ಬೆಂಗಳೂರು: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು (Naxal Activities) ಶೂನ್ಯಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ, ಮಾರ್ಗದರ್ಶನ ನೀಡುವ ಮೂಲಕ ಎಲ್ಲಾ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ (State Intelligence) ನಿರ್ದೇಶಕ ಹೇಮಂತ್.ಎಂ.ನಿಂಬಾಳ್ಕರ್ (Hemanth Nimbalkar) ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸ್ವರ್ಣಪದಕ ಪ್ರದಾನ ಮಾಡಿದರು.
ಬೆಂಗಳೂರು ಕೋರಮಂಗಲದ (Koramangala) ಕೆಎಸ್‌ಆರ್‌ಪಿ ಮೈದಾನದಲ್ಲಿ ಇಂದು ಬೆಳಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಯಿತು. ಇದನ್ನೂ ಓದಿ: Waqf Debate |ವರ್ಷಕ್ಕೆ 12 ಸಾವಿರ ಕೋಟಿ ಆದಾಯ ಸಿಗ್ಬೇಕು, ಆದ್ರೆ ಸಿಕ್ಕಿದ್ದು 166 ಕೋಟಿ: ಕಾಂಗ್ರೆಸ್ ವಿರುದ್ಧ ರಿಜಿಜು ಕಿಡಿ
1998ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್.ಎಂ.ನಿಂಬಾಳ್ಕರ್ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ಬ್ಲಡ್ ಶುಗರ್ ಲೆವೆಲ್ ಏರಿಕೆ – ಲಾಲೂ ಪ್ರಸಾದ್ ಯಾದವ್ ಆಸ್ಪತ್ರೆಗೆ ದಾಖಲು