ಚಿಕ್ಕಬಳ್ಳಾಪುರ: ಕನಕಪುರದ ಕಪಾಲ ಬೆಟ್ಟದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ದೊಡ್ಡಸಾಗರಹಳ್ಳಿ ಬಳಿಯ ಬೆಟ್ಟದಲ್ಲಿ ತಲೆ ಎತ್ತಿದ್ದ ಏಸು ಪ್ರತಿಮೆ ದೊಡ್ಡ ವಿವಾದವನ್ನೇ ಸೃಷ್ಟಿ ಮಾಡಿತ್ತು.
ಅಕ್ರಮವಾಗಿ ಬೆಟ್ಟದಲ್ಲಿ ನಿರ್ಮಾಣವಾಗಿದ್ದ ಏಸು ಪ್ರತಿಮೆ ಮೇಲೆ ಹಿಂದೂಪರ ಸಂಘಟನೆಗಳ ಕಣ್ಣು ಬಿದ್ದು ಹೋರಾಟಕ್ಕಿಳಿದಿದ್ರು. ಹೀಗಾಗಿ ಎಚ್ಚೆತ್ತ ತಹಶೀಲ್ದಾರ್ ಅಜಿತ್ ರೈ ಇಂದು ಏಸು ಪ್ರತಿಮೆ ತೆರವು ಮಾಡಿದ್ರು. ಆದರೆ ಗ್ರಾಮಸ್ಥರು ಮಾತ್ರ ಏಸು ಪ್ರತಿಮೆ ತೆರವು ಮಾಡಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.
Advertisement
Advertisement
ಹೌದು. ಬೆಟ್ಟದ ಮೇಲೆ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಗ್ರಾಮದ ಕೈಸ್ಥ ಧರ್ಮ ಬೆಂಬಲಿತರು ಬೆಟ್ಟಕ್ಕೆ ಮಹಿಮಾ ಬೆಟ್ಟ ಅಂತ ಹೆಸರಿಟ್ಟು, ಬೆಟ್ಟದ ಮೇಲೆ ಅಕ್ರಮವಾಗಿ ಏಸು ಪ್ರತಿಮೆ, ಶಿಲುಬೆ ಹಾದಿ ನಿರ್ಮಾಣ ಮಾಡಿ ಪ್ರಾರ್ಥನೆ ಮಾಡಿಕೊಂಡು ಬರುತ್ತಿದ್ದರು. ಈ ವಿಚಾರ ಹಿಂದೂಪರ ಸಂಘಟನೆಗಳ ಕಣ್ಣಿಗೆ ಬಿದ್ದು ಕನಕಪುರ ಕಪಾಲ ಬೆಟ್ಟದಂತೆ ದೊಡ್ಡ ವಿವಾದದ ಸ್ವರೂಪ ಪಡೆದುಕೊಳ್ಳುತ್ತಿತ್ತು. ಹೀಗಾಗಿ ಎಚ್ಚೆತ್ತ ದೇವನಹಳ್ಳಿ ತಹಶೀಲ್ದಾರ್ ಇಂದು ಏಸು ಪ್ರತಿಮೆ ತೆರವು ಕಾರ್ಯ ನಡೆಸಿದರು.
Advertisement
ದೊಡ್ಡಬಳ್ಳಾಪುರ ಡಿವೈಎಸ್‍ಪಿ ರಂಗಪ್ಪ ನೇತೃತ್ವದಲ್ಲಿ ನೂರಾರು ಮಂದಿ ಪೊಲೀಸರು, ಕ್ರೇನ್ ಹಾಗೂ ಟಿಪ್ಪರ್‍ಗಳ ಮೂಲಕ ಬೆಳ್ಳಂಬೆಳಗ್ಗೆ ಗ್ರಾಮಕ್ಕೆ ಎಂಟ್ರಿ ಕೊಟ್ಟ ತಹಶೀಲ್ದಾರ್ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಬೆಟ್ಟದ ಮೇಲಿನ ಏಸು ಪ್ರತಿಮೆ ತೆರವು ಮಾಡಿದರು.
Advertisement
ತೆರವು ಮಾಡಿದ ಏಸು ಪ್ರತಿಮೆಯನ್ನ ಟಿಪ್ಪರ್ ಮೂಲಕ ಗ್ರಾಮದಲ್ಲಿನ ಚರ್ಚ್‍ಗೆ ಸ್ಥಳಾಂತರಿಸಲಾಯಿತು. ಆದರೆ ಈ ವೇಳೆ ಬೆಳಗ್ಗೆಯಿಂದಲೂ ಊಟ ತಿಂಡಿ ಬಿಟ್ಟು ಚರ್ಚ್ ಬಳಿ ಮೊಕ್ಕಾಂ ಹೂಡಿದ್ದ ಕೈಸ್ತ ಧರ್ಮೀಯ ಗ್ರಾಮಸ್ಥರು, ಪ್ರತಿಮೆ ಆಗಮಿಸುತ್ತಿದ್ದಂತೆ ಕೈಯಲ್ಲಿ ಮೊಂಬತ್ತಿ ಹಿಡಿದು ಕಣ್ಣಿರು ಸುರಿಸಿ ಗೋಳಾಡಿದರು. ಕನಿಷ್ಠ ಗುಡ್ ಪ್ರೈಡೇ ಹಬ್ಬದವರೆಗೂ ಏಸು ಪ್ರತಿಮೆ ತೆರವು ಮಾಡದಂತೆ ಮನವಿ ಮಾಡಿದ್ರೂ ಅಧಿಕಾರಿಗಳು ಸ್ಪಂದಿಸಲಿಲ್ಲ ಅಂತ ತಮ್ಮ ಅಸಮಾಧಾನ ಹೊರಹಾಕಿದ್ರು.
ಕನಕಪುರ ಕಪಾಲಿ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣದ ವಿವಾದಂತೆ ಈ ಮಹಿಮಾ ಬೆಟ್ಟದ ಏಸು ಪ್ರತಿಮೆಯೂ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಎಚ್ಚೆತ್ತ ತಾಲೂಕು ಆಡಳಿತ ವಿವಾದ ತೀವ್ರ ಸ್ವರೂಪ ಪಡೆಯುವ ಮುನ್ನವೇ ಏಸು ಪ್ರತಿಮೆ ತೆರವು ಮಾಡಿದೆ. ಇದು ಸ್ಥಳೀಯ ಗ್ರಾಮಸ್ಥರ ಕಣ್ಣೀರಿಗೂ ಕಾರಣವಾಗಿದೆ.