ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷಕ್ಕೆ ಸುದೀರ್ಘ ಇತಿಹಾಸವಿದ್ದು, ದೊಡ್ಡ ಆಲದ ಮರವಿದ್ದಂತೆ ಬೆಳೆದಿದೆ. ಪಕ್ಷವು ಎಲ್ಲರಿಗೂ ಆಶ್ರಯ ನೀಡುತ್ತದೆ ಎಂದು ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಕ್ರಿಸ್ಮಸ್ ನಿಮಿತ್ತ ನಗರದ ಚರ್ಚ್‍ಗಳಿಗೆ ಭೇಟಿ ನೀಡಿ ಬಳಿಕ ಮಾತನಾಡಿದ ಸಂಸದರು, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದೆ. ಹೀಗಾಗಿ ಪಕ್ಷದ ಎಲ್ಲರಿಗೂ ಸ್ಥಾನ-ಮಾನ, ಮಂತ್ರಿಗಿರಿ ಸಿಗುವುದಿಲ್ಲ. ಕಾಂಗ್ರೆಸ್ ಪಕ್ಷ ಬಿಟ್ಟು ಹೋಗುತ್ತೇವೆ, ರಾಜೀನಾಮೆ ಕೊಡುತ್ತೇವೆ ಎನ್ನುವುದು ಸರಿಯಲ್ಲ. ಈ ಹಿಂದೆ ಕಾಂಗ್ರೆಸ್ ಬಿಟ್ಟು ಹೋದವರು ಮರಳಿ ಪಕ್ಷಕ್ಕೆ ಬಂದ ಪ್ರಸಂಗಗಳಿವೆ ಎಂದು ಅತೃಪ್ತ ಶಾಸಕರಿಗೆ ಎಚ್ಚರಿಕೆ ನೀಡಿದರು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿಯಾಗಲು ಅಸಮಾಧಾನಿತರು ತಮ್ಮ ವೈಯುಕ್ತಿಕ ಆಸೆ-ಆಕಾಂಕ್ಷೆಗಳನ್ನು ಮರೆಯಬೇಕು ಎಂದ ಮೊಯ್ಲಿ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಗ ಎಲ್ಲರಿಗೂ ಸ್ಥಾನಮಾನ ಸಿಗುತ್ತದೆ ಎಂದು ವಿಶ್ವಾಸ ಹೊರಹಾಕಿದರು.
ಲೋಕಸಭಾ ಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಸಂಸದರು, ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಈ ಬಾರಿಯೂ ನಾನೇ ಸ್ಫರ್ಧಿಸಲಿದ್ದು, ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv