ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ವರ್ಗಾವಣೆ ಆರೋಪಕ್ಕೆ ಕಾಂಗ್ರೆಸ್ ಸರ್ಕಾರ (Congress Govt) ತಬ್ಬಿಬ್ಬಾಗಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತರಿಗೆ ಖಡಕ್ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
ಹೆಚ್‍ಡಿಕೆ ಆರೋಪದ ಬೆನ್ನಲ್ಲೆ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು `ಬಿ ಕೇರ್ ಫುಲ್’ ಎಂದಿದ್ದಾರೆ. ವರ್ಗಾವಣೆ ವಿಷಯದಲ್ಲಿ ಎಚ್ಚರಿಕೆಯಿಂದ ಇರುವಂತೆ ತನ್ನ ಆಸಪ್ತರಿಗೆ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯ ಸೂಚನೆ ಏನು?: ಸರ್ಕಾರದ ವಿರುದ್ಧ ಸುಮ್ಮನೆ ಆರೋಪ ಮಾಡಿದ್ರೆ ಯಾರೂ ಸಹಿಸಿಕೊಳ್ಳಬಾರದು. ಸರ್ಕಾರದ ಇಮೇಜ್‍ಗೆ ಧಕ್ಕೆ ತರಲು ಕುಮಾರಸ್ವಾಮಿ ಯತ್ನ ಮಾಡ್ತಿದ್ದಾರೆ. ಎಲ್ಲರೂ ಒಗ್ಗಟ್ಟಿನಿಂದ ಎದುರಿಸಬೇಕು. ಪ್ರತಿ ಇಲಾಖೆಯಲ್ಲಿ ವರ್ಗಾವಣೆ (Transfer) ಮಾಡುವಾಗ ಎಚ್ಚರಿಕೆಯಿಂದ ಮಾಡಬೇಕು ಎಂದಿದ್ದಾರೆ. ಇದನ್ನೂ ಓದಿ: ಹೊಲ ಉತ್ತಿ, ಬೀಜ ಬಿತ್ತಿ, ಬೆವರು ಹೊಳೆ ಹರಿಸಿ ಡಿಕೆಶಿ ಲೂಲೂ ಮಾಲ್ ಕಟ್ಟಿದ್ರಾ? – ಕಾಂಗ್ರೆಸ್‌ಗೆ ಜೆಡಿಎಸ್ ಕೌಂಟರ್
ಅಲ್ಲದೆ ವಿವಾದಕ್ಕೆ ಆಸ್ಪದ ಕೊಡದೆ, ಅಕ್ರಮಕ್ಕೆ ಅವಕಾಶ ಕೊಡಬೇಡಿ. ಕುಮಾರಸ್ವಾಮಿ ಆರೋಪಗಳಿಗೆ ಸರಿಯಾದ ಪ್ರತ್ಯುತ್ತರ ಕೊಡಬೇಕು. ಗ್ಯಾರಂಟಿಗಳ ಯಶಸ್ಸನ್ನ ಮರೆ ಮಾಚಲು ಪ್ರಯತ್ನ ಮಾಡಲಾಗ್ತಿದೆ. ಇದಕ್ಕೆ ಅವಕಾಶ ಕೊಡಬಾರದು. ಕುಮಾರಸ್ವಾಮಿ ಕಾಲದ ಪ್ರಕರಣಗಳನ್ನ ತೆಗೆದು ಆರೋಪಗಳಿಗೆ ಉತ್ತರ ಕೊಡಬೇಕು ಎಂದು ಸಿಎಂ ಸೂಚಿಸಿದ್ದಾರೆ ಎನ್ನಲಾಗಿದೆ.
Web Stories