ಮಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಎಸದುರಿಸುತ್ತಿರುವ ಮುರುಘಾ ಮಠಧ ಶರಣರನ್ನು ಈಗಾಗಲೇ ಬಂಧಿಸಲಾಗಿದ್ದು, ಪ್ರಕರಣ ಸಂಬಂಧ ಪೊಲಿಸರಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Advertisement
ಶ್ರೀಗಳ ಬಂಧನ ವಿಳಂಬವಾಯಿತು ಅನ್ನೋ ಜನಸಾಮಾನ್ಯರ ಆಕ್ರೋಶಕ್ಕೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಎಲ್ಲಾ ಮಾತಿಗೂ ಉತ್ತರ ಕೊಡುವ ಅವಶ್ಯಕತೆ ಇಲ್ಲ. ಎಲ್ಲಾ ಕಾನೂನು ಪ್ರಕಾರವೇ ನಡೆಯುತ್ತಿದೆ. ಈಗ ನಾನು ಮಾತನಾಡುವುದು ಸರಿಯಲ್ಲ. ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ. ಅವರು ಸರಿಯಾದ ರೀತಿಯಲ್ಲಿ ಅವರ ಕೆಲಸ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ವ್ಯಾಖ್ಯಾನ ಸರಿಯಲ್ಲ ಎಂದು ಗರಂ ಆದರು. ಇದನ್ನೂ ಓದಿ: ಜೈಲಿನಲ್ಲಿ ಮೊದಲ ರಾತ್ರಿ ಕಳೆದ ಮುರುಘಾ ಶ್ರೀಗಳು
Advertisement
Advertisement
ಇತ್ತ ಬೆಂಗಳೂರಿನಲ್ಲಿ ಆರ್. ಅಶೋಕ್ ಮಾತನಾಡಿ, ಮಠಗಳ ಬಗ್ಗೆ ಗೌರವ ಇರುತ್ತೆ. ಮಠಗಳಲ್ಲಿ ಈ ರೀತಿ ಆಗಬಾರದು. ಕಾನೂನು ಪ್ರಕಾರ ಪೊಲೀಸರು ಕೆಲಸ ಮಾಡುತ್ತಾರೆ. ಕಾನೂನಿನಿಂದ ಏನು ಕ್ರಮ ಕೈಗೊಳ್ಳಬೇಕು ಕೈಗೊಳ್ಳಲಾಗುತ್ತೆ. ಇದರಲ್ಲಿ ಸರ್ಕಾರ ಎಂಟ್ರಿ ಕೊಡುವುದಿಲ್ಲ. ಕಾನೂನು ತನ್ನದೇ ಆದ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿದೆ. ಈ ನೆಲದ ಕಾನೂನು ಏನಿದೆಯೋ ಅದನ್ನ ಸರ್ಕಾರ ಪಾಲನೆ ಮಾಡಲಿದೆ. ಪೊಲೀಸರು ಕಾನೂನಿನ ಅಡಿಯಲ್ಲಿ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.