ಜೂನ್ 30ಕ್ಕೆ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ ಸಿಎಂ

Public TV
1 Min Read
FotoJet 28

ಬೆಂಗಳೂರಿನ ಶಿವಾನಂದ ವೃತ್ತದ ಸಮೀಪ ನಿರ್ಮಾಣಗೊಂಡಿರುವ ನಿರ್ಮಾಪಕರ ಸಂಘದ (Film Producer Association) ನೂತನ ಕಟ್ಟಡವೀಗ ಉದ್ಘಾಟನೆಗೆ ಸಜ್ಜಾಗಿದೆ. ಇದೇ ಜೂನ್ 30ರಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟಿಸುವ ಮೂಲಕ ಚಾಲನೆ ನೀಡಲಿದ್ದಾರೆ. ಈ ವೇಳೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಹಾಜರಿರಲಿದ್ದಾರೆ. ಇದನ್ನೂ ಓದಿ:‘ಇಂಡಿಯನ್ 2’ ಬಜೆಟ್ ಮೀರಲು ಕಾರಣ ತಿಳಿಸಿದ ಕಮಲ್ ಹಾಸನ್

FotoJet 1 17

ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಉದ್ಯಮದ ಅನೇಕ ಗಣ್ಯರ ಶ್ರಮ ಹಾಗೂ ಸಹಕಾರದಿಂದ ಈ ಕಟ್ಟಡ ಉದ್ಘಾಟನೆಯ ಹಂತಕ್ಕೆ ಬಂದಿದೆ ಎಂದು ತಿಳಿಸಿದರು. ಹೊಂಬಾಳೆ ಸಂಸ್ಥೆ (Hombale Films), ಆರ್.ಎಸ್. ಗೌಡ, ವಾಣಿಜ್ಯ ಮಂಡಳಿ ಸೇರಿದಂತೆ ಅನೇಕರು ಈ ನೂತನ ಕಟ್ಟಡ ನಿರ್ಮಾಣಕ್ಕೆ ಸಹಾಯ ಆಗಿದೆ. ನಿರ್ಮಾಪಕ ರಮೇಶ್ ರೆಡ್ಡಿ ಅವರು ಕಟ್ಟಡ ನಿರ್ಮಾಣಕ್ಕೆ ನೆರವು ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ದಕ್ಷಿಣ ಭಾರತದಲ್ಲಿ ನಿರ್ಮಾಪಕರಿಗೆ ಸ್ವಂತ ಕಟ್ಟಡ ಹೊಂದಿರುವುದು ಕರ್ನಾಟಕದಲ್ಲಿ ಮಾತ್ರ ಎಂದು ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣದ ಸಮಿತಿಯ ಅಧ್ಯಕ್ಷ ಸಾರಾ ಗೋವಿಂದು ಇದೇ ಸಂದರ್ಭದಲ್ಲಿ ತಿಳಿಸಿದರು.

Share This Article