Bengaluru CityDistrictsKarnatakaLatestMain Post

ಕಳೆದ 10 ವರ್ಷಗಳಲ್ಲಿ ಗರಿಷ್ಠ ಫಲಿತಾಂಶ ಸಾಧಿಸಿದ್ದು ಹೆಮ್ಮೆಯ ಸಂಗತಿ: ಬೊಮ್ಮಾಯಿ

ಬೆಂಗಳೂರು: ಇಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸಸವರಾಜ ಬೊಮ್ಮಾಯಿ ಅವರು ಮಕ್ಕಳಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ಈ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯವು, ಕಳೆದ ಹತ್ತು ವರ್ಷಗಳಲ್ಲಿ ಗರಿಷ್ಠ ಫಲಿತಾಂಶ 85.63% ನ್ನು ಸಾಧಿಸಿದ್ದು ಹೆಮ್ಮೆಯ ಸಂಗತಿ ಎಂದು ತಿಳಿಸಿದ್ದಾರೆ.

ಟ್ವೀಟ್‍ನಲ್ಲೇನಿದೆ..?
ಈ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯವು, ಕಳೆದ ಹತ್ತು ವರ್ಷಗಳಲ್ಲಿ ಗರಿಷ್ಠ ಫಲಿತಾಂಶ 85.63% ನ್ನು ಸಾಧಿಸಿದ್ದು ಹೆಮ್ಮೆಯ ಸಂಗತಿ. ಉತ್ತಮ ಅಂಕಗಳಿಸಿ ತೇರ್ಗಡೆಯಾದ ಎಲ್ಲ ವಿದ್ಯಾರ್ಥಿ ವೃಂದಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಈ ಮಹತ್ಸಾಧನೆಗೆ ಕಾರಣವಾದ ಎಲ್ಲ ಶಿಕ್ಷಕ-ಶಿಕ್ಷಕಿಯರು, ತರಬೇತುದಾರರು ಅಭಿನಂದನಾರ್ಹರು. ಇದನ್ನೂ ಓದಿ: ನವಜೋತ್‌ ಸಿಂಗ್‌ ಸಿಧುಗೆ 1 ವರ್ಷ ಜೈಲು ಶಿಕ್ಷೆ

SSLC RESULT

ವಿದ್ಯಾರ್ಥಿಗಳ ವಿಜಯ ಯಾತ್ರೆ ಹೀಗೆ ಮುಂದುವರಿಯಲಿ, ನಾಡಿಗೆ ಕೀರ್ತಿ ತರುವಂತಾಗಲಿ. ಅನುತ್ತೀರ್ಣರಾದ ವಿದ್ಯಾರ್ಥಿಗಳು ನಿರಾಸೆ ಹೊಂದದೇ ಮುಂದಿನ ಭಾರಿ ಮತ್ತಷ್ಟು ಪರಿಶ್ರಮದಿಂದ ಪರೀಕ್ಷೆ ಬರೆದು ಯಶಸ್ವಿಯಾಗಲಿ ಎಂದು ಸಿಎಂ ಶುಭ ಹಾರೈಸಿದರು. ಜಿಲ್ಲೆಯ ಒಂದೇ ಶಾಲೆಯ ಮೂವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ.

ಮೂವರು ಔಟ್ ಆಫ್ ಔಟ್:
ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿಯ ಬಿಜಿಎಸ್ ಶಾಲೆಯ ಜಯಂತಿ ಬಿ ಗೌಡ, ಲೀಸಾ ಎಚ್.ಸಿ, ಪ್ರೀತಿ ಎಸ್ 625 ಅಂಕಗಳನ್ನು ಪಡೆದಿದ್ದಾರೆ. ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿನಿಯರನ್ನು ಶಾಲಾ ಆಡಳಿತ ಮಂಡಳಿ ಅಭಿನಂದಿಸಿದೆ. ಶಿಡ್ಲಘಟ್ಟದ ಬಿಜಿಎಸ್ ಶಾಲೆಯ ಜಿ ಹರ್ಷಿತಾ ಹಾಗೂ ಗೌರಿಬಿದನೂರಿನ ಬಿಜಿಎಸ್ ಶಾಲೆಯ ತೃಪ್ತಿ ಕೆಸಿ 625 ಅಂಕಗಳನ್ನು ಪಡೆದಿದ್ದಾರೆ. ಜಿಲ್ಲೆಯ ಐದು ವಿದ್ಯಾರ್ಥಿಗಳು 625 ಅಂಕ ಪಡೆದಿದ್ದಾರೆ.

ಈ ಬಾರಿ ರಾಜ್ಯದಲ್ಲಿ ಶೇ.85.63 ರಷ್ಟು ಫಲಿತಾಂಶ ಪ್ರಕಟವಾಗಿದೆ. 10 ವರ್ಷಗಳಲ್ಲೇ ಇದು ದಾಖಲೆ ಫಲಿತಾಂಶವಾಗಿದೆ. ಶೇ. 81.03 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ ಶೇ.90.29 ವಿದ್ಯಾರ್ಥಿನಿಯರು ಪಾಸ್ ಆಗಿದ್ದಾರೆ. 145 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿರುವುದು ವಿಶೇಷ. ಸರ್ಕಾರಿ ಶಾಲೆಯ 21, ಅನುದಾನಿತ ಶಾಲೆಯ 8, ಖಾಸಗಿ ಶಾಲೆಯ 116 ವಿದ್ಯಾರ್ಥಿಗಳು 625 ಅಂಕ ಪಡೆದಿದ್ದಾರೆ.

Leave a Reply

Your email address will not be published.

Back to top button