ಬೆಂಗಳೂರು: ಆಜಾದಿ ಕಾ ಅಮೃತಮಹೋತ್ಸವಕ್ಕೆ ಎಲ್ಲಾ ಕಡೆ ಭರ್ಜರಿ ತಯಾರಿಗಳು ನಡೀತಿವೆ. ರಾಜ್ಯ ಸರ್ಕಾರ ಹರ್ ಘರ್ ತಿರಂಗ ಅಭಿಯಾನಕ್ಕೆ ಹೆಚ್ಚು ಒತ್ತು ಕೊಟ್ಟಿದೆ. ಅಭಿಯಾನ ಯಶಸ್ವಿಗೊಳಿಸುವಂತೆ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳಿಗೆ ಸಿಎಂ ಪತ್ರ ಬರೆದಿದ್ದಾರೆ.
Advertisement
ಎಲ್ಲರ ಮನೆಯ ಮೇಲೆ ತಿರಂಗಾ ಹಾರಿಸುವಂತೆ ಮನವಿ ಮಾಡಿದ್ದಾರೆ. ಆದರೆ ಹರ್ ಘರ್ ತಿರಂಗಾ ಅಭಿಯಾನವನ್ನು ಬಿಜೆಪಿಯ ನಾಟಕ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಜರಿದಿದ್ದಾರೆ. ಮೊದಲು ಧ್ವಜದ ಬಣ್ಣ ಕೆಂಪು ಇತ್ತು, ಅದಕ್ಕೆ ಕೇಸರಿ ಬದಲು ಕೆಂಪು ಅಂತಾ ಹೇಳಿದ್ದೇ. ಅದೇನು ದೊಡ್ಡ ಅಪರಾಧನಾ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರ ರಚಿಸಿದ್ದ ಎಸಿಬಿ ರದ್ದು – ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಮರುಜೀವ
Advertisement
Advertisement
ಇದೇ ವೇಳೆ ಧ್ವಜ ಖರೀದಿಗೆ ತಾಲೂಕು ಕಚೇರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ದೋಷಯುಕ್ತ ಧ್ವಜಗಳನ್ನು ಜನರಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ. ತಮ್ಮ ಆರೋಪಕ್ಕೆ ಪೂರಕವಾಗಿ ಹೊಳೆನರಸೀಪುರದಲ್ಲಿ ಮಾರಾಟ ಮಾಡಲಾಗಿರುವ ದೋಷಯುಕ್ತ ಧ್ವಜದ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ: ಪ್ರಯಾಣಿಕರಿಗೆ ಗುಡ್ ನ್ಯೂಸ್- ಆ.15ರಂದು ಬಿಎಂಟಿಸಿ ಬಸ್‍ನಲ್ಲಿ ಫ್ರೀ ಪ್ರಯಾಣ
Advertisement
ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ಬಿಎಂಟಿಸಿ ರಜತ ಮಹೋತ್ಸವ ಪ್ರಯುಕ್ತ ಬೆಂಗಳೂರಿಗರಿಗೆ ಬಿಎಂಟಿಸಿ ಗಿಫ್ಟ್ ನೀಡಿದೆ. ಆಗಸ್ಟ್ 15ರಂದು ದಿನ ಪೂರ್ತಿ ಬೆಂಗಳೂರಿಗರು ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಅಂದ ಹಾಗೇ ಆಗಸ್ಟ್ 15ರಂದು ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಪ್ರತ್ಯೇಕ ರ್ಯಾಲಿ ಹಮ್ಮಿಕೊಂಡಿದ್ದು, ಲಕ್ಷಾಂತರ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಹೀಗಾಗಿ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಪೊಲೀಸರು ಪ್ಲಾನ್ ಮಾಡ್ತಾ ಇದ್ದಾರೆ.