ನವದೆಹಲಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ದೆಹಲಿಗೆ ಬರುತ್ತಿದ್ದಾರೆ. ಸಂಸದ ಪ್ರಹ್ಲಾದ್ ಜೋಶಿ ಪುತ್ರಿಯ ಅರತಕ್ಷತೆ ನೆಪದಲ್ಲಿ ದೆಹಲಿ ಟೂರ್ ಇಟ್ಟುಕೊಂಡಿದ್ದು, ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಸಿಎಂ ದೆಹಲಿ ಭೇಟಿ ಬೆನ್ನಲ್ಲೇ ಸಂಪುಟ ವಿಸ್ತರಣೆ ಚರ್ಚೆಯಾಗುವ ಸಾಧ್ಯತೆಗಳಿವೆ. ಈ ಮೂಲಕ ಸಿಎಂ ಅವರು ಬಾಕಿ 4 ಸ್ಥಾನ ಭರ್ತಿ ಮಾಡ್ತಾರಾ ಎಂಬ ಪ್ರಶ್ನೆ ಹುಟ್ಟಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ಹಲವು ನಾಯಕರ ಭೇಟಿಯಾಗಲಿದ್ದು, ಈ ವೇಳೆ ಯಾವೆಲ್ಲಾ ವಿಷಯದ ಬಗ್ಗೆ ಚರ್ಚೆ ನಡೀಬೋದು ಎಂಬ ಕುತೂಹಲ ಕಮಲ ನಾಯಕರಲ್ಲಿ ಹುಟ್ಟಿಕೊಂಡಿದೆ. ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ ಪಾಲಿಕೆ ಮತ್ತೆ ಬಿಜೆಪಿಗೆ – ಎಂಐಎಂನಿಂದಾಗಿ ಕಾಂಗ್ರೆಸ್ಸಿಗೆ ಹಿನ್ನಡೆ
ಅಲ್ಲದೆ ಇದೇ ಕೆಲ ಸಚಿವರ ಖಾತೆ ಬದಲಾವಣೆ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆಗಳಿದೆ. ನಿಗಮ ಮಂಡಳಿ ಪುನರ್ ನೇಮಕ ಬಗ್ಗೆಯೂ ಚರ್ಚೆ ನಡೆಯುತ್ತಾ ಎಂಬ ಪ್ರಶ್ನೆಯೂ ಎದ್ದಿದೆ. ಒಟ್ಟಿನಲ್ಲಿ ಸಿಎಂ ಅವರ ದಿಢೀರ್ ದೆಹಲಿ ಪ್ರವಾಸ ಭಾರೀ ನಿರೀಕ್ಷೆ ಹುಟ್ಟಿಸಿದೆ.