Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೌಶಲ್ಯ ರಥಕ್ಕೆ ಬೊಮ್ಮಾಯಿ ಚಾಲನೆ – 2.5 ಲಕ್ಷ ಯುವ ಜನತೆಗೆ ತರಬೇತಿ ನೀಡುವ ಗುರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೌಶಲ್ಯ ರಥಕ್ಕೆ ಬೊಮ್ಮಾಯಿ ಚಾಲನೆ – 2.5 ಲಕ್ಷ ಯುವ ಜನತೆಗೆ ತರಬೇತಿ ನೀಡುವ ಗುರಿ

Districts

ಕೌಶಲ್ಯ ರಥಕ್ಕೆ ಬೊಮ್ಮಾಯಿ ಚಾಲನೆ – 2.5 ಲಕ್ಷ ಯುವ ಜನತೆಗೆ ತರಬೇತಿ ನೀಡುವ ಗುರಿ

Public TV
Last updated: April 22, 2022 12:28 pm
Public TV
Share
3 Min Read
Bommai 3
SHARE

ಕಲಬುರಗಿ: ರಾಜ್ಯದ ಗ್ರಾಮೀಣ ಭಾಗದ ಪ್ರದೇಶದಲ್ಲಿ ವಾಸಿಸುತ್ತಿರುವ ಯುವಜನತೆಗೆ ಕೌಶಲ್ಯ ತರಬೇತಿಯನ್ನು ನೀಡಲು ಸಿದ್ಧಗೊಂಡಿರುವ ಸುಸಜ್ಜಿತ ಕೌಶಲ್ಯ ರಥಗಳಿಗೆ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ನಾಲ್ಕು ತರಬೇತಿ ನೀಡುವ ಬಸ್ಸುಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಸಕ್ತ ವರ್ಷ 2.5 ಲಕ್ಷ ಯುವ ಜನತೆಗೆ ಕೌಶಲ್ಯ ತರಬೇತಿ ನೀಡುವ ಗುರಿ ಹೊಂದಲಾಗಿದೆ. ದೇಶದಲ್ಲಿರುವ ಒಟ್ಟಾರೆ ಜನಸಂಖ್ಯೆಯಲ್ಲಿ ಯುವ ಜನತೆಯ ಪ್ರಮಾಣ ಶೇ.46 ರಷ್ಟಿದೆ. ಹೀಗಾಗಿ ಇವರಿಗೆ ಉತ್ತಮ ಶಿಕ್ಷಣ ಮತ್ತು ಕೌಶಲ್ಯ ನೀಡಿ ಉದ್ಯೋಗ ಒದಗಿಸುವುದು ಸರ್ಕಾರದ ಕರ್ತವ್ಯ. ಕೇಂದ್ರ ಸರ್ಕಾರವು ಪಂಡಿತ್ ದೀನ್ ದಯಾಳ್ ಯೋಜನೆಯಡಿ ಕೌಶಲ್ಯ ತರಬೇತಿ ನೀಡುತ್ತಿದೆ. ಅದೇ ರೀತಿ ರಾಜ್ಯ ಸರ್ಕಾರ ಕೌಶಲ್ಯ ಕರ್ನಾಟಕ ಯೋಜನೆಯಡಿ ಯುವಕ-ಯುವತಿಯರಿಗೆ ಸೂಕ್ತ ತರಬೇತಿ ನೀಡಿ ಸ್ವಾವಲಂಬಿಯನ್ನಾಗಿಸುವ ಪ್ರಯತ್ನ ಮುಂದುವರೆದಿದೆ ಎಂದರು.  ಇದನ್ನೂ ಓದಿ: ಪ್ರಧಾನಿ ಭೇಟಿಗೂ ಮುನ್ನ ಜಮ್ಮುವಿನಲ್ಲಿ ಎನ್‌ಕೌಂಟರ್ – ಇಬ್ಬರು ಉಗ್ರರ ಹತ್ಯೆ

Bommai 4

ಕೌಶಲ್ಯ ರಥಗಳು ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸಂಚರಿಸಿ ಸ್ಥಳದಲ್ಲಿಯೇ ಉಚಿತವಾಗಿ ಎಲೆಕ್ಟ್ರಿಕಲ್ ಟೆಕ್ನಿಷಿಯನ್ ಮತ್ತು ಬ್ಯೂಟಿ ಥೆರಾಪಿಸ್ಟ್ ಕುರಿತು ಯುವಕ-ಯುವತಿಯರಿಗೆ ಒಂದು ತಿಂಗಳ ಕಾಲ ತರಬೇತಿ ನೀಡಿ ಸರ್ಟಿಫಿಕೇಟ್ ನೀಡಲಾಗುತ್ತಿದೆ. ಇದರಿಂದ ಅವರಿಗೆ ಸ್ವಯಂ ಉದ್ಯೋಗಕ್ಕೆ ಅನುಕೂಲವಾಗಲಿದೆ. ತರಬೇತಿ ಪಡೆದವರನ್ನು ಮಿಕ್ಸಿ, ಗೃಹ ಬಳಕೆ ಮಿಕ್ಸಿ, ಮೋಟಾರ್ ವೈಂಡಿಂಗ್ ಹೀಗೆ ಸ್ಥಳೀಯವಾಗಿ ಕಂಪನಿಗಳೊಂದಿಗೆ ಜೋಡಿಸಿ ಉದ್ಯೋಗ ಒದಗಿಸುವ ಹ್ಯಾಂಡ್ ಹೋಲ್ಡಿಂಗ್ ಜವಾಬ್ದಾರಿ ಸಹ ಕೌಶಲ್ಯ ಅಭಿವೃದ್ಧಿ ನಿಗಮ ಮಾಡಲಿದೆ ಎಂದು ತಿಳಿಸಿದರು.

Bommai 2

ಮುಂದಿನ ದಿನದಲ್ಲಿ ಗ್ರಾಮೀಣ ಭಾಗದಲ್ಲಿ ಟ್ರಾನ್ಸ್ ಫಾರ್ಮರ್ (ಟಿ.ಸಿ) ಸಹ ಸ್ಥಳದಲ್ಲಿಯೇ ಯುವಕರು ದುರಸ್ತಿ ಮಾಡುವಂತಾಗಲು ಅಗತ್ಯ ಕೌಶಲ್ಯ ತರಬೇತಿ ನೀಡಬೇಕು ಎಂದು ಸ್ಥಳದಲ್ಲಿದ್ದ ನಿಗಮದ ಅಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದರು. ಇದರಿಂದ ರೈತಾಪಿ ವರ್ಗದ ಜನರಿಗೆ ತುಂಬಾ ಅನುಕೂಲವಾಗಲಿದೆ ಎಂದರು. ಇದನ್ನೂ ಓದಿ: ಎಲೆಕ್ಟ್ರಿಕ್ ವಾಹನಗಳ ಕಂಪನಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ನಿತಿನ್ ಗಡ್ಕರಿ

ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚಿನ ಗುರಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಯುವಕ-ಯುವತಿಯರಿಗೆ ತರಬೇತಿ ನೀಡಲು ಗುರಿ ಹೆಚ್ಚಿಸಲಾಗುವುದೆಂದು ಇದೇ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

Bommai 1 1

ಉನ್ನತ ಶಿಕ್ಷಣ, ಐ.ಟಿ-ಬಿ.ಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರು ಮಾತನಾಡಿ, ಕಳೆದ ಅರ್ಥಿಕ ವರ್ಷದಲ್ಲಿ ಕೌಶಲ್ಯ ತರಬೇತಿ ನೀಡಲು 75 ಸಾವಿರ ಗುರಿ ನೀಡಲಾಗಿತ್ತು. 2022-23ನೇ ಸಾಲಿಗೆ 2.5 ಲಕ್ಷ ಜನರಿಗೆ ಕೌಶಲ್ಯತೆ ನೀಡುವ ಗುರಿ ಹೊಂದಲಾಗಿದೆ. ಶೇ.75 ರಷ್ಟು ಯುವ ಸಮುದಾಯ ಕೌಶಲ್ಯದಿಂದ ವಿಮುಖರಾಗಿದ್ದು, ಅವರೆಲ್ಲರಿಗೂ ಶಿಕ್ಷಣ, ಕೌಶಲ್ಯ ಹಾಗೂ ಜೀವನೋಪಾಯದ ತರಬೇತಿ ನೀಡುವ ಸಂಕಲ್ಪ ಮಾಡಿದ್ದೇವೆ. ಸ್ವ-ಸಹಾಯ ಸಂಘಗಳಿಗೆ 500 ಕೋಟಿ ರೂ. ನೀಡಲಾಗಿದೆ. ಇದಲ್ಲದೆ ಕೆ.ಜಿ.ಟಿ.ಟಿ.ಐ, ಜಿ.ಟಿ.ಟಿ.ಸಿ., ಐ.ಟಿ.ಐ, ಪಾಲಿಟೆಕ್ನಿಕ್ ಮೂಲಕವು ಸಹ ರಾಜ್ಯದಲ್ಲಿ ಲಕ್ಷಾಂತರ ಯುವಜನತೆಗೆ ಕೌಶಲ್ಯ ತರಬೇತಿ ನೀಡುತ್ತಿದ್ದೇವೆ ಎಂದರು. ಇದನ್ನೂ ಓದಿ: ದೆಹಲಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಬೂಸ್ಟರ್‌ ಡೋಸ್‌ ಉಚಿತ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಮುರುಗೇಶ ನಿರಾಣಿ, ಕೆ.ಕೆ.ಅರ್.ಡಿ.ಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, ಕೆ.ಕೆ.ಅರ್.ಟಿ.ಸಿ ಅಧ್ಯಕ್ಷ ರಾಜ್‍ಕುಮಾರ್ ಪಾಟೀಲ್ ತೇಲ್ಕೂರ್, ಕೆ.ಯು.ಡಬ್ಲ್ಯೂ.ಎಸ್.ಡಿ.ಬಿ. ಅಧ್ಯಕ್ಷ ರಾಜು ಗೌಡ, ಸಂಸದ ಡಾ.ಉಮೇಶ್ ಜಾಧವ್, ಶಾಸಕ ಬಸವರಾಜ್ ಮತ್ತಿಮೂಡ, ಮಾಜಿ ಸಚಿವ ಲಕ್ಷ್ಮಣ ಸವದಿ, ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ್, ಡಿ.ಸಿ. ಯಶವಂತ್ ವಿ. ಗುರುಕರ್, ನಗರ ಪೆÇಲೀಸ್ ಆಯುಕ್ತ ಡಾ.ವೈ.ಎಸ್.ರವಿಕುನಾರ, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ದಿಲೀಷ್ ಸಾಸಿ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಡಿ. ಗೌಡ, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ನಾಗಾಬಾಯಿ ಡಿ. ದೊಡ್ಡಮನಿ, ಸಹಾಯಕ ನಿರ್ದೇಶಕ ಸುದರ್ಶನ್, ವ್ಯವಸ್ಥಾಪಕ ಸಂತೋಷ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ತರಬೇತಿ ವಿವರ: ಎಲೆಕ್ಟ್ರಿಕಲ್ ಟೆಕ್ನಿಷಿಯನ್ ಮತ್ತು ಬ್ಯೂಟಿ ಥೆರಾಪಿಸ್ಟ್ ಉಚಿತ ತರಬೇತಿಯ ಅವಧಿ ತಲಾ 208 ಗಂಟೆಯದ್ದಾಗಿದೆ. ಪ್ರತಿ ದಿನ 8 ಗಂಟೆ ತರಬೇತಿ ನೀಡಲಾಗುತ್ತದೆ. ಪ್ರತಿ ಬ್ಯಾಚಿನಲ್ಲಿ 15 ಜನರಿಗೆ ಅವಕಾಶವಿದ್ದು, ಒಂದು ತಿಂಗಳಿನಲ್ಲಿ 15 ಜನರಿಗೆ ತರಬೇತಿಗೆ ನೀಡಲಾಗುತ್ತದೆ.

TAGGED:Basavaraj BommaiKalaburagiSkill on wheelsಕಲಬುರಗಿಕೌಶಲ್ಯ ರಥಬಸವರಾಜ್ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
23 minutes ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
36 minutes ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
1 hour ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
1 hour ago
Narendra Modi 1 2
Latest

ಕಾಂಗ್ರೆಸ್‌ ಮಿತ್ರ ಪಕ್ಷಗಳಿಂದ ಭ್ರೂಣ ಹತ್ಯೆ – ದೇಶದ ಮಹಿಳೆಯರಲ್ಲಿ ಕ್ಷಮೆ ಕೇಳಿದ ಮೋದಿ

Public TV
By Public TV
2 hours ago
Iranian Envoy
Latest

ಭಾರತದ 2 ತೈಲ ಟ್ಯಾಂಕರ್‌ ಮೇಲೆ ಗುಂಡಿನ ದಾಳಿ – ಇರಾನ್‌ ರಾಯಭಾರಿಗೆ ಭಾರತ ಸಮನ್ಸ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?