Chikkaballapur
ಕತ್ತು ಕೊಯ್ದು ಯುವಕನ ಬರ್ಬರ ಕೊಲೆ

– ಪ್ರೀತಿ ಪ್ರೇಮದ ಹಿನ್ನೆಲೆ ಕೊಲೆ ಶಂಕೆ
ಚಿಕ್ಕಬಳ್ಳಾಪುರ: ನಿರ್ಮಾಣಹಂತದಲ್ಲಿರುವ ಕಟ್ಟಡದಲ್ಲಿ ಕತ್ತು ಕೊಯ್ದು ಯುವಕನನ್ನ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ ಹೊರವಲಯದ ಹನುಮಂತಪುರ ಬಳಿ ನಡೆದಿದೆ.
ಶಿಡ್ಲಘಟ್ಟ ನಗರದ 25 ವರ್ಷದ ಸಯ್ಯದ್ ಫರ್ಹಾನ್ ಕೊಲೆಯಾದ ಯುವಕನಾಗಿದ್ದಾನೆ. ಶಿಡ್ಲಘಟ್ಟ ನಗರ ಹೊರವಲಯದ ಹನುಮಂತನಗರದ ಬಳಿಯ ನೂತನ ಬಡಾವಣೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ಸಯ್ಯದ್ ಫರ್ಹಾನ್ ಕೊಲೆ ಮಾಡಲಾಗಿದೆ. ಈ ಕೊಲೆಗೆ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಯುವತಿ ಜೊತೆ ಪ್ರೀತಿ ಪ್ರೇಮದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವುದಾಗಿ ಹೇಳಿದ್ದಾರೆ.
