ಚಿಕ್ಕಬಳ್ಳಾಪುರ ನಗರಕ್ಕೂ ವ್ಯಾಪಿಸಿದೆಯಾ ಕೊರೊನಾ?

Public TV
1 Min Read
CKB 8

– ಬೆಂಗ್ಳೂರಲ್ಲಿ ವೃದ್ದನಿಗೆ ಚಿಕಿತ್ಸೆ

ಚಿಕ್ಕಬಳ್ಳಾಪುರ: ನಗರಕ್ಕೂ ಕೊರೊನಾ ವ್ಯಾಪಿಸಿದೆಯಾ ಅನ್ನೋ ಅನುಮಾನ ಈಗ ಶುರುವಾಗಿದ್ದು ಜನರಲ್ಲಿ ಆತಂಕ ಮೂಡಿಸಿದೆ.

ಜಿಲ್ಲೆಯಲ್ಲಿ 12 ಕೊರೊನಾ ಸೋಂಕಿತ ಪ್ರಕರಣಗಳು ಗೌರಿಬಿದನೂರಿನಲ್ಲೇ ಪತ್ತೆಯಾಗಿದ್ದವು. ಹೀಗಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದ ಜನ ನೆಮ್ಮದಿಯಿಂದ ಇದ್ದರು. ಆದರೆ ತಡರಾತ್ರಿ ಚಿಕ್ಕಬಳ್ಳಾಪುರ ನಗರದ ಕೆಲ ನಿವಾಸಿಗಳನ್ನ ಹಾಸ್ಪಿಟಲ್ ಕ್ವಾರಂಟೈನ್ ಗೆ ಕರೆತರಲಾಗಿದೆ. ಅಸಲಿಗೆ ಚಿಕ್ಕಬಳ್ಳಾಪುರ ನಗರದ ಸರಿ ಸುಮಾರು 70 ವರ್ಷದ ಮನೆಯ ಯಜಮಾನ ಅಸ್ತಮಾ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲಿದ್ದು, ಮನೆಯವರು ಮಾರ್ನಾಲ್ಕು ದಿನದ ಹಿಂದೆಯೇ ಆತನನನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.

Corona news

ಖಾಸಗಿ ಆಸ್ಪತ್ರೆ ವೈದ್ಯರ ಮಾಹಿತಿ ಪ್ರಕಾರ ವೃದ್ದನಿಗೆ ಕೋರಾನೋ ಸೋಂಕಿನ ಲಕ್ಷಣಗಳು ಕಂಡುಬಂದಿವೆ ಅನ್ನೋ ಮಾಹಿತಿ ನೀಡಿವೆ. ಹೀಗಾಗಿ ಎಚ್ಚೆತ್ತ ಜಿಲ್ಲಾಡಳಿತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿರುವ ವೃದ್ದನ ಪತ್ನಿ ಹಾಗೂ ಮಕ್ಕಳು ಅವರ ಮನೆಕೆಲಸದಾಕೆಯನ್ನ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಸದ್ಯ ಚಿಕ್ಕಬಳ್ಳಾಪುರ ನಗರದ ಜನತೆಯೂ ಕೊರೊನಾ ಆತಂಕಕ್ಕೀಡಾಗುವಂತೆ ಮಾಡಿದೆ.

ಮೊದಲೇ ಗೌರಿಬಿದನೂರಿನ 12 ಪ್ರಕರಣಗಳಿಂದ ರೆಡ್ ಝೋನ್ ಪಟ್ಟಿಗೆ ಸೇರಿರುವ ಚಿಕ್ಕಬಳ್ಳಾಪುರ ಜಿಲ್ಲೆ ಈಗ ಮತ್ತಷ್ಟು ಕೊರೊನಾ ಸೋಂಕಿತ ಪ್ರಕರಣಗಳಿಗೆ ಸಾಕ್ಷಿಯಾಗುವ ಸಂಶಯ ಕಾಡತೊಡಗಿದೆ. ಸದ್ಯ ವೃದ್ದನ ಅಧಿಕೃತ ವರದಿ ಬರಬೇಕಾಗಿದ್ದು ಜಿಲ್ಲಾಡಳಿತ ವರದಿಯ ನೀರೀಕ್ಷೆಯಲ್ಲಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ವರದಿಗೆ ಮುನ್ನವೇ ಮನೆಯ ಸದಸ್ಯರನ್ನು ಹಾಸ್ಪಿಟಲ್ ಕ್ವಾರಂಟೈನ್‍ಗೆ ಒಳಪಡಿಸಿದ್ದಾರೆ.

Corona Virus

ಚಿಕ್ಕಬಳ್ಳಾಪುರ ನಗರದ ಹಳೇ ಜಿಲ್ಲಾಸ್ಪತ್ರೆಯ ಕೋವಿಡ್ 19 ಆಸ್ಪತ್ರೆಯಲ್ಲಿ ಅವರ ಮೇಲೆ ನಿಗಾ ಇಡಲಾಗಿದೆ. ಒಂದು ವೇಳೆ ಖಾಸಗಿ ಆಸ್ಪತ್ರೆಯ ಮಾಹಿತಿಯಿಂತೆ ಈತನಿಗೆ ಪಾಸಿಟಿವ್ ಬಂದಿದ್ದೇ ಆದಲ್ಲಿ, ಈ ವೃದ್ದನಿಗೆ ಯಾವುದೇ ವಿದೇಶ ಪ್ರಯಾಣ ಮಾಡಿಲ್ಲ. ಬದಲಾಗಿ ಸೋಂಕಿತ ಪ್ರದೇಶಗಳಿಗೂ ಭೇಟಿ ಮಾಡಿಲ್ಲ. ಹೇಗೆ ಸೋಂಕಿನ ಲಕ್ಷಣಗಳು ಕಂಡು ಬಂದಿವೆ ಅನ್ನೋದು ಮತ್ತಷ್ಟು ಆತಂಕ ಹೆಚ್ಚಾಗುವಂತೆ ಮಾಡುತ್ತೆ ಅನ್ನೋದರಲ್ಲಿ ಅನುಮಾನವಿಲ್ಲ.

Share This Article
Leave a Comment

Leave a Reply

Your email address will not be published. Required fields are marked *