Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ಯಾರಂಟಿ ಹಣದಿಂದ ಊರಿಗೆ ಹೋಳಿಗೆ ಊಟ – ಅಜ್ಜಿಯ ಕಾರ್ಯಕ್ಕೆ ಸಿಎಂ ಮೆಚ್ಚುಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗ್ಯಾರಂಟಿ ಹಣದಿಂದ ಊರಿಗೆ ಹೋಳಿಗೆ ಊಟ – ಅಜ್ಜಿಯ ಕಾರ್ಯಕ್ಕೆ ಸಿಎಂ ಮೆಚ್ಚುಗೆ

Bengaluru City

ಗ್ಯಾರಂಟಿ ಹಣದಿಂದ ಊರಿಗೆ ಹೋಳಿಗೆ ಊಟ – ಅಜ್ಜಿಯ ಕಾರ್ಯಕ್ಕೆ ಸಿಎಂ ಮೆಚ್ಚುಗೆ

Public TV
Last updated: August 26, 2024 4:22 pm
Public TV
Share
3 Min Read
Gruhalaxmi Congress Siddaramaiah Chikkodi Raibag
SHARE

– ʻಗೃಹಲಕ್ಷ್ಮಿʼಯರಿಗೆ ಸಿಎಂ ಭಾವನಾತ್ಮಕ ಸಂದೇಶ!

ಬೆಂಗಳೂರು: ಗೃಹಲಕ್ಷ್ಮಿ (Gruhalaxmi) ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಭಾವನಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಬರೆದುಕೊಂಡಿದ್ದಾರೆ.

ಸಿಎಂ ಎಕ್ಸ್‌ನಲ್ಲಿ ಏನಿದೆ?
ಗೃಹಲಕ್ಷ್ಮಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟದಿರಲಿ ಎಂಬ ಸದುದ್ದೇಶದಿಂದ ನಾವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದಾನವಾಗಿದೆ. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿ

ಗೃಹಲಕ್ಷ್ಮಿಯರಿಗೆ ಬೆಲೆಯೇರಿಕೆಯ ಬಿಸಿ ತಟ್ಟದಿರಲಿ ಎಂಬ ಸದುದ್ದೇಶದಿಂದ ನಾವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದಾನವಾಗಿದೆ. ಗೃಹಲಕ್ಷ್ಮಿಯ ಹಣ ಮಕ್ಕಳ ವಿದ್ಯಾಭ್ಯಾಸ, ಮನೆಗೆ ದಿನಸಿ, ಹಬ್ಬಕ್ಕೆ ಬಟ್ಟೆ, ಆಸ್ಪತ್ರೆ ಖರ್ಚು ವೆಚ್ಚ ಭರಿಸಲು ಬಳಕೆಯಾದ ಬಹಳಷ್ಟು ಸುದ್ದಿಗಳನ್ನು ಮಾಧ್ಯಮಗಳಲ್ಲಿ… pic.twitter.com/Gf527sMzlW

— Siddaramaiah (@siddaramaiah) August 26, 2024

ಗೃಹಲಕ್ಷ್ಮಿಯ ಹಣ ಮಕ್ಕಳ ವಿದ್ಯಾಭ್ಯಾಸ, ಮನೆಗೆ ದಿನಸಿ, ಹಬ್ಬಕ್ಕೆ ಬಟ್ಟೆ, ಆಸ್ಪತ್ರೆ ಖರ್ಚು ವೆಚ್ಚ ಭರಿಸಲು ಬಳಕೆಯಾದ ಬಹಳಷ್ಟು ಸುದ್ದಿಗಳನ್ನು ಮಾಧ್ಯಮಗಳಲ್ಲಿ ಕಂಡಿದ್ದೆ. ಅವೆಲ್ಲವೂ ಯೋಜನೆಯ ಯಶಸ್ಸಿಗೆ ಹಿಡಿದ ಕನ್ನಡಿಯಂತಿದ್ದವು. ಆದರೆ ಇಂದು ಬೆಳಗಾವಿ‌ ಜಿಲ್ಲೆಯ ರಾಯಬಾಗ (Raibag) ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೂಟಿ ಎಂಬ ಹಿರಿಯ ಜೀವವೊಂದು ತನಗೆ ಬಂದ ಗೃಹಲಕ್ಷ್ಮಿಯ ಹಣದಲ್ಲಿ ಊರಿನ ಜನಕ್ಕೆಲ್ಲ ಹೋಳಿಗೆ ಊಟ ಹಾಕಿ, ಮುತ್ತೈದೆಯರಿಗೆ ಮಡಿಲು ತುಂಬಿರುವ ವೀಡಿಯೋವನ್ನು ನೋಡಿದೆ, ಆ ತಾಯಿ ಸಿದ್ದರಾಮಯ್ಯನಿಗೆ ಒಳಿತಾಗಲೆಂದು ಇದನ್ನು ಮಾಡುತ್ತಿದ್ದೇನೆಂದು ಹೇಳಿದ್ದು ಕೇಳಿ ಮನಸ್ಸು ತುಂಬಿಬಂತು. ಇಂತಹ ಲಕ್ಷಾಂತರ ತಾಯಂದಿರ, ಅಕ್ಕ ತಂಗಿಯರ ಆಶೀರ್ವಾದ, ಹಾರೈಕೆ ನನ್ನ ಜೊತೆಗಿದೆ. ಈ ಪ್ರೀತಿ, ಅಕ್ಕರೆಗಳೇ ನನ್ನ ಬಲ ಎಂದು ಅವರು ಭಾವನಾತ್ಮಕ ಸಾಲುಗಳನ್ನು ಬರೆದುಕೊಂಡಿದ್ದಾರೆ.

gruhalakshmi scheme elderly women chikkodi

ಗೃಹಲಕ್ಷ್ಮಿ ಯೋಜನೆ ನಿಲ್ಲಬಾರದು, ಇದು ಇನ್ನಷ್ಟು ಬಡವರ ಹೊಟ್ಟೆತುಂಬಿಸಲಿ ಎಂದು ಅಕ್ಕಾತಾಯಿ ಲಂಗೂಟಿ ಅವರು ಮನವಿ ಮಾಡಿದ್ದಾರೆ, ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡಲ್ಲ, ನಮ್ಮ ಸರ್ಕಾರ ಇರುವವರೆಗೆ ಗೃಹಲಕ್ಷ್ಮಿಯ ಹಣ ಬಡವರ ಮನೆ ಸೇರುತ್ತದೆ ಎಂಬುದನ್ನು ಈ ಮೂಲಕ ಆ ಹಿರಿಯ ಜೀವಕ್ಕೆ ಮಾತ್ರವಲ್ಲ ನಾಡಿನ ಪ್ರತಿಯೊಬ್ಬರಿಗೂ ಖಾತ್ರಿಪಡಿಸುತ್ತಿದ್ದೇನೆ. ನಮ್ಮ ಮಣ್ಣಿನ ಗುಣವೇ ಹಾಗೆ, ತನಗೆ ಸಿಕ್ಕಿದ್ದನ್ನು ಹಂಚಿ ತಿನ್ನುವ ಔದಾರ್ಯ, ಇನ್ನೊಬ್ಬರ ಒಳಿತು ಬಯಸುವ ನಿಸ್ವಾರ್ಥ ಭಾವವಿದೆ. ಇಂತಹವರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯವೇ ಸರಿ.

ಹೀಗಿದ್ದರೂ ಅಕ್ಕಾತಾಯಿ ಲಂಗೂಟಿ ಅವರಲ್ಲಿ ಒಂದು ಸವಿನಯ ವಿನಂತಿ ಇದೆ. “ಊರಿಗೆ ಹೋಳಿಗೆ ಊಟ ಹಾಕುವುದು ಒಳ್ಳೆಯ ಗುಣವೇ ಸರಿ. ಆದರೆ ಗೃಹಲಕ್ಷ್ಮಿ ಯೋಜನೆಯ ಹಣದ ಮೇಲಿನ ಮೊದಲ ಹಕ್ಕು ಸ್ವಂತ ಕುಟುಂಬದ್ದಾಗಿದೆ. ಅಕ್ಕಾತಾಯಿಯಂತಹ ಒಳ್ಳೆಯ ಮನಸ್ಸಿನ ಸೋದರಿಯರು ಈ ಹಣವನ್ನು ಮೊದಲು ತಮ್ಮ ಕುಟುಂಬದ ಸದಸ್ಯರಿಗೆ ಆರೋಗ್ಯಕರವಾದ ಊಟ-ತಿಂಡಿ ಮತ್ತು ಮಕ್ಕಳ ಶಿಕ್ಷಣ ನೀಡಲು ಬಳಸಿದಾಗ ಮಾತ್ರ ಯೋಜನೆಯ ಉದ್ದೇಶ ಈಡೇರಿದಂತಾಗುತ್ತದೆ.

ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಅಕ್ಕಾತಾಯಿ ಲಂಗೂಟಿ ಊರಿಗೆ ಹೋಳಿಗೆ ಊಟ ಹಾಕಿಸಿ ಗಮನ ಸೆಳೆದಿದ್ದರು. ಸಿದ್ದರಾಮಯ್ಯನವರು ಪ್ರತಿ ತಿಂಗಳು ನಮಗೆಲ್ಲಾ 2,000 ಹಣ ನೀಡುತ್ತಿದ್ದಾರೆ. ರಾಜಕೀಯವಾಗಿ ಸಿದ್ದರಾಮಯ್ಯನವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು. ಹೀಗಾಗಿ ಗ್ರಾಮದ ದೇವತೆಗೆ ಪೂಜೆ ಸಲ್ಲಿಸಿ ಊರಿಗೆ ಹೋಳಿಗೆ ಊಟ ಹಾಕಿಸುತ್ತಿದ್ದೇನೆ ಎಂದು ಅವರು ಹೇಳಿಕೊಂಡಿದ್ದರು. ಇದನ್ನೂ ಓದಿ: ರಾಹುಲ್ ಖರ್ಗೆ ಟ್ರಸ್ಟ್‌ಗೆ ನಿಯಮಾನುಸಾರ ಸಿಎ ನಿವೇಶನ – ಎಂ.ಬಿ ಪಾಟೀಲ್

TAGGED:chikkodicongressGruhalaxmiRaibagsiddaramaiah
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Rescue of a two year old child who fell into a well in Sirsi
Districts

ಆಟವಾಡುತ್ತಾ ಬಾವಿಗೆ ಬಿದ್ದ ಎರಡು ವರ್ಷದ ಮಗು – ಅದೃಷ್ಟವಶಾತ್‌ ಪಾರು

Public TV
By Public TV
14 minutes ago
Sandesh PG
Bengaluru City

ಗಂಡನನ್ನು ಅರೆಸ್ಟ್‌ ಮಾಡಿ ಹೆಂಡತಿನ ಮಂಚಕ್ಕೆ ಕರಿತಿದ್ದ ಇನ್ಸ್‌ಪೆಕ್ಟರ್‌ – ನೊಂದ ಮಹಿಳೆಯಿಂದ ಸಿಎಂಗೆ ದೂರು

Public TV
By Public TV
20 minutes ago
Jag Laadki
Latest

ನಾವು ಪ್ರತಿಯೊಂದು ಹಡಗಿನ ಜೊತೆ ಸಂಪರ್ಕದಲ್ಲಿದ್ದೇವೆ, ನಾಳೆ ಬರುತ್ತೆ 81 ಸಾವಿರ ಟನ್‌ ಕಚ್ಚಾ ತೈಲ: ಕೇಂದ್ರ

Public TV
By Public TV
33 minutes ago
MEA Aseem Mahajan
Latest

ಕೊಲ್ಲಿ ಯುದ್ಧದ ಬಳಿಕ 2.20 ಲಕ್ಷ ಮಂದಿ ಭಾರತಕ್ಕೆ ರಿಟರ್ನ್‌: ಕೇಂದ್ರ ಸರ್ಕಾರ

Public TV
By Public TV
1 hour ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣು ಪ್ರಕಾಶ್ ಪಾಟೀಲ್

Public TV
By Public TV
1 hour ago
Rain in Raichuru
Districts

ರಾಯಚೂರಿನಲ್ಲಿ ವರುಣಾರ್ಭಟ – ಆಲಿಕಲ್ಲು ಮಳೆಗೆ ತಂಪಾದ ಬಿಸಿಲನಾಡು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?