ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಭೇಟಿಯಾಗಿದ್ದಾರೆ.
ಕರ್ನಾಟಕದ (Karnataka) ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿರುವುದು ಇದೇ ಮೊದಲು. ಆಯೋಗದ ಮಹತ್ವದ ಸಭೆಯು ಮುಗಿದ ಬಳಿಕ ರಾಷ್ಟ್ರಪತಿ ಭವನದಲ್ಲಿ ಈ ಉನ್ನತ ಮಟ್ಟದ ಭೇಟಿ ನಡೆದಿದೆ.

ಮೊದಲ ಭೇಟಿಯಲ್ಲೇ ಪ್ರಧಾನಿ ಅವರಿಗೆ ಜಗದ್ಗುರು ಬಸವಣ್ಣನವರ ಭವ್ಯವಾದ ಪುತ್ಥಳಿಯನ್ನು ನೀಡಿ ಮುಖ್ಯಮಂತ್ರಿಗಳು ಗೌರವಿಸಿದರು. ಈ ಸೌಜನ್ಯಯುತ ಭೇಟಿಯ ಸಂದರ್ಭದಲ್ಲಿ ರಾಜ್ಯದ ವಿವಿಧ ಯೋಜನೆಗಳು ಹಾಗೂ ಅಭಿವೃದ್ಧಿ ಕೆಲಸಗಳ ಕುರಿತು ಚರ್ಚಿಸಲಾಗಿದ್ದು, ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಪೂರ್ಣ ಸಹಕಾರ ಹಾಗೂ ಬೆಂಬಲವನ್ನು ನೀಡುವಂತೆ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿಗಳಿಗೆ ಮನವಿ ಮಾಡಿದ್ದಾರೆ.
