ನವದೆಹಲಿ: ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟರ್ (Manohar Lal Khattar) ಅವರನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (D.K Shivakumar) ಅವರು ದೆಹಲಿಯಲ್ಲಿ ಭೇಟಿಯಾದರು. ಈ ವೇಳೆ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಿಗೆ ಅನುಮತಿ ನೀಡಲು ಮನವಿ ಮಾಡಿದರು.
ಮೆಟ್ರೋ ಮೂರನೇ ಹಂತದ ಯೋಜನೆಯಲ್ಲಿ 44.65 ಕಿ.ಮೀ ಉದ್ದದ ಡಬಲ್ ಡೆಕ್ಕರ್ ಮೆಲ್ಸೇತುವೆ ನಿರ್ಮಾಣಕ್ಕೆ ಬಿಎಂಆರ್ ಸಿಎಲ್ (BMRCL) ಮುಂದಾಗಿದ್ದು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ಯೋಜನೆಯ ವೆಚ್ಚ 9,700 ಕೋಟಿ ರೂ. ಆಗಿದ್ದು, ಕರ್ನಾಟಕ ಸರ್ಕಾರವೇ ಇದನ್ನು ಭರಿಸಲಿದೆ. ಆದರೆ ಯೋಜನೆಯಲ್ಲಿ ಬಿಎಂಆರ್ ಸಿಎಲ್ ಮಂಡಳಿಯು ಸಣ್ಣ ಬದಲಾವಣೆ ಪ್ರಸ್ತಾಪ ಮಾಡಿದ್ದು, ಕೇಂದ್ರ ಸರ್ಕಾರ ಈ ಯೋಜನೆಯನ್ನು ಆರಂಭಿಸಲು ಬಿಎಂಆರ್ ಸಿಎಲ್ ಗೆ ಅನುಮತಿ ನೀಡಬೇಕು ಎಂದು ಕೋರಿದರು. ಇದನ್ನೂ ಓದಿ: ಸತ್ತವರ ಹೆಸರಲ್ಲೂ ಹಣ ಹೋಗ್ತಿದೆ, ಅಂಗಡಿಗೂ ವಿದ್ಯುತ್ ಬಳಕೆ ಆಗ್ತಿದೆ: ಗ್ಯಾರಂಟಿ ಪರಿಷ್ಕರಣೆ ಬಗ್ಗೆ ಸಿಎಂ ರಿಯಾಕ್ಷನ್
Met Hon’ble Union Minister for Housing and Urban Affairs Shri Manohar Lal Khattar and sought speedy approvals for key infrastructure projects that will transform mobility in Bengaluru and drive Karnataka’s next phase of growth.
We discussed the pending proposals under the Urban… pic.twitter.com/ecb7p08DfV
— DK Shivakumar (@DKShivakumar) June 10, 2026
ಮೆಟ್ರೋ ಎರಡನೇ ಹಂತದ ಪರಿಷ್ಕೃತ ಯೋಜನಾ ವೆಚ್ಚಕ್ಕೆ ಅನುಮತಿ ನೀಡಲು ಮನವಿ ಮಾಡಿದರು. ಈ ಯೋಜನೆಗೆ ಕೇಂದ್ರ ಸರ್ಕಾರ 26,405.14 ಕೋಟಿ ರೂ. ಅಂದಾಜು ವೆಚ್ಚಕ್ಕೆ ಅನುಮತಿ ನೀಡಿತ್ತು. 72.095 ಕಿ.ಮೀ ಉದ್ದ ಹಾಗೂ 61 ನಿಲ್ದಾಣಗಳನ್ನು ಒಳಗೊಂಡಿರುವ ಈ ಯೋಜನೆ ಅಂದಾಜು ವೆಚ್ಚ ಈಗ 40,425.02 ಕೋಟಿ ರೂ.ಗೆ ಅಂದರೆ 14,019.88 ಕೋಟಿ ರೂ. ಏರಿಕೆ ಮಾಡಲಾಗಿದೆ. ಆದಷ್ಟು ಬೇಗ ಈ ಪರಿಷ್ಕೃತ ಯೋಜನಾ ವೆಚ್ಚಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕು.
ಮೆಟ್ರೋ ಮೂರನೇ ಎ ಹಂತ ಯೋಜನೆಯ ಭಾಗವಾದ ಸರ್ಜಾಪುರದಿಂದ ಹೆಬ್ಬಾಳದವರೆಗೆ ಒಟ್ಟು 37.804 ಕಿ.ಮೀ (14.28 ಕಿ.ಮೀ ಸುರಂಗ ಹಾಗೂ 23.524 ಕಿ.ಮೀ ಮೇಲ್ಸೇತುವೆ) ಉದ್ದವಿದೆ. ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಕೆಲವು ಮಾರ್ಪಾಡು ಮಾಡಲಾಗಿದೆ. 25,999 ಕೋಟಿ ರೂ. ಅಂದಾಜು ವೆಚ್ಚದ ಪರಿಷ್ಕೃತ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದ್ದು, ಆದಷ್ಟು ಬೇಗ ಇದಕ್ಕೆ ಅನುಮತಿ ನೀಡಬೇಕು.
ಬೆಂಗಳೂರು- ಮೈಸೂರು, ಬೆಂಗಳೂರು- ಕನಕಪುರ, ಬೆಂಗಳೂರು- ತುಮಕೂರು, ಬೆಂಗಳೂರು- ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು- ಕೋಲಾರ ನಡುವೆ ಪ್ರಾದೇಶಿಕ ಕ್ಷಿಪ್ರ ರೈಲು ಸಾರಿಗೆ ವ್ಯವಸ್ಥೆ ಜಾರಿಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ಸಿಎಂ ಮನವಿಗೆ ಕೇಂದ್ರ ಸಚಿವರು ಸಕರಾತ್ಮಕವಾಗಿ ಸ್ಪಂಧಿಸಿದ್ದಾರೆ. ಇದನ್ನೂ ಓದಿ: ಕಸ ಸಂಸ್ಕರಣೆ ನೆಪದಲ್ಲಿ 39,000 ಕೋಟಿ ಹಗರಣ – 10,000 ಕೋಟಿ ಕಿಕ್‌ಬ್ಯಾಕ್: ಆರ್.ಅಶೋಕ್ ಬಾಂಬ್
