ಬೆಂಗಳೂರು: ರಾಮಚಂದ್ರಾಪುರ ಮಠದಲ್ಲಿ ಅವ್ಯವಹಾರ ನಡೆದಿದೆ ಎನ್ನುವ ಆರೋಪಗಳ ತನಿಖೆಗೆ ಮೂವರು ಸದಸ್ಯರ ಸಮಿತಿಯನ್ನು ರಚಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಸಿ. ಖುಂಟಿಆ ಮುಜುರಾಯಿ ಇಲಾಖೆಯ ಆಯುಕ್ತರಿಗೆ ಆದೇಶಿಸಿದ್ದಾರೆ.
ಧಾರ್ಮಿಕ ದತ್ತಿ ಇಲಾಖೆ ಆಯುಕ್ತರನ್ನು ಒಳಗೊಂಡಂತೆ ಮೂವರನ್ನು ನೇಮಕ ಮಾಡಿ ತನಿಖೆ ನಡೆಸಿ ವರದಿಯನ್ನು ಶೀಘ್ರದಲ್ಲಿ ಸರ್ಕಾರಕ್ಕೆ ಸಲ್ಲಿಸಬೇಕೆಂದು ಅವರು ಸೂಚಿಸಿದ್ದಾರೆ.
Advertisement
ರಾಮಚಂದ್ರಪುರ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕೆಂದು ಎದುರ್ಕಳ ಈಶ್ವರ ಭಟ್ ಮತ್ತು ಜೈಕೃಷ್ಣ ಅವರು ಹೈಕೋರ್ಟ್ ಮೊರೆ ಹೋಗಿದ್ದರು. 22 ಬ್ಯಾಂಕ್ ಅಕೌಂಟ್‍ಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಸರ್ಕಾರಕ್ಕೆ ತನಿಖೆ ನಡೆಸುವಂತೆ ಆದೇಶಿಸಿತ್ತು.
Advertisement
ಮನವಿಯಲ್ಲಿ ಏನಿತ್ತು?
ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಿಸಬೇಕು ಮತ್ತು ಸ್ವಾಮೀಜಿ ಮಠದಲ್ಲಿದ್ದು ಅಧಿಕಾರ ಚಲಾಯಿಸುವುದನ್ನು ತಡೆಯಬೇಕು ಎಂದು ಒತ್ತಾಯಿಸಿಎದುರ್ಕಳ ಈಶ್ವರ ಭಟ್ ಮತ್ತು ಜೈಕೃಷ್ಣ ಅವರು 2016ರ ಏಪ್ರಿಲ್ 30 ರಂದು ಅಂದಿನ ಮುಖ್ಯಕಾರ್ಯದರ್ಶಿ ಅರವಿಂದ್ ಜಾಧವ್ ಅವರಿಗೆ ಮನವಿ ಸಲ್ಲಿಸಿದ್ದರು.
Advertisement
ಪೀಠಾಧಿಪತಿ ಸ್ಥಾನದಿಂದ ರಾಘವೇಶ್ವರ ಶ್ರೀಗಳನ್ನು ಕೆಳಗಿಳಿಸಬೇಕು. ಮಠದ ಸ್ಥಿರ ಮತ್ತು ಚರಾಸ್ತಿ ಮೇಲೆ ನಿಯಂತ್ರಣ ಹೊಂದದಂತೆ ಸೂಚಿಸಬೇಕು. ಪೂಜಾ ಕಾರ್ಯವನ್ನು ಹೊರತು ಪಡಿಸಿ ಮಠದ ಎಲ್ಲ ವ್ಯವಹಾರಗಳನ್ನು ನೋಡಿಕೊಳ್ಳಲು ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯಲ್ಲಿ ಸಮಿತಿ ನೇಮಿಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದರು.