ಹುಬ್ಬಳ್ಳಿ: ದಕ್ಷ, ಜನಪರ ಆಡಳಿತವನ್ನು ಸರ್ಕಾರ ಮಾಡುತ್ತಿದೆ. ಆಡಳಿತ ವಿರೋಧಿಗಳಿಗೆ ಅದೇ ಉತ್ತರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸರ್ಕಾರದ ಗಂಡಸ್ತನ ತೋರಿಸುತ್ತಿಲ್ಲ ಎಂಬ ಪ್ರಶ್ನೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಹಿಜಬ್, ಹಲಾಲ್, ಆಜಾನ್ ವಿಚಾರವನ್ನು ಸಮರ್ಥವಾಗಿ ನಿಭಾಯಿಸಿದೆ. ಎಲ್ಲ ವಿಷಯಗಳನ್ನು ಸೌಹಾರ್ದಯುತವಾಗಿ ಬಗೆಹರಿಸಬೇಕು. ಆಜಾನ್ ಸಹ ಸುಪ್ರೀಂಕೋರ್ಟ್ ಆದೇಶ ಆಗಿದೆ. ನ್ಯಾಯ ಸಮ್ಮತವಾಗಿ ಬಗೆಹರಿಸುವ ಆಡಳಿತ ಮಾಡುತ್ತಿದ್ದೇವೆ. ಇದೇ ನಮ್ಮ ಉತ್ತರ ಅಂತ ಟಾಂಗ್ ನೀಡಿದರು. ಇದನ್ನೂ ಓದಿ: ಆಭರಣ ಅಂಗಡಿಗೆ ನುಗ್ಗಿ ದರೋಡೆಗೆ ಯತ್ನ – ಕಳ್ಳನ ಲಾಂಗ್ ಕಿತ್ತು ಕಳುಹಿಸಿದ ಮಾಲೀಕ
ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸದ್ಯ ವಿಧಾನ ಪರಿಷತ್, ರಾಜ್ಯ ಸಭಾ ಚುನಾವಣೆಯಲ್ಲಿ ಬ್ಯುಸಿ ಇದ್ದೇವೆ, ಬಹುತೇಕ ನಾಳೆ ನಾನು ಎಲ್ಲರನ್ನೂ ಸಂಪರ್ಕ ಮಾಡುತ್ತೇನೆ. ನಮ್ಮ ವರಿಷ್ಠರ ನಿರ್ಧಾರದ ಮೇಲೆ ತೀರ್ಮಾನ ಮಾಡುತ್ತೇನೆ. ಇನ್ನೂ ವಿಜಯೇಂದ್ರರನ್ನು ಮಂತ್ರಿ ಮಾಡುವ ವಿಚಾರ ಹೈಕಮಾಂಡ್‍ಗೆ ಬಿಟ್ಟಿದ್ದು ಎಂದು ಹೇಳಿದರು. ಇದನ್ನೂ ಓದಿ: ಗಂಡನ ಜೊತೆ ಜಗಳ – ಸಾಯ್ತೀನಿ ಅಂತ ಕೆರೆಯಲ್ಲಿ ಕೂತ ಮಹಿಳೆ