ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ನಗರದ ಶಿರಡಿ ಸಾಯಿಬಾಬಾ ಮಂದಿರ ಹಿಂದೂ-ಮುಸ್ಲಿಂ ಬಾಂಧವರ ಭಾವೈಕ್ಯತೆ ಸೌಹಾರ್ದತೆಗೆ ಸಾಕ್ಷಿಯಾಗಿದೆ.
ಶಿರಿಡಿ ಸಾಯಿಬಾ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಅಯ್ಯಪ್ಪ ಸ್ವಾಮಿಯ ಮಹಾಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಮಹಾಪೂಜೆಯಲ್ಲಿ ನೂರಾರು ಅಯ್ಯಪ್ಪ ಮಾಲಾಧಾರಿಗಳು ಭಾಗವಹಿಸಿದ್ದರು. ದೇವಾಲಯದಲ್ಲಿ ಅಯ್ಯಪ್ಪ ಸ್ವಾಮಿಯ ವಿಗ್ರಹವನ್ನು ವಿಶೇಷವಾಗಿ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ಇದನ್ನೂ ಓದಿ: ಮಸೀದಿಯಲ್ಲಿ ಅಯ್ಯಪ್ಪಸ್ವಾಮಿ ಮಹಾಪೂಜೆ- ಕೋಮು ಸೌಹಾರ್ದತೆ ಸಾರಿದ ಮುಸ್ಲಿಂ ಬಾಂಧವರು
Advertisement
Advertisement
ದೇವಸ್ಥಾನದ ಆಡಳಿತ ವತಿಯಿಂದ ಮಾಲಾಧಾರಿಗಳಿಗೆ ಅನ್ನದಾಸೋಹ ಏರ್ಪಡಿಸಲಾಗಿತ್ತು. ವಿಶೇಷವೆಂದರೆ ಈ ಅನ್ನದಾಸೋಹದಲ್ಲಿ ಹಿಂದೂ, ಮುಸ್ಲಿಂ ಎಂಬ ಬೇಧ-ಭಾವ ಬಿಟ್ಟು ಮುಸ್ಲಿಂ ಸಮುದಾಯದ ಯುವಕರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಭಜನೆ ಮಾಡಿದರು. ಮಾಲಾಧಾರಿಗಳಿಗೆ ಮುಸ್ಲಿಂ ಸಮುದಾಯದ ಯುವಕರು ಊಟ ಬಡಿಸುವ ಮೂಲಕ ಹಿಂದೂ-ಮುಸ್ಲಿಂ ಒಂದೇ. ಧರ್ಮ ಧರ್ಮಗಳು ಬೇರೆಯಾದರೂ ದೇವರೊಬ್ಬ ಎಂಬ ಸಾರಾಂಶವನ್ನು ಸಾರಿದರು. ಮುಸ್ಲಿಂ ಯುವಕರ ಈ ಕಾರ್ಯಕ್ರಮಕ್ಕೆ ಪ್ರಶಂಸೆ ಸಹ ವ್ಯಕ್ತವಾಗಿದೆ.