ್ಗೆ ತಪ್ಪು ಕಲ್ಪನೆಗಳಿವೆ ಎಂದ ಮುಸ್ಲಿಮರು