Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2023ರ ಚುನಾವಣೆಯಲ್ಲಿ ಭಾಜಪ ಕಮಲ ಅರಳಲಿದೆ: ಬಸವರಾಜ ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 2023ರ ಚುನಾವಣೆಯಲ್ಲಿ ಭಾಜಪ ಕಮಲ ಅರಳಲಿದೆ: ಬಸವರಾಜ ಬೊಮ್ಮಾಯಿ

Bengaluru City

2023ರ ಚುನಾವಣೆಯಲ್ಲಿ ಭಾಜಪ ಕಮಲ ಅರಳಲಿದೆ: ಬಸವರಾಜ ಬೊಮ್ಮಾಯಿ

Public TV
Last updated: March 10, 2022 9:36 pm
Public TV
Share
2 Min Read
BASAVARJ BOMMAI
SHARE

ಬೆಂಗಳೂರು: 2024 ಚುನಾವಣೆ ನಮ್ಮ ಮುಂದೆ ಇದೆ. ಅಂತೆಯೇ ಜವಾಬ್ದಾರಿಯೂ ಬಹಳಷ್ಟಿದೆ. ಈಗ ಕರ್ನಾಟಕವನ್ನು 2023ರಲ್ಲಿ ಮತ್ತೊಮ್ಮೆ ಭಾಜಪದ ಕಮಲವನ್ನು ಅರಳಿಸುವ ಸಮಯ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ಅವರು ಇಂದು ಐದು ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿರುವ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಗೆ ಭೇಟಿ ನೀಡಿ ವಿಜಯೋತ್ಸವ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ನಮ್ಮೆಲ್ಲರ ಜವಾಬ್ದಾರಿ ಹೆಚ್ಚಾಗಲಿದೆ. ಇನ್ನಷ್ಟು ಚುರುಕಾಗಿ ಜಾಗೃತವಾಗಿ ಮತದಾರರ ಬಳಿಗೆ ಹೋಗಿ ಬಜೆಟ್‌ನಲ್ಲಿ ಘೋಷಣೆ ಮಾಡಿರುವ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಬೇಕಿದೆ. ಅಧಿಕಾರಿಗಳಿಗೆ ನಾನು ಈಗಾಗಲೇ ಸೂಚನೆಯನ್ನು ನೀಡಿದ್ದೇನೆ. ಈ ತಿಂಗಳಿನೊಳಗೆ ಕಡತಗಳು ಸಿದ್ಧವಾಗಬೇಕು. ಏಪ್ರಿಲ್ ತಿಂಗಳ ಒಳಗೆ ಬಜೆಟ್‍ನಲ್ಲಿ ಏನೇನು ಕಾರ್ಯಕ್ರಮಗಳನ್ನು ಇಲಾಖೆಗಳಿಗೆ ಕೊಟ್ಟಿದ್ದೇವೆ ಅವೆಲ್ಲವುಗಳಿಗೆ ಕಾರ್ಯಾದೇಶ ಆಗಬೇಕು ಎಂದು ಸೂಚಿಸಲಾಗಿದೆ. ಕೂಡಲೇ ಎಲ್ಲಾ ಯೋಜನೆಗಳನ್ನು ಪ್ರಾರಂಭಿಸಿ, ಅನುಷ್ಠಾನಗೊಳಿಸುತ್ತೇವೆ. ಕಟ್ಟಕಡೆಯ ವ್ಯಕ್ತಿಗೂ ಯೋಜನೆಗಳನ್ನು ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. ಇದನ್ನೂ ಓದಿ: ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಇಳಿಕೆ

MODI YOGI

ರಾಜ್ಯ ಪ್ರವಾಸ: ಯೋಜನೆಗಳ ಪ್ರಚಾರವನ್ನೂ ಬೂತ್ ಮಟ್ಟದಿಂದ ಕಾರ್ಯಕರ್ತರು ಮಾಡಬೇಕು. ಅವುಗಳ ಪ್ರಯೋಜನ ಪಡೆದುಕೊಳ್ಳುವಂತೆ ಮಾಡಬೇಕು. ಭಾಜಪದ ಸದೃಢ ಸಂಘಟನೆ ಮತ್ತು ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳು ಮುಂದಿನ ಚುನಾವಣೆಯಲ್ಲಿ ಬಳಕೆ ಮಾಡಿ ಜನರ ಹೃದಯವನ್ನು ಗೆದ್ದು 2023ರ ಚುನಾವಣೆಯಲ್ಲಿ ಭಾಜಪದ ಕಮಲವನ್ನು ಅರಳಿಸಿ, ಮುಂದಿನ 5 ವರ್ಷ ಸುಭಿಕ್ಷವಾದ ನಾಡನ್ನು ಕಟ್ಟುವ ಸಂಕಲ್ಪವನ್ನು, ಪಣವನ್ನು ತೊಟ್ಟಿದ್ದೇವೆ. ಇದನ್ನೂ ಓದಿ: 12 ಸಾವಿರ ರಷ್ಯಾ ಸೈನಿಕರ ಸಾವು – 20 ಲಕ್ಷ ಉಕ್ರೇನಿಯನ್ನರು ಪಲಾಯನ

bjp - congress

ಅಧಿವೇಶನ ಮುಗಿದ ಕೂಡಲೇ ನಮ್ಮ ನಾಯಕರಾದ ಯಡಿಯೂರಪ್ಪನವರ ಸಮೇತ, ಕೇಂದ್ರದ ನಾಯಕರ ಜೊತೆ ಇಡೀ ರಾಜ್ಯವನ್ನು ಸುತ್ತಿ ಭಾಜಪದ ನೆಲೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ಕೆಲಸ ಮಾಡುತ್ತೇವೆ. ಹೊಸ ಹೊಸ ಕ್ಷೇತ್ರಗಳಲ್ಲಿ ಭಾಜಪವನ್ನು ಆರಿಸುವವರೆಗೂ ಬಿಡುವುದಿಲ್ಲ. ಈಗಾಗಲೇ ಕಾರ್ಯಪ್ರವೃತ್ತವಾಗಿದ್ದೇವೆ. ಅದಕ್ಕಾಗಿ ಸರ್ಕಾರದ ವತಿಯಿಂದ ಎಲ್ಲಾ ಜನಪರವಾದ ಕಾರ್ಯಕ್ರಮಗಳನ್ನು ಮಾಡಲು ನಾವು ಸನ್ನದ್ಧರಾಗಿದ್ದೇವೆ. ಪಕ್ಷದ ಕಾರ್ಯಕರ್ತರು ಕೂಡ ಪಕ್ಷದ ಸಂಘಟನೆ, ಬಲಪಡಿಸುವುದು, ಭಾಜಪವನ್ನು ಅಧಿಕಾರಕ್ಕೆ ತರಲು ಎಲ್ಲಾ ಕಾರ್ಯಕ್ರಮಗಳಿಗೆ ಶಕ್ತಿ ತುಂಬಲು ಸನ್ನದ್ಧರಾಗಬೇಕೆಂದು ಕರೆ ನೀಡಿದರು.

modi yogi1

ಕರ್ನಾಟಕದಲ್ಲಿ ಕಾಂಗ್ರೆಸ್ ಮುಳುಗಲಿದೆ: ದೇಶದಲ್ಲಿ ಕಾಂಗ್ರೆಸ್ ಮುಳುಗಿಹೋಗಿದೆ. ಮುಂದೆ ಕರ್ನಾಟಕದಲ್ಲಿಯೂ ಮುಳುಗಲಿದೆ. ಕಾಂಗ್ರೆಸ್ ಪಕ್ಷದ ಅಸ್ತಿತ್ವಕ್ಕಾಗಿ ಹೋರಾಡಬೇಕಿದೆ, ರಾಷ್ಟ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ದಿಕ್ಕು ತೋಚದ, ದಿಕ್ಕಾಪಾಲಾಗಿರುವ ಧೂಳೀಪಟವಾಗಿರುವ ಪಕ್ಷ. ಇಡೀ ರಾಷ್ಟ್ರದಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದೆ. ಭಾಜಪ ದೇಶದ ಭವಿಷ್ಯಕ್ಕಾಗಿ ಹೋರಾಟ ಮತ್ತು ಕೆಲಸವನ್ನು ಮಾಡುತ್ತಿದ್ದೇವೆ. ಕಾಂಗ್ರೆಸ್‌ನವರು ತಮ್ಮ ಪಕ್ಷದ ಅಸ್ತಿತ್ವಕ್ಕಾಗಿ ಹೋರಾಟ ಮಾಡುತ್ತಾರೆ. ಇದು ವ್ಯತ್ಯಾಸ. ನಾಲ್ಕು ರಾಜ್ಯಗಳಲ್ಲಿ ವಿಜಯ ಗಳಿಸಿದೆ. ಮಂದೆ ಗುಜರಾತ್, ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, ಕರ್ನಾಟಕದಲಿ ಭಾಜಪ ಹುಟ್ಟುವುದು ಅಷ್ಟೇ ಸತ್ಯ ಎಂದರು.

modi yogi
ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರ ನೋಂದಣಿ ಮಾಡಿಸುವವರಿಗೆ ಫ್ರಿಡ್ಜ್, ಟಿವಿಯನ್ನು ಸಿದ್ಧರಾಮಯ್ಯನವರ ಕ್ಷೇತ್ರ ಬಾದಾಮಿಯಲ್ಲಿ ನೀಡಲಾಗಿದೆ. ಕಾಂಗ್ರೆಸ್‌ನವರಿಗೆ  ತೆಗೆದುಕೊಳ್ಳುವುದು ಕೊಡುವುದು ಕರಗತವಾಗಿರುವಂಥದ್ದು. ಯಾವ ಕೆಲಸವೂ ಆಗುವುದಿಲ್ಲ. ಈಗೇನು ಕೊಡುತ್ತಾರೋ, ಅದಕ್ಕೆ ಹತ್ತುಪಟ್ಟು ಅಧಿಕಾರಕ್ಕೆ ಬಂದ ನಂತರ ತೆಗೆದುಕೊಳ್ಳುತ್ತಾರೆ. ಈ ದುಸ್ಥಿತಿಯಲ್ಲಿ ಅವರಿದ್ದಾರೆ. ಅಧಿಕಾರಕ್ಕೆ ಬರುವುದಿಲ್ಲ ಎಂದು ಗೊತ್ತಿದ್ದೇ, ಬೇಜಾವಾಬ್ದಾರಿಯಿಂದ ಬೇಕಾದ್ದನ್ನು ಹೇಳಿದ್ದರು. ನಮ್ಮ ಕಾಂಗ್ರೆಸ್ ನಾಯಕರು ಸರ್ಕಾರ ಮಾಡಲು ಗೋವಾಕ್ಕೆ ತೆರಳಿದ್ದಾರೆ. ಪರಿಸ್ಥಿತಿ ಬೇರೆನೇ ಆಗಿದೆ. ಅವರ ಕಾಲ್ಗುಣ ಸರಿಯಿಲ್ಲ ಎಂದರು.

TAGGED:assembly electionBasavaraj Bommaibengalurubjpcongresselectionಕಾಂಗ್ರೆಸ್ಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

Suhana Khan
ಮಗಳನ್ನೇ ಸಹದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories

You Might Also Like

Hezbollah new chief Sheikh Naim Qassem
Latest

ಇಸ್ರೇಲ್ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಮಟಾಶ್

Public TV
By Public TV
7 minutes ago
pm modi
Latest

ಬಂಗಾಳದ ಜನತೆಗೆ ಪ್ರಧಾನಿ ಮೋದಿ 6 ಗ್ಯಾರಂಟಿ ಘೋಷಣೆ

Public TV
By Public TV
36 minutes ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
53 minutes ago
R.Ashwin David Miller
Cricket

ನಿಮ್ಮ ನಿರ್ಧಾರ ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ: ಮಿಲ್ಲರ್‌ ವಿರುದ್ಧ ಆರ್‌.ಅಶ್ವಿನ್‌ ಬೇಸರ

Public TV
By Public TV
1 hour ago
mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
2 hours ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?