– ಆತಂಕದಲ್ಲಿ ಚಿಕ್ಕಬಳ್ಳಾಪುರದ ಜನತೆ
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದ್ದು, ಹೊಸದಾಗಿ 5 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಸ್ಪಷ್ಟಪಡಿಸಿದ್ದಾರೆ.
ಈ ಮೊದಲು 4 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅದರಲ್ಲಿ ಒಬ್ಬರೂ ಸಾವನ್ನಪ್ಪಿದ್ದರು. ಮೆಕ್ಕಾ ಪ್ರವಾಸ ಕೈಗೊಂಡು ವಾಪಸ್ ಆಗಿದ್ದ ನಂತರ ಮೊದಲು ಕೊರೊನಾ ಪತ್ತೆಯಾಗಿದ್ದ 31 ವರ್ಷದ ವ್ಯಕ್ತಿಯ ತಾಯಿ ಹಾಗೂ ಚಿಕ್ಕಮ್ಮ ಸೇರಿ ಮೂವರಿಗೆ ಸೋಂಕು ಧೃಢವಾಗಿತ್ತು. ಈ ಮೂವರು ಸಹ ಮೆಕ್ಕಾ ಪ್ರವಾಸದಿಂದ ವಾಪಸ್ ಬಂದಿದ್ದರು.
Advertisement
Advertisement
ಈಗ ಮೊದಲ ಪ್ರಕರಣದ 31 ವರ್ಷದ ವ್ಯಕ್ತಿಯ ತಂದೆಗೂ ಸೋಂಕು ದೃಢಪಟ್ಟಿದೆ. ಜಿಲ್ಲೆಯ ಗೌರಿಬಿದನೂರು ನಗರದಲ್ಲೇ ಮೆಕ್ಕಾ ಪ್ರವಾಸದಿಂದ ವಾಪಸ್ ಆಗಿದ್ದ ಮಹಿಳೆ ಕೊರೊನಾಗೆ ಬಲಿಯಾಗಿದ್ದರು. ಈಗ ಮೃತ ಮಹಿಳೆಯ ಮಗ ಹಾಗೂ ಸೊಸೆ, ಅವರ ಮೊಮ್ಮಗ ಸೇರಿದಂತೆ ಸೊಸೆಯ ತಮ್ಮನಿಗೂ ಕೊರೊನಾ ಸೋಂಕು ಪಾಸಿಟಿವ್ ಬಂದಿದೆ. ಹೀಗಾಗಿ ಈ ಮೊದಲ 4 ಪ್ರಕರಣಗಳ ಜೊತೆಗೆ ಇಂದು ಹೊಸದಾಗಿ 5 ಪ್ರಕರಣಗಳು ಸೇರಿ ಒಟ್ಟು 09 ಪಾಸಿಟಿವ್ ಪ್ರಕರಣಗಳಾಗವೆ.
Advertisement
Advertisement
ಇದಲ್ಲದೇ ಮೊದಲ ಪ್ರಕರಣದ 31 ವರ್ಷದ ವ್ಯಕ್ತಿಯ ಸಹೋದರಿಯರಿಗೂ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಅವರಿಗೂ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ. ಅವರಿಬ್ಬರ ಅಂತಿಮ ವರದಿಗಾಗಿ ಕಾಯುತ್ತಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈಗಾಗಲೇ ಹೊಸದಾಗಿ ಇಂದು ದೃಢಪಟ್ಟಿರುವ 05 ಮಂದಿ ಸೇರಿದಂತೆ ಶಂಕಿತ ಇಬ್ಬರನ್ನೂ ಸಹ ಚಿಕ್ಕಬಳ್ಳಾಪುರ ನಗರದ ಹಳೇ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್‍ನಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.