ಸೂಕ್ತ ದಾಖಲೆಗಳಿಲ್ಲದ 1.75 ಕೋಟಿ ರೂ. ವಶ

Public TV
1 Min Read
CKB MONEY

ಚಿಕ್ಕಬಳ್ಳಾಪುರ: ಕರ್ನಾಟಕ – ಆಂಧ್ರ ಗಡಿಭಾಗದ ಬಾಗೇಪಲ್ಲಿಯ ಸುಂಕ ವಸೂಲಾತಿ ಕೇಂದ್ರದ ವ್ಯವಸ್ಥಾಪಕರ ಕಚೇರಿಯಲ್ಲಿ ಸೂಕ್ತ ದಾಖಲೆಗಳಿಲ್ಲದ 1 ಕೋಟಿ 75 ಲಕ್ಷ ರೂ. ಮೌಲ್ಯದ ಹಣ ಪತ್ತೆಯಾಗಿದೆ.

ಕೇಂದ್ರದ ವ್ಯವಸ್ಥಾಪಕ ಸುಬ್ಬಾರೆಡ್ಡಿ ಅವರ ಕಚೇರಿಯಲ್ಲಿ ನಗದು ಪತ್ತೆಯಾಗಿದ್ದು, ಈ ಸಂಬಂಧ ಮಾಹಿತಿ ತಿಳಿದ ಚುನಾವಣಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಕಚೇರಿಗೆ ಭೇಟಿ ನೀಡಿ ಹಣ ವಶಕ್ಕೆ ಪಡೆದಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನೆಲೆ ಚುನಾವಣಾ ಅಕ್ರಮಗಳಿಗೆ ಬಳಸಲು ದೊಡ್ಡ ಮೊತ್ತದ ಹಣ ಸಂಗ್ರಹಿಸಿರುವ ಶಂಕೆ ವ್ಯಕ್ತವಾಗಿದೆ.

CKB MONEY a

ಸ್ವತಃ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ನಟರಾಜ್ ಅವರು ಕೂಡ ಸ್ಥಳಕ್ಕೆ ನೀಡಿದ್ದು, ಐಟಿ ಇಲಾಖಾಧಿಕಾರಿಗಳ ಸಮ್ಮುಖದಲ್ಲಿ ಹಣ ಜಪ್ತಿ ಮಾಡಲು ಚುನಾವಣಾಧಿಕಾರಿಗಳು ಮುಂದಾಗಿದ್ದಾರೆ.

ಇದು ಸುಂಕ ವಸೂಲಾತಿ ಕೇಂದ್ರಕ್ಕೆ ಸೇರಿದ ಹಣ ಎಂದು ವ್ಯವಸ್ಥಾಪಕರು ಹೇಳುತ್ತಿದ್ದಾರೆ. ಆದರೆ ಈ ಬಗ್ಗೆ ಸೂಕ್ತ ದಾಖಲೆಗಳನ್ನ ನೀಡಿಲ್ಲ. ಹೀಗಾಗಿ ಅನುಮಾನಗೊಂಡಿರುವ ಚುನಾವಣಾಧಿಕಾರಿಗಳು ಹಣ ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *