ಚಿಕ್ಕಬಳ್ಳಾಪುರ: ದೇವನಹಳ್ಳಿ (Devanahalli) ಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡ (Kempegowda) ರ 108 ಅಡಿಯ ಕಂಚಿನ ಪ್ರತಿಮೆ ಉದ್ಘಾಟನೆ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲಾದ್ಯಂತ “ಪವಿತ್ರ ಮಣ್ಣು (ಮೃತ್ತಿಕೆ) ಮತ್ತು ನೀರು ಸಂಗ್ರಹ ಮಾಡಿರುವ ಕೆಂಪೇಗೌಡ ರಥದ ವಾಹನಕ್ಕೆ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಅವರು ಇಂದು ಜಿಲ್ಲಾಡಳಿತ ಭವನದ ಮುಂಭಾಗದಿಂದ ಭಕ್ತಿಪೂರ್ವಕವಾಗಿ ಬೀಳ್ಕೊಡುಗೆ ನೀಡಿ ಪುತ್ಥಳಿ ಅನಾವರಣ ಸ್ಥಳಕ್ಕೆ ಕಳುಹಿಸಿ ಕೊಟ್ಟರು.
Advertisement
ಈ ವೇಳೆ ಶುಭ ಕೋರಿ ಮಾತನಾಡುತ್ತಾ, ನಾಡಪ್ರಭು ಕೆಂಪೇಗೌಡ ರಥ ವಾಹನವು ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆಗೊಂಡು ಅಕ್ಟೋಬರ್ 25 ರಿಂದ ಈವರೆಗೆ ಜಿಲ್ಲೆಯಾದ್ಯಂತ ಸಂಚರಿಸಿ 157 ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಜಿಲ್ಲೆಯ ಪ್ರಸಿದ್ಧ ಪಾರಂಪರಿಕ ಸ್ಥಳಗಳು ಮತ್ತು ಪುಣ್ಯ ಕ್ಷೇತ್ರಗಳಲ್ಲಿ ಪವಿತ್ರ ಮೃತ್ತಿಕೆ ಮತ್ತು ನೀರನ್ನು ಸಂಗ್ರಹಿಸಿದೆ. ಇದನ್ನೂ ಓದಿ: ಒಬ್ಬ ಹಿಂದೂವಾಗಿ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ನಾನೂ ಒಪ್ಪಲ್ಲ: ಡಿಕೆಶಿ
Advertisement
Advertisement
ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಈ ವಾಹನವನ್ನು ಕಳುಹಿಸಿಕೊಡಲಾಗುತ್ತಿದೆ. ಪ್ರಮುಖವಾಗಿ ಜಿಲ್ಲೆಯ ಪ್ರಸಿದ್ಧ ಸ್ಥಳಗಳಾದ ವಿದುರಾಶ್ವತ್ಥ, ಕೈವಾರ, ರಂಗಸ್ಥಳ, ನಂದಿ, ಆಲಂಗಿರಿ, ಮುದ್ದೇನಹಳ್ಳಿ ಇನ್ನೂ ಮುಂತಾದ ಪುಣ್ಯ ಕ್ಷೇತ್ರಗಳಲ್ಲಿ ಮಣ್ಣು ಮತ್ತು ನೀರನ್ನು ಸಂಗ್ರಹಿಸಲಾಗಿದೆ. ಈ ಮೃತ್ತಿಕೆ ಮತ್ತು ನೀರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ 108 ಅಡಿಯ ಕಂಚಿನ ಪ್ರತಿಮೆಯ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ಉದ್ಯಾನವನ (ಥೀಮ್ ಪಾರ್ಕ್)ಕ್ಕೆ ಉಪಯೋಗಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.