ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ.
ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಸಂಬಂಧ ಕಾಮುಕ ತಂದೆಯ ವಿರುದ್ಧ ಪೊಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.