ಬೆಂಗಳೂರು: ನವೀನ್ ಪಾರ್ಥಿವ ಶರೀರವನ್ನು ತವರಿಗೆ ತರಲು ಸಹಾಯ ಮಾಡಿದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.
ಉಕ್ರೇನ್‌ನಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೆರಿ ಗ್ರಾಮದ ನವೀನ್ ಅವರ ಅಂತಿಮ ದರ್ಶನ ಪಡೆದರು. ನಂತರ ಸುಮಾರು ಮೂರು ನಿಮಿಷಗಳ ಕಾಲ ಪ್ರಧಾನಿಯವರೊಂದಿಗೆ ಮಾತುಕತೆ ನಡೆಸಿದ ಮುಖ್ಯಮಂತ್ರಿಯವರು, ನವೀನ್ ಪಾರ್ಥಿವ ಶರೀರವನ್ನು ದೇಶಕ್ಕೆ ತರುವಲ್ಲಿ ತಮ್ಮ ಪಾತ್ರ ಮುಖ್ಯವಾಗಿದೆ. ನವೀನ್ ಮುಖ ನೋಡಬೇಕೆಂಬ ಆತನ ತಂದೆ, ತಾಯಿಯ ಆಸೆಯನ್ನು ಈಡೇರಿಸಿದ್ದೀರಿ. ಅದಕ್ಕಾಗಿ ರಾಜ್ಯದ ಪರವಾಗಿ ತಮಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ನವೀನ್ ಮೃತದೇಹ ರಾಜ್ಯಕ್ಕೆ ಆಗಮನ – ಕುಟುಂಬಕ್ಕೆ ಹಸ್ತಾಂತರಿಸಿದ ಸಿಎಂ
Advertisement
Advertisement
ಯುದ್ಧಭೂಮಿಯಿಂದ ಮೃತದೇಹ ತರುವುದು ಸುಲಭದ ಮಾತಲ್ಲ. ತಮ್ಮ ಉತ್ತಮ ರಾಜತಾಂತ್ರಿಕ ಬಾಂಧವ್ಯಗಳ ಕಾರಣ ಇದು ಸಾಧ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಎಸ್‍ಎಸ್ ಮೆಡಿಕಲ್ ಕಾಲೇಜ್‍ಗೆ ನವೀನ್ ಮೃತದೇಹ ದಾನ