– ಗೆಲುವು ಸಿಗಲಿ ಎಂದು ದೇವರಲ್ಲಿ ಪ್ರಾರ್ಥನೆ
ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್ ಬೆನ್ನಲ್ಲೇ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿಯಾಗಿರುವ ರಕ್ಷಾ ರಾಮಯ್ಯ (Raksha Ramaiah) ಸಾದಲಮ್ಮ ದೇವಿಯ ಮೊರೆ ಹೋಗಿದ್ದಾರೆ.
Advertisement
ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸಾದಲಿ ಗ್ರಾಮದ ಗ್ರಾಮದೇವತೆ ಸಾದಲಮ್ಮ ದೇವಾಲಯಕ್ಕೆ ತಡರಾತ್ರಿ ಭೇಟಿ ನೀಡಿದ ರಕ್ಷಾ ರಾಮಯ್ಯ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಂದ ಹಾಗೆ ಚುನಾವಣಾ ಸಂದರ್ಭದಲ್ಲಿ ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ರಕ್ಷಾ ರಾಮಯ್ಯ ಅವರು ಗೆಲವು ಸಾಧಿಸಬೇಕು ಎಂದು ಸಾದಲಮ್ಮ ದೇವಿಗೆ ಹರಕೆ ಹೊತ್ತುಕೊಂಡಿದ್ದರು. ಇದನ್ನೂ ಓದಿ: ಹಳೇ ಮೈಸೂರು ಭಾಗದಲ್ಲಿ ಮೈತ್ರಿಯಿಂದ 10 ಸ್ಥಾನ ಗೆಲುವು: ಬಿಜೆಪಿ ವಿಶ್ವಾಸ
Advertisement
Advertisement
ಇನ್ನೇನು ಫಲಿತಾಂಶಕ್ಕೆ ಕೇವಲ ಎರಡು ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ರಕ್ಷಾ ರಾಮಯ್ಯ ಇಬ್ಬರೂ ಸಾದಲಮ್ಮ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದ್ದಾರೆ. ಚೋಳರ ಕಾಲದ ಪುರಾತನ ಪ್ರಸಿದ್ಧ ಸಾದಲಮ್ಮ ದೇವಿಗೆ ಇಷ್ಟಾರ್ಥ ಸಿದ್ದಿಗೆ ಪ್ರಾರ್ಥನೆ ಮಾಡಿಕೊಂಡರೆ ಸಾದಲಮ್ಮ ದೇವಿ ಖಂಡಿತ ಭಕ್ತರ ಇಷ್ಟಾರ್ಥ ಈಡೇರಿಸುತ್ತಾಳೆ ಎಂಬ ನಂಬಿಕೆ ಭಕ್ತರದ್ದಾಗಿದೆ.
Advertisement
ಸಾದಲಮ್ಮ ದೇವಿಯ ಮಹಿಮೆ ಅಪಾರವಾಗಿದ್ದು, ದೇವಿಯ ಮುಂದೆ ಧ್ಯಾನ ಮಾಡುತ್ತಾ ಪ್ರಾರ್ಥನೆ ಮಾಡಿಕೊಂಡರೆ ದೇವಿ ಕಂಡಿತ ಭಕ್ತರ ಇಷ್ಟಾರ್ಥ ಈಡೇರಿಸುತ್ತಾಳೆ ಎಂಬ ನಂಬಿಕೆಯಿಂದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಸಹ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಧ್ಯಾನ ಮಾಡಿ ದೇವಿಯಲ್ಲಿ ಇಷ್ಟಾರ್ಥ ಸಿದ್ದಿಗಾಗಿ ಪ್ರಾರ್ಥನೆ ಮಾಡಿಕೊಂಡಿದ್ದಾರೆ. ತದನಂತರ ಮಾತನಾಡಿದ ಅವರು, ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Exit Polls – 5 ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್ ಸ್ವೀಪ್!