Chikkaballapur
ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ವಕೀಲ ಹೃದಯಾಘಾತದಿಂದ ಸಾವು

ಚಿಕ್ಕಬಳ್ಳಾಪುರ: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ವಿಚಾರಣಾಧೀನ ಕೈದಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ನವೀನ್ ಕುಮಾರ್ ಮೃತ ವಕೀಲ. ಚಿಕ್ಕಬಳ್ಳಾಪುರ ನ್ಯಾಯಾಲಯದ ಕೋರ್ಟ್ ಸಿಬ್ಬಂದಿ ನವೀನ್ ಕುಮಾರ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ, ವಿಚಾರಣಾಧೀನ ಕೈದಿ ವಕೀಲ ನವೀನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ಚಿಕ್ಕಬಳ್ಳಾಪುರ ಜಿಲ್ಲಾ ಕಾರಾಗೃಹದಲ್ಲಿದ್ದ ನವೀನ್ ಇಂದು ದಿಢೀರ್ ಅಂತ ಅಸ್ವಸ್ಥಗೊಂಡಿದ್ದು, ಕೂಡಲೇ ಜಿಲ್ಲಾಸ್ಪತ್ರೆಗೆ ಕರೆ ತರತಲಾಯಿತ್ತು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ರವಾನಿಸುವ ವೇಳೆ ಮಾರ್ಗದ ಮಧ್ಯೆದಲ್ಲಿ ನವೀನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ಚಿಕ್ಕಬಳ್ಳಾಪುರ ನ್ಯಾಯಾಲಯದ ಮಹಿಳಾ ಸಿಬ್ಬಂದಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ನವೀನ್, ಅದೇ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮತ್ತೊಬ್ಬ ನವೀನ್ ಕುಮಾರ್ ತನ್ನ ಪರಿಚಯಸ್ಥರಿಂದ ಕೊಲೆ ಮಾಡಿಸಿದ್ದ. ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಜೈಲು ಸೇರಿದ್ದರು.
ಮೃತ ನವೀನ್ಗೆ ಕೆಳ ಹಂತದ ನ್ಯಾಯಾಲಯ ಜಾಮೀನು ನಿರಾಕರಿಸಿತ್ತು. ಹೈಕೋರ್ಟ್ನಲ್ಲಿ ಜಾಮೀನು ಮಂಜೂರಾಗಿ ಇನ್ನೆರೆಡು ದಿನಗಳಲ್ಲಿ ಜಾಮೀನಿನ ಮೂಲಕ ಕಾರಾಗೃಹದಿಂದ ಹೊರಬರುತ್ತಿದ್ದ ಎನ್ನಲಾಗಿದೆ. ಆದರೆ ಅಷ್ಟರಲ್ಲೇ ನವೀನ್ ಮೃತಪಟ್ಟಿದ್ದಾನೆ. ಜೈಲು ಅಧಿಕಾರಿ ಸಿಬ್ಬಂದಿ ಸಕಾಲಕ್ಕೆ ಸೂಕ್ತ ಚಿಕಿತ್ಸೆ ಕೊಡಿಸಿಲ್ಲ ಅಂತ ಮೃತ ನವೀನ್ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
