ಚಿಕ್ಕಬಳ್ಳಾಪುರ ಅಪಘಾತ – ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Public TV
1 Min Read
cm siddaramaiah 1

ಬೆಂಗಳೂರು: ಚಿಕ್ಕಬಳ್ಳಾಪುರದ (Chikkaballapura) ಚಿತ್ರಾವತಿ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ಸುದ್ದಿ ತಿಳಿದು ಅತೀವ ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Accident 2

ಇಂದು ಮುಂಜಾನೆ ರಸ್ತೆಯ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿಯಾಗಿ 13 ಮಂದಿ ಸಾವಿಗೀಡಾಗಿದ್ದರು. ಆಂಧ್ರಪ್ರದೇಶ ನೋಂದಣಿಯ ಟಾಟಾ ಸುಮೋ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿತ್ತು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ – 13 ಮಂದಿ ಬಲಿ

ಈ ದುರ್ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇಂದು ಬೆಳಗ್ಗೆ ಅತಿಯಾದ ಮಂಜು ಇತ್ತು. ಈ ಕಾರಣಕ್ಕೆ ಚಾಲಕನಿಗೆ ರಸ್ತೆ ಕಾಣಿಸದೆ ನಿಂತಿದ್ದ ಟ್ಯಾಂಕರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ.

ಮೃತರು ಆಂಧ್ರದ ಗೊರೆಂಟ್ಲ ಮೂಲದವರಾಗಿದ್ದು ಬೆಂಗಳೂರಿನ ಹೊಂಗಸಂದ್ರದಲ್ಲಿ ವಾಸವಾಗಿದ್ದರು. ದಸರಾ ಹಬ್ಬಕ್ಕೆ ಗೊರೆಂಟ್ಲ ಗ್ರಾಮಕ್ಕೆ ತೆರಳಿದ್ದ ಇವರು ಹಬ್ಬ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿತ್ತು. ಇದನ್ನೂ ಓದಿ: ರಾಮನಗರ ಜಿಲ್ಲೆ ಹೆಸರು ಬದಲಾದ್ರೆ ಅಮರಣಾಂತ ಉಪವಾಸ ಮಾಡ್ತೀನಿ: ಹೆಚ್‌ಡಿಕೆ ಪ್ರತಿಜ್ಞೆ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article