ರಾತ್ರೋರಾತ್ರಿ ಚಿಕ್ಕಬಳ್ಳಾಪುರ ಜೆಡಿಎಸ್ ಅಭ್ಯರ್ಥಿ ಬದಲಾವಣೆ

Public TV
1 Min Read
jds

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ.ಪಿ ಬಚ್ಚೇಗೌಡ ಅವರನ್ನು ಬದಲಾಯಿಸಿ ರಾಧಾಕೃಷ್ಣ ಎಂಬವರನ್ನು ಜೆಡಿಎಸ್ ಹೈಕಮಾಂಡ್ ಆಯ್ಕೆ ಮಾಡಿದೆ.

ಈ ಮೊದಲು ಮಾಜಿ ಶಾಸಕ ಕೆ.ಪಿ ಬಚ್ಚೇಗೌಡ ಅಭ್ಯರ್ಥಿ ಎಂದು ಜೆಡಿಎಸ್ ಹೈಕಮಾಂಡ್ ಫೈನಲ್ ಮಾಡಿತ್ತು. ಆದರೆ ತಡರಾತ್ರಿ ಕೆ.ಪಿ ಬಚ್ಚೇಗೌಡ ಅವರನ್ನು ಬದಲಾಯಿಸಿರುವ ಜೆಡಿಎಸ್ ಶಿಡ್ಲಘಟ್ಟ ತಾಲೂಕು ನಾಗಮಂಗಲ ನಿವಾಸಿ ರಾಧಾಕೃಷ್ಣ ಅವರಿಗೆ ಮಣೆ ಹಾಕಿದೆ.

CKB JDS CANDIDTE RADHAKRISHNA 1
                                           ರಾಧಾಕೃಷ್ಣ

ಸೋಮವಾರ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಚಿಕ್ಕಬಳ್ಳಾಪುರಕ್ಕೆ ಆಗಮಿಸುತ್ತಿದ್ದು, ಅವರ ಜೊತೆಗೂಡಿ ರಾಧಾಕೃಷ್ಣ ನಾಮಪತ್ರ ಸಲ್ಲಿಸಲಿದ್ದಾರೆ. ಜೆಡಿಎಸ್‍ನ ದಿಢೀರ್ ಬದಲಾವಣೆಗೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಧಾಕರ್ ವಾಗ್ದಾಳಿ ನಡೆಸಿದರು.

ckb sudhakar 1

ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿ ಈ ಬಗ್ಗೆ ಪ್ರತಿಕ್ರಿಯಿಸಿದ ಸುಧಾಕರ್, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ವ್ಯಕ್ತಿತ್ವವಿರುವ ಅಭ್ಯರ್ಥಿ ಇಲ್ಲ ಎಂದು ಎರಡು ಪಕ್ಷದವರಿಗೆ ಎನಿಸಿರಬಹುದು. ಹಣ ಇದೆ ಎಂದು ಬೇರೆ ಕ್ಷೇತ್ರದಿಂದ ಅಭ್ಯರ್ಥಿಗಳನ್ನು ಕರೆ ತಂದು ಕಣಕ್ಕಿಳಿಸಿದ್ದಾರೆ. ಇದು ಕ್ಷೇತ್ರ ಜನರಿಗೆ ಮಾಡಿದ ಅವಮಾನ ಎಂದು ಕಿಡಿಕಾರಿದರು.

Share This Article
Leave a Comment

Leave a Reply

Your email address will not be published. Required fields are marked *