ಚಂಡೀಗಢ: ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚಿನ್ನಿ ಸಹೋದರ ಮನೋಹರ್ ಸಿಂಗ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ.
ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಸಹೋದರ ಮನೋಹರ್ ಸಿಂಗ್‍ಗೆ ಟಿಕೆಟ್ ನಿರಾಕರಣೆ ಮಾಡಿದೆ. ಖರಾರ್ ಸಿವಿಲ್ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದ ಚನ್ನಿ ಸಹೋದರ ಮನೋಹರ್ ಸಿಂಗ್ ಬಸ್ಸಿ ಪಠಾನಾದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರೀಕ್ಷೆಯನ್ನು ಹೊಂದಿದ್ದರು. ಆದರೆ ಅವರಿಗೆ ಟಿಕೇಟ್ ಸಿಗದ ಕಾರಣ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದ್ದಾರೆ. ಇದನ್ನೂ ಓದಿ: ನಟೋರಿಯಸ್ ಮೋಸ್ಟ್ ವಾಂಟೆಡ್ ರೌಡಿ ಶೀಟರ್ ಅರೆಸ್ಟ್
Advertisement
Advertisement
ಕಾಂಗ್ರೆಸ್ ತನ್ನ ಶಾಸಕರನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಒಟ್ಟು 79 ಶಾಸಕರ ಪೈಕಿ 61 ಶಾಸಕರಿಗೆ ಪಕ್ಷದ ಟಿಕೆಟ್ ನೀಡಿದೆ. ಈ ಹಿನ್ನೆಲೆಯಿಂದಾಗಿ ಪಕ್ಷದ ಶಾಸಕರುಗಳು ಕಾಂಗ್ರೆಸ್ ಪಕ್ಷದಲ್ಲಿಯೇ ಉಳಿದುಕೊಂಡಿದ್ದರೂ ಟಿಕೆಟ್ ಆಂಕಾಕ್ಷಿಗಳು ಮಾತ್ರ ಅಸಮಾಧಾನವಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಬಸ್ಸಿ ಪಠಾನಾ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಗುರುಪ್ರೀತ್ ಸಿಂಗ್ ಜಿಪಿ ಅವರನ್ನೇ ಕಣಕ್ಕೆ ಇಳಿಸಿದೆ. ಇದರಿಂದಾಗಿ ಅಸಮಾಧಾನಗೊಂಡಿರುವ ಮನೋಹರ್ ಸಿಂಗ್ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಅಕ್ರಮ ಬಡ್ಡಿ ವ್ಯವಹಾರ ಶಂಕೆ – ಮಹಿಳೆಯ ಮೇಲೆ ಶೂಟೌಟ್
Advertisement