Latest

ಸಾರ್ವಜನಿಕ ಗಣೇಶೋತ್ಸವ ಕುರಿತು ಸಿಎಂ ನಿರ್ಧಾರ: ಬೈರತಿ ಬಸವರಾಜು

Published

on

ಸಾರ್ವಜನಿಕ ಗಣೇಶೋತ್ಸವ ಕುರಿತು ಸಿಎಂ ನಿರ್ಧಾರ: ಬೈರತಿ ಬಸವರಾಜು
Share this

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವ ಮತ್ತು ಮೆರವಣಿಗೆ ಸಂಬಂಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ತಿಳಿಸಿದರು.

ಸಾರ್ವಜನಿಕ ಗಣೇಶೋತ್ಸವ ಕುರಿತು ಸಿಎಂ ನಿರ್ಧಾರ: ಬೈರತಿ ಬಸವರಾಜು

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಲು ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಇದೇ ವೇಳೆ ಪೆಟ್ರೋಲ್, ಡೀಸೆಲ್ ಮತ್ತು ಎಲ್.ಪಿ.ಜಿ. ಸಿಲಿಂಡರ್ ಗಳ ಬೆಲೆ ಹೆಚ್ಚಳ ಕುರಿತು ಪ್ರಶ್ನಿಸಿದಾಗ ಈ ಬಗ್ಗೆ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ಜೊತೆ ಮಾತನಾಡಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮೈಸೂರಿನ ಜನರಿಗೆ ನವಿಲು ಯಾವುದು? ಕೆಂಭೂತ ಯಾವುದು ಎಂಬುದು ಗೊತ್ತಿದೆ: ಮಹದೇವಪ್ಪ

ಸಾರ್ವಜನಿಕ ಗಣೇಶೋತ್ಸವ ಕುರಿತು ಸಿಎಂ ನಿರ್ಧಾರ: ಬೈರತಿ ಬಸವರಾಜು

ರಾಜ್ಯದ 7 ನಗರಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಅನುಷ್ಠಾನ ಹಂತದಲ್ಲಿವೆ. ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ಯಾವುದೇ ಅನುದಾನದ ಕೊರತೆ ಇಲ್ಲ. ಸ್ಮಾರ್ಟ್ ಸಿಟಿ ಯೋಜನೆಯಡಿ ಮೈಸೂರು, ಬಳ್ಳಾರಿ, ವಿಜಯಪುರ ಮತ್ತು ಕಲಬುರ್ಗಿ ನಗರಗಳನ್ನು ಸೇರಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನಕ್ಕೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹೆಸರಿಡಿ: ಪ್ರತಾಪ್ ಸಿಂಹ

ಸಾರ್ವಜನಿಕ ಗಣೇಶೋತ್ಸವ ಕುರಿತು ಸಿಎಂ ನಿರ್ಧಾರ: ಬೈರತಿ ಬಸವರಾಜು

ಪಕ್ಷದ ಸೂಚನೆಯ ಮೇರೆಗೆ ಜಗನ್ನಾಥ ಭವನಕ್ಕೆ ಪ್ರತಿಯೊಬ್ಬ ಸಚಿವರು 15 ದಿನಕ್ಕೊಮ್ಮೆ ಭೇಟಿ ಕೊಡಬೇಕಾಗಿದೆ. ಇನ್ನು ಮುಂದೆ ನಿರಂತರವಾಗಿ ಇಲ್ಲಿಗೆ ಆಗಮಿಸುವುದಾಗಿ ಅವರು ಹೇಳಿದರು. ರಾಜ್ಯದ ಎಸ್.ಸಿ. ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಕು. ಮಂಜುಳಾ, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಮತ್ತು ಮುಖಂಡರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Advertisement
Advertisement