ಚಿಕ್ಕಬಳ್ಳಾಪುರ: ಕೋಲಾರ ಜಿಲ್ಲೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯಾಗಿ ವಿಭಜನೆಯಾಗಿ ಇಂದಿಗೆ 14 ವರ್ಷಗಳಾಗಿದೆ. ಚಿಕ್ಕಬಳ್ಳಾಪರು 15ನೇ ವರ್ಷಕ್ಕೆ ಜಿಲ್ಲೆ ಪಾದಾರ್ಪಣೆ ಮಾಡಿದೆ. ಈ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದ್ದಾರೆ.
ಜೆಡಿಎಸ್ ಕಾರ್ಯಕರ್ತರು ಚಿಕ್ಕಬಳ್ಳಾಪುರ ನಗರದ ಕೋದಂಡರಾಮಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಾಚರಣೆ ನಡೆಸಿದರು. ನಂತರ ನಗರದ ಬಲಮುರಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿದರು. ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ಅಧಿಕಾರವಧಿಯಲ್ಲಿ ರಾಮನಗರ ಹಾಗೂ ಚಿಕ್ಕಬಳ್ಳಾಪುರ ವನ್ನ ಜಿಲ್ಲೆ ಮಾಡಿ ಘೋಷಣೆ ಮಾಡಿದ್ದರು. ಇದನ್ನೂ ಓದಿ: ನಾನೇ ಮಾಡಿದೇ, ನಾನೇ ಕಟ್ಟಿದೆ ಅಂತ ಪ್ರತಾಪ್ ಸಿಂಹ ಹೇಳೋದು ತಪ್ಪು: ವಿಶ್ವನಾಥ್
ಸಂಭ್ರಮಾಚರಣೆ ವೇಳೆ ಸ್ಥಳೀಯ ಜೆಡಿಎಸ್ ನಾಯಕರು ಸೇರಿದಂತೆ ಕಾರ್ಯಕರ್ತರು ಮಾಜಿ ಸಿಎಂ ಕುಮಾರಸ್ವಾಮಿ ಪರ ಘೋಷಣೆಗಳನ್ನ ಕೂಗಿ ಅಭಿನಂದನೆ ಸಲ್ಲಿಸಿದರು. ಪೂಜೆಯಲ್ಲಿ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಮುನೇಗೌಡ ಸೇರಿದಂತೆ ಜೆಡಿಎಸ್ ಮುಖಂಡರು ಭಾಗಿಯಾಗಿದ್ದರು. ಇದನ್ನೂ ಓದಿ: ಶ್ರೀಗುರು ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ